ಸಾರಾಂಶ
ಬರುವ ತಾಪಂ, ಜಿಪಂ ಚುನಾವಣೆಗಳಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆದಿಸಲು ಮುಖಂಡರು,ಕಾರ್ಯಕರ್ತರು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಕರೆ ನೀಡಿದರು.
ಕನ್ನಡಪ್ರಭ ವಾರ್ತೆ ಮಧುಗಿರಿ
ಬರುವ ತಾಪಂ, ಜಿಪಂ ಚುನಾವಣೆಗಳಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳನ್ನು ಗೆದಿಸಲು ಮುಖಂಡರು,ಕಾರ್ಯಕರ್ತರು ಮುತುವರ್ಜಿ ವಹಿಸಿ ಕೆಲಸ ಮಾಡಬೇಕು ಎಂದು ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಕರೆ ನೀಡಿದರು.ತಾಲೂಕಿನ ದೊಡ್ಡೇರಿಯಲ್ಲಿ 7 ಲಕ್ಷ ರು.ವೆಚ್ಚದಲ್ಲಿ ನಿರ್ಮಿಸಿರುವ ಸಹಕಾರ ಸಂಘದ ನೂತನ ಆಡಳಿತ ಮಂಡಳಿ ಕಟ್ಟಡವನ್ನು ಈಚೆಗೆ ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ತಾಪಂ, ಜಿಪಂ ಕ್ಷೇತ್ರಗಳಿಗೆ ಚುನಾವಣೆ ನಡೆಸಲು ಉದ್ದೇಶಿಸಿದ್ದು, ಈ ಚುನಾವಣೆಗಳಲ್ಲಿ ನಮ್ಮ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲ್ಲಬೇಕು. ಆ ನಿಟ್ಟಿನಲ್ಲಿ ಈಗಿನಿಂದಲೇ ಸಂಘಟಿತರಾಗಿ ಕೆಲಸ ಮಾಡಬೇಕು. ಕಸಾಪುರ ಸಹಕಾರ ಸಂಘದಲ್ಲಿ ರೈತರಿಗೆ, ಕೃಷಿಕರಿಗೆ ಹಾಗೂ ಕೂಲಿ ಕಾರ್ಮಿಕರಿಗೆ ಅತ್ಯಧಿಕ ಸಾಲ ನೀಡಿದ್ದು, ಸಹಕಾರ ಸಂಘಗಳು ರೈತರ ಜೀವನಾಡಿ, ಸಹಕಾರಿ ಕ್ಷೇತ್ರವು ಬಹಳಷ್ಟು ಬೆಳದಿದೆ. ಎಲ್ಲ ವರ್ಗದ ಜನರ ಆರ್ಥಿಕ ಜೀವನ ಮಟ್ಟ ಸುಧಾರಣೆಗೆ ಬೆನ್ನಲುಬಾಗಿ ನಿಂತಿವೆ. ದೊಡ್ಡೇರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಈಗಾಗಲೇ 10 ಕೋಟಿ ರು ಬಿಡುಗಡೆ ಮಾಡಲಾಗಿದೆ.ಫಲಾನುಭವಿಗಳು ಪಡೆದ ಸಾಲವನ್ನು ಉತ್ತಮ ರೀತಿ ಸದುಪಯೋಗ ಪಡಿಸಿಕೊಂಡು ಸಕಾಲಕ್ಕೆ ಮರು ಪಾವತಿ ಮಾಡಿ ಆರ್ಥಿಕವಾಗಿ ಸದೃಡರಾಗುವಂತೆ ಸಲಹೆ ನೀಡಿದರು.ಸಹಕಾರ ಸಚಿವ ಕೆ.ಎನ್.ರಾಜಣ್ಣ ಎತ್ತಿನ ಹೊಳೆ ನೋಜನೆ ನೀರನ್ನು ತಾಲೂಕಿನ ಎಲ್ಲ ಕೆರೆಗಳಿಗೆ ತುಂಬಿಸುವ ನಿಟ್ಟಿನಲ್ಲಿ ಅಭಿವೃದ್ಧಿ ಕಾಮಗಾರಿಗೆ ಸರ್ಕಾರದಿಂದ 285 ಕೋಟಿ ಬಿಡುಗಡೆ ಮಾಡಿಸಿದ್ದು,ಅತಿ ಶೀಘ್ರವಾಗಿ ಟೆಂಡರ್ ಕರೆದು ತ್ವರಿತವಾಗಿ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದ ಎಂದರು. ಡಿಸಿಸಿ ಬ್ಯಾಂಕ್ ನಿರ್ದೇಶಕ ಬಿ.ನಾಗೇಶ್‌ಬಾಬು,ಪುರಸಭೆ ಅಧ್ಯಕ್ಷ ಲಾಲಪೇಟೆ ಮಂಜುನಾಥ್,ಸಂಘದ ಅಧ್ಯಕ್ಷ ಡಿ.ಎನ್.ರಾಜಣ್ಣ,ಉಪಾಧ್ಯಕ್ಷ ಡಿ.ಎಲ್.ಮಹಾಲಿಂಗಯ್ಯ,ಡಿಸಿಸಿ ಬ್ಯಾಂಕ್ ವ್ಯವಸ್ಥಾಪಕ ರಾಮಕೃಷ್ಣಪ್ಪ ಸೇರಿದಂತೆ ಅನೇಖರು ಇದ್ದರು.