ಮೊಬೈಲ್ ಆ್ಯಪ್‌ಗೆ ಜಿಲ್ಲಾಧಿಕಾರಿ ಚಾಲನೆ

| Published : May 23 2025, 12:35 AM IST

ಸಾರಾಂಶ

ಸೋಶಿಯಲ್‌ ಆಡಿಟ್‌ ಮಾಡುವ ಸಂಬಂಧ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ವೆಂಕಟ್‌ ರಾಜಾ ಚಾಲನೆ ನೀಡಿದರು.

ಮಡಿಕೇರಿ: ಜಿಲ್ಲೆಯಲ್ಲಿರುವ ಸರ್ಕಾರಿ ಹಾಗೂ ಖಾಸಗಿ ಕಟ್ಟಡಗಳ ಸೋಶಿಯಲ್ ಆಡಿಟ್ ಮಾಡುವ ಸಂಬಂಧ ಕೊಡಗು ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಾಂಕೇತಿಕವಾಗಿ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಬುಧವಾರ ಚಾಲನೆ ನೀಡಿದರು.

ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಮಂತ್ರಾಲಯವು ಸುಗಮ್ಯ ಯಾತ್ರಾ ಕಾರ್ಯಕ್ರಮದಡಿ ಎಲ್ಲಾ ಸರ್ಕಾರಿ ಕಚೇರಿಗಳು, ಸಾರ್ವಜನಿಕ ಸ್ಥಳಗಳು, ಉದ್ಯಾನವನಗಳು, ಗ್ರಂಥಾಲಯಗಳು, ಪ್ರವಾಸಿತಾಣಗಳಲ್ಲಿ ಅಡೆತಡೆ ರಹಿತ ವಾತಾವರಣ ಒಳಗೊಂಡಿರುವ ಮಾಹಿತಿಯನ್ನು ಕಲೆಹಾಕಿ ವಿಶೇಷ ಚೇತನ ಸ್ನೇಹಿ ವಾತಾವರಣ ಇರುವ ಬಗ್ಗೆ ಸೋಶಿಯಲ್ ಆಡಿಟ್ ಮಾಡಲು ಎಸ್ ಟು ಎಕ್ಸಸ್ ಎಂಬ ಮೊಬೈಲ್ ಆ್ಯಪ್‌ನ್ನು ಅಭಿವೃದ್ಧಿ ಪಡಿಸಿದೆ.

ಈ ಸಂದರ್ಭ ಹೆಚ್ಚುವರಿ ಜಿಲ್ಲಾಧಿಕಾರಿ ಆರ್. ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ್ ನರ್ವಡೆ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಕೆ.ಜಿ.ವಿಮಲ, ಸ್ವಾಮಿ ವಿವೇಕಾನಂದ ಯೂತ್ ಮೂವ್ಮೆಂಟ್‌ನ ಕಾರ್ಯಕ್ರಮ ವ್ಯವಸ್ಥಾಪಕರಾದ ಅಂಕಾಚಾರಿ ಹಾಗೂ ಕಚೇರಿ ಸಿಬ್ಬಂದಿ ಹಾಜರಿದ್ದರು.