ಸಾರಾಂಶ
ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಹಂಚಿಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ.
ಬೆಳಗಾವಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಯೋಜನೆಯಡಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಹಂಚಿಕೆ ಮಾಡಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸ್ಪಷ್ಟಪಡಿಸಿದ್ದಾರೆ.
ಅಂಗನವಾಡಿ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರ ಮೊಬೈಲ್ ಕೊಟ್ಟಿದೆ ಎಂದು ಶಾಸಕ ಅಭಯ ಪಾಟೀಲ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅವರು, ಅಂಗನವಾಡಿ ಕಾರ್ಯಕರ್ತೆಯರಿಗೆ ಮೊಬೈಲ್ ಕೊಡಬೇಕು ಎನ್ನುವ ಬೇಡಿಕೆ 5 ವರ್ಷಗಳಿಂದ ಇತ್ತು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಭಾಗಿತ್ವದ ಫೋಷನ್ ಯೋಜನೆಯಡಿಯಲ್ಲಿ ಐದು ವರ್ಷದ ಬೇಡಿಕೆ ಈಡೇರಿಸಲಾಗಿದೆ. ಫೋಷನ್ ಯೋಜನೆಯಲ್ಲಿಶೇ. 60 ರಷ್ಟು ಕೇಂದ್ರ ಸರ್ಕಾರದ ಸಹಭಾಗಿತ್ವ ಶೇ.40 ರಷ್ಟು ರಾಜ್ಯ ಸರ್ಕಾರದ ಸಹಭಾಗಿತ್ವ ಇದೆ. ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ಹಂಚಿಕೆ ವಿಚಾರದಲ್ಲಿ ಕೇಂದ್ರ ಸರ್ಕಾರ ರಾಜ್ಯ ಸರ್ಕಾರದ ಮೇಲೆ ಕರುಣೆ ತೋರಿಲ್ಲ. ಇದು ಕೇಂದ್ರದ ವಿಶೇಷ ಅನುದಾನವೂ ಅಲ್ಲ. ಅಂಗನವಾಡಿ ಕಾರ್ಯಕರ್ತರಿಗೆ ಮೊಬೈಲ್ ಸಿಕ್ಕಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಕಾಳಜಿಯೇ ಕಾರಣ ಎಂದು ತಿಳಿಸಿದ್ದಾರೆ.