ಸಂಡೂರು: ರಾಜ್ಯದೆಲ್ಲೆಡೆ ಬುಧವಾರದಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭವಾಗಲಿರುವ ಹಿನ್ನೆಲೆಯಲ್ಲಿ ತಾಲೂಕಿನಲ್ಲಿಯ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯವನ್ನು ಹೋಗಲಾಡಿಸಲು ಮಂಗಳವಾರ ಎಲ್ಲ 11 ಕೇಂದ್ರಗಳಲ್ಲಿ ಅಂತಿಮ ಪರೀಕ್ಷಾ ಮಾದರಿಯಲ್ಲಿ ಅಣಕು ಪರೀಕ್ಷೆ ನಡೆಸಲಾಯಿತು.

ಈ ವರ್ಷ 3296 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ನೊಂದಾಯಿಸಿಕೊಂಡಿದ್ದು, ಮಂಗಳವಾರ ಅಣಕು ಪರೀಕ್ಷೆಗೆ 3144 ವಿದ್ಯಾರ್ಥಿಗಳು ಹಾಜರಾಗಿದ್ದರು. 152 ವಿದ್ಯಾರ್ಥಿಗಳು ಗೈರಾಗಿದ್ದರು.

ಅಂತಿಮ ಪರೀಕ್ಷೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸೋಮವಾರವೇ ಪರೀಕ್ಷಾ ಕೇಂದ್ರಗಳಲ್ಲಿ ನೋಂದಣಿ ಸಂಖ್ಯೆಗಳನ್ನು ಹಾಕಲಾಗಿತ್ತು. 11 ಪರೀಕ್ಷಾ ಕೇಂದ್ರಗಳು:

ಸಂಡೂರಿನಲ್ಲಿ ನಾಲ್ಕು, ಚೋರನೂರು ಸರ್ಕಾರಿ ಪ್ರೌಢ ಶಾಲೆ, ಚೋರನೂರು, ಮೆಟ್ರಿಕಿ, ಬಂಡ್ರಿ ಗ್ರಾಮಗಳಲ್ಲಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ತಲಾ ಒಂದು, ತೋರಣಗಲ್ಲು, ವಡ್ಡು ಹಾಗೂ ದೋಣಿಮಲೈನಲ್ಲಿನ ಸರ್ಕಾರಿ ಪ್ರೌಢ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ.

ಕ್ಷೇತ್ರ ಶಿಕ್ಷಣಾಧಿಕಾರಿ ಡಾ. ಐ.ಆರ್ ಅಕ್ಕಿಯವರು ಪರೀಕ್ಷಾ ಸಿದ್ಧತೆ ಕುರಿತು ಕನ್ನಡಪ್ರಭದೊಂದಿಗೆ ಮಾತನಾಡಿ, ವಿದ್ಯಾರ್ಥಿಗಳಲ್ಲಿನ ಪರೀಕ್ಷಾ ಭಯ ಹೋಗಲಾಡಿಸಲು ಮಂಗಳವಾರ ಅಣಕು ಪರೀಕ್ಷೆ ನಡೆಸಲಾಗಿದೆ. ಫಲಿತಾಂಶ ಸುಧಾರಣೆಗಾಗಿ ಮೂರು ರಾಜ್ಯಮಟ್ಟದ ಪೂರ್ವಸಿದ್ಧತಾ ಪರೀಕ್ಷೆಗಳನ್ನು, ತೆರೆದ ಪುಸ್ತಕ ಪರೀಕ್ಷೆ, ಸರಣಿ ಪರೀಕ್ಷೆ, ನಸುಕಿನಲ್ಲಿ ವಿದ್ಯಾರ್ಥಿಗಳ ಮನೆಗಳಿಗೆ ಭೇಟಿ ನೀಡಿ, ಮಾರ್ಗದರ್ಶನ ಮಾಡಲಾಗಿದೆ ಎಂದರು.


ಕಂಪ್ಲಿ: ಆರು ಕೇಂದ್ರಗಳಲ್ಲಿ ಪರೀಕ್ಷೆಎಸ್‌ಎಸ್‌ಎಲ್‌ಸಿ ಪರೀಕ್ಷೆ ಹಿನ್ನೆಲೆಯಲ್ಲಿ ಕಂಪ್ಲಿ ತಾಲೂಕಿನಲ್ಲಿ ಅಗತ್ಯ ಸಕಲ ಸಿದ್ಧತೆಗಳನ್ನು ಶಿಕ್ಷಣ ಇಲಾಖೆ ಕೈಗೊಂಡಿದೆ. ಪಟ್ಟಣದ ನಾಲ್ಕು ಒಳಗೊಂಡಂತೆ ತಾಲೂಕಿನಲ್ಲಿ ಒಟ್ಟು ಆರು ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕಂಪ್ಲಿಯ ಷಾಮಿಯಾಚಂದ್ ಸರ್ಕಾರಿ ಪ್ರೌಢಶಾಲೆಯ ಕೇಂದ್ರದಲ್ಲಿ 293 ವಿದ್ಯಾರ್ಥಿಗಳು, ಬಾಲಕಿಯರ ಸರ್ಕಾರಿ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ 333 ವಿದ್ಯಾರ್ಥಿಗಳು, ಓಡ್ಸೋ ಜಡೆಮ್ಮ ಗುರುಸಿದ್ದಯ್ಯ ಪ್ರೌಢಶಾಲೆಯ ಕೇಂದ್ರದಲ್ಲಿ 400 ವಿದ್ಯಾರ್ಥಿಗಳು ಹಾಗೂ ವಿಜಯನಗರ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ 391 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.ಇದೇ ರೀತಿಯಾಗಿ ಎಮ್ಮಿಗನೂರಿನ ಕೆಪಿಎಸ್ ಪರೀಕ್ಷಾ ಕೇಂದ್ರದಲ್ಲಿ 285, ಸುಗ್ಗೇನಹಳ್ಳಿ ವಿದ್ಯಾಭಾರತಿ ಪರೀಕ್ಷಾ ಕೇಂದ್ರದಲ್ಲಿ 408 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದಾರೆ. ಈ ಮೂಲಕ ತಾಲೂಕಿನಲ್ಲಿ ಒಟ್ಟು 2,110 ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಪರೀಕ್ಷೆ ಆರಂಭವಾಗುವ 10 ನಿಮಿಷಗಳ ಮುಂಚಿತವಾಗಿ ಪ್ರಶ್ನೆಪತ್ರಿಕೆ ವಿತರಣೆ ಮಾಡಲಾಗುತ್ತದೆ. ನಂತರ ಬೆಳಗ್ಗೆ 10.10ಕ್ಕೆ ಉತ್ತರ ಪತ್ರಿಕೆಗಳನ್ನು ನೀಡಲಾಗುತ್ತದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಂ. ಸಿದ್ದಲಿಂಗಮೂರ್ತಿ ತಿಳಿಸಿದ್ದಾರೆ.

ಕುರುಗೋಡು ತಾಲೂಕಲ್ಲಿ 1482 ವಿದ್ಯಾರ್ಥಿಗಳು

ಕುರುಗೋಡು: ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಮೂರ್ತಿ ತಿಳಿಸಿದ್ದಾರೆ.ಈ ಬಾರಿ ಪರೀಕ್ಷೆಗೆ 790 ಬಾಲಕರು 697 ಬಾಲಕಿಯರು ಸೇರಿದಂತೆ ಒಟ್ಟು 1482 ವಿದ್ಯಾರ್ಥಿಗಳು ಹಾಜರಾಗುವರು. 4 ಪರೀಕ್ಷಾ ಕೇಂದ್ರಗಳು: ಪಟ್ಟಣದ ಬಾಲಕರ ಸರ್ಕಾರಿ ಪ್ರೌಢಶಾಲೆ, ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ, ಸಸ್ಯಶ್ಯಾಮಲಾ ಪ್ರೌಢಶಾಲೆ, ಯರಂಗ್ಲಿಳಿ ಮೈಲಾರಲಿಂಗೇಶ್ವರ ಪ್ರೌಢಶಾಲೆಗಳಲ್ಲಿ, ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಈ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಮೂರ್ತಿ ಪ್ರತಿಕ್ರಿಯಿಸಿ, ಯಾವುದೇ ಪರೀಕ್ಷಾ ಅಕ್ರಮಗಳು ಜರುಗದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜೆರಾಕ್ಸ್ ಅಂಗಡಿಗಳನ್ನು ತೆರುವುಗೊಳಿಸಲಾಗಿದೆ. ಪೊಲೀಸ್ ಇಲಾಖೆಯಿಂದ ಸೂಕ್ತ ಬಿಗಿಭದ್ರತೆ ಮಾಡಲಾಗಿದೆ ಎಂದು ತಿಳಿಸಿದರು.ಕೊಟ್ಟೂರಲ್ಲಿ ಪರೀಕ್ಷೆಗೆ ಸಕಲ ಸಿದ್ದತೆ

ಕೊಟ್ಟೂರು: ಈ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷಗಳು ಮಾರ್ಚ್ 18ರಿಂದ ಆರಂಭಗೊಂಡು ಫೆಬ್ರವರಿ 2ನೇ ತಾರೀಖಿನ ವರೆಗೂ ನಡೆಯಲಿದ್ದು ಇದಕ್ಕೆಂದೇ ಕೊಟ್ಟೂರು ತಾಲೂಕಿನಲ್ಲಿ 7 ಕೇಂದ್ರಗಳನ್ನು ತೆರೆಯಲು ಎಲ್ಲ ಬಗೆಯ ಪೂರ್ವ ಸಿದ್ಧತೆ ಕ್ರಮಕೈಗೊಳ್ಳಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮೈಲೇಶ್ ಬೇವೂರು ತಿಳಿಸಿದರು.ಈ ಸಂಬಂಧ ಹೇಳಿಕೆ ನೀಡಿರುವ ಅವರು ತಾಲೂಕಿನ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಲೈವ್ ವೆಬ್ ಕಾಸ್ಟಿಂಗ್ ವ್ಯವಸ್ಥೆಯೊಂದಿಗೆ ಸೂಕ್ತ ಪೋಲೀಸ್ ಬಂದೋಬಸ್ತ್‌ ನಿಯೋಜಿಸಲಾಗುವುದು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಶುದ್ದ ಕುಡಿಯುವ ನೀರಿನ ವ್ಯವಸ್ಥೆ, ಆರೋಗ್ಯ ಸಹಾಯಕರನ್ನು ಪರೀಕ್ಷೆ ಸಂಬಂಧವಾಗಿ ನಿಯೋಜಿಸಲಾಗಿದೆ. ಭಯ ಮುಕ್ತ ಮತ್ತು ಸಂಭ್ರಮದಿಂದ ಪರೀಕ್ಷೆ ಬರೆಯಲು ಎಲ್ಲ ರೀತಿಯ ಸಿದ್ಧತೆ ಕೈಗೊಳ್ಳಲಾಗಿದೆ ಎಂದರುಕೊಟ್ಟೂರು ಪಟ್ಟಣದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜ್ (ಬಾಲಕರ), ಸರ್ಕಾರಿ ಬಾಲಕಿಯರ ಪ್ರೌಢಶಾಲೆ, ಗುರುದೇವ ಪ್ರೌಢ ಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದರೆ, ತಾಲೂಕಿನ ಉಜ್ಜಯನಿ ಜಗದ್ಗುರು ಸಿದ್ದೇಶ್ವರ ಪ್ರೌಢಶಾಲೆ, ನಿಂಬಳಗೇರಿ ಸರ್ಕಾರಿ ಪ್ರೌಢ ಶಾಲೆ, ತೂಲಹಳ್ಳಿಯ ತರಳಬಾಳು ಪ್ರೌಢ ಶಾಲೆ ಮತ್ತು ಕೋಗಳಿಯ ಕೆ.ಪಿ.ಎಸ್. ಶಾಲೆಯ ಕೊಠಡಿಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ .ಈ ಪರೀಕ್ಷಾ ಕೇಂದ್ರಗಳಲ್ಲಿ 1925 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದು, 1041 ಬಾಲಕಿಯರಿದ್ದರೆ, 884 ಬಾಲಕರು ಪರೀಕ್ಷೆ ಬರೆಯಲಿದ್ದಾರೆ ಎಂದು ತಿಳಿಸಿದರು.ಎಸ್ಸೆಸ್ಸೆಎಲ್ಸಿ ಪರೀಕ್ಷೆ ಸಿದ್ಧತೆ ಪೂರ್ಣ

ಹೂವಿನಹಡಗಲಿ: ಎಸ್ಸೆಸ್ಸೆಎಲ್ಸಿ ಪರೀಕ್ಷೆಗೆ ಶಾಲಾ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮಹೇಶ್ ವಿ. ಪೂಜಾರ್ ತಿಳಿಸಿದ್ದಾರೆ.ಈ ಕುರಿತು ಮಾಹಿತಿ ನೀಡಿರುವ ಅವರು, ಮಾರ್ಚ್ 18ರಿಂದ ಏಪ್ರಿಲ್ 2ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಈ ಬಾರಿ ಪರೀಕ್ಷೆಗೆ 1556 ಬಾಲಕರು, 1486 ಬಾಲಕಿಯರು ಸೇರಿದಂತೆ ಒಟ್ಟು 3042 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗುವರು ಎಂದರು.9 ಪರೀಕ್ಷಾ ಕೇಂದ್ರಗಳುಪಟ್ಟಣದ ಜಿಪಿಜಿ, ಎಸ್‌ಕೆಜಿಜಿ ಇಟಗಿ ಸರ್ಕಾರಿ ಪ್ರೌಢಶಾಲೆ, ಹೊಳಲು ಸರ್ಕಾರಿ ಪ್ರೌಢಶಾಲೆ, ಸರ್ಕಾರಿ ಪ್ರೌಢಶಾಲೆ ಪ್ರೌಢಶಾಲೆ ಹಿರೇಹಡಗಲಿ, ಸರ್ಕಾರಿ ಪ್ರೌಢಶಾಲೆ ಬೂದನೂರು, ಸರ್ಕಾರಿ ಪ್ರೌಢಶಾಲೆ ಉತ್ತಂಗಿ, ಸರ್ಕಾರಿ ಪ್ರೌಢಶಾಲೆ ನಾಗತಿ ಬಸಾಪುರ, ಎಂಎಂಜಿ ಸೊವೇನಹಳ್ಳಿ ಅನುದಾನಿತ ಪ್ರೌಢಶಾಲೆ, ಪ್ರೌಢಶಾಲೆಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಿಳಿಸಿದರು.ಮೂಲಭೂತ ಸೌಕರ್ಯವಿದ್ಯಾರ್ಥಿಗಳಿಗೆ ಕುಡಿಯುವ ಶುದ್ಧ ನೀರು, ಶೌಚಾಲಯ ಹಾಗೂ ಆರೋಗ್ಯ ವ್ಯವಸ್ಥೆ ಸೇರಿದಂತೆ ಇತರೆ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ. ಎಲ್ಲಿಯೂ ಯಾವ ತೊಂದರೆ ಉಂಟಾದಂತೆ ಕ್ರಮ ಕೈಗೊಳ್ಳಲಾಗಿದೆ ಎಂದರು.ವೆಬ್ ಕ್ಯಾಸ್ಟಿಂಗ್‌ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ವೆಬ್ ಕ್ಯಾಸ್ಟಿಂಗ್ ವ್ಯವಸ್ಥೆ ಇದ್ದು ಸಿಸಿ ಕ್ಯಾಮೆರಾ ಅಳವಡಿಸಲಾಗಿದೆ. 9 ಪರೀಕ್ಷಾ ಕೇಂದ್ರಗಳಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ, ವಿದ್ಯಾರ್ಥಿಗಳ ಆರೋಗ್ಯದ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ತುರ್ತು ಆರೋಗ್ಯ ತಪಾಸಣೆ ಸಹ ನಡೆಯಲಿದೆ ಎಂದು ತಿಳಿಸಿದರು.ಗ್ರಾಮೀಣ ವಿದ್ಯಾರ್ಥಿಗಳಿಗೆ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವತಿಯಿಂದ ಉಚಿತ ಬಸ್ ಸೌಲಭ್ಯ ಒದಗಿಸಲಾಗಿದೆ. ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಮುಕ್ತವಾಗಿ ಪರೀಕ್ಷೆ ಬರೆಯಲು ಮಂಡಳಿ ನಿಯಮಾನುಸಾರ ಸಕಲ ಸಿದ್ಧತೆ ಮಾಡಲಾಗಿದೆ ಎಂದು ಹೇಳಿದರು.