ನಾರಾಯಣಗೌಡ, ಕಲಾಗ್ರಾಮ, ಅರಸೀಕೆರೆ, Narayangowda, Kalagrama, Araseikereರಾಜ್ಯ ಸರ್ಕಾರದಿಂದ ಸುಮಾರು 10 ಎಕರೆ ಜಾಗವನ್ನು ನೀಡುವಂತೆ ಮನವಿ ಮಾಡಲಾಗಿದೆ. ಉಚಿತವಾಗಿ ಜಾಗ ನೀಡುವಂತೆ ಕೇಳಿಲ್ಲ. ಸರ್ಕಾರ ರಿಯಾಯಿತಿ ದರದಲ್ಲಿ ಜಾಗ ಒದಗಿಸಿದರೆ, ಅದರಲ್ಲಿ ವಿವಿಧ ಜಾನಪದ ಕಲೆಗಳು, ಹಾಡು, ನೃತ್ಯ ಹಾಗೂ ಕಲಾ ಪ್ರಕಾರಗಳ ತರಬೇತಿ ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು. ಕಲಾವಿದರು ಮತ್ತು ಮಕ್ಕಳಿಗೆ ವಸತಿ ಹಾಗೂ ಊಟದ ಸೌಲಭ್ಯವನ್ನೂ ಒದಗಿಸಿ, ಜಾನಪದ ಕಲೆಯನ್ನು ನೇರವಾಗಿ ಪರಿಚಯಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಕರವೇ ವತಿಯಿಂದ 130-80 ಅಳತೆಯ ಸ್ವಂತ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದರು.
ಕನ್ನಡಪ್ರಭ ವಾರ್ತೆ ಅರಸೀಕೆರೆ
ನಶಿಸುತ್ತಿರುವ ಜಾನಪದ ಕಲೆ, ಸಂಸ್ಕೃತಿ ಹಾಗೂ ಗ್ರಾಮೀಣ ಕಲಾ ಪರಂಪರೆಯನ್ನು ಮುಂದಿನ ಪೀಳಿಗೆಗೆ ಪರಿಚಯಿಸುವ ಉದ್ದೇಶದಿಂದ ರಾಜ್ಯದಲ್ಲಿ ಸುಮಾರು 10 ಎಕರೆ ಜಾಗದಲ್ಲಿ ₹ 30ರಿಂದ 40 ಕೋಟಿ ವೆಚ್ಚದಲ್ಲಿ ಮಾದರಿ ಜಾನಪದ ಕಲಾಗ್ರಾಮ ನಿರ್ಮಿಸುವ ಚಿಂತನೆ ಹೊಂದಲಾಗಿದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ತಿಳಿಸಿದರು.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಜಾನಪದ ಕಲೆಗಳ ಸಂರಕ್ಷಣೆ ಮತ್ತು ಪ್ರದರ್ಶನಕ್ಕೆ ಸಮರ್ಪಿತವಾದ ಕಲಾಗ್ರಾಮಗಳ ಸಂಖ್ಯೆ ವಿರಳವಾಗಿದೆ. ವ್ಯಕ್ತಿಗಿಂತ ಅವರು ಸಮಾಜಕ್ಕೆ ನೀಡಿದ ಕೊಡುಗೆ ಹಾಗೂ ಉಳಿಸಿಹೋದ ಸಾಂಸ್ಕೃತಿಕ ಪರಂಪರೆ ಮುಖ್ಯ. ಈ ಹಿನ್ನೆಲೆಯಲ್ಲಿ ಜಾನಪದ ಕಲೆಯ ಸಂರಕ್ಷಣೆಗಾಗಿ ಕಲಾಗ್ರಾಮ ನಿರ್ಮಿಸುವ ಉದ್ದೇಶ ಹೊಂದಲಾಗಿದೆ ಎಂದರು.ರಾಜ್ಯ ಸರ್ಕಾರದಿಂದ ಸುಮಾರು 10 ಎಕರೆ ಜಾಗವನ್ನು ನೀಡುವಂತೆ ಮನವಿ ಮಾಡಲಾಗಿದೆ. ಉಚಿತವಾಗಿ ಜಾಗ ನೀಡುವಂತೆ ಕೇಳಿಲ್ಲ. ಸರ್ಕಾರ ರಿಯಾಯಿತಿ ದರದಲ್ಲಿ ಜಾಗ ಒದಗಿಸಿದರೆ, ಅದರಲ್ಲಿ ವಿವಿಧ ಜಾನಪದ ಕಲೆಗಳು, ಹಾಡು, ನೃತ್ಯ ಹಾಗೂ ಕಲಾ ಪ್ರಕಾರಗಳ ತರಬೇತಿ ನೀಡುವ ವ್ಯವಸ್ಥೆ ಕಲ್ಪಿಸಲಾಗುವುದು. ಕಲಾವಿದರು ಮತ್ತು ಮಕ್ಕಳಿಗೆ ವಸತಿ ಹಾಗೂ ಊಟದ ಸೌಲಭ್ಯವನ್ನೂ ಒದಗಿಸಿ, ಜಾನಪದ ಕಲೆಯನ್ನು ನೇರವಾಗಿ ಪರಿಚಯಿಸುವ ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ ಕರವೇ ವತಿಯಿಂದ 130-80 ಅಳತೆಯ ಸ್ವಂತ ಕಟ್ಟಡ ನಿರ್ಮಾಣ ಕಾರ್ಯ ನಡೆಯುತ್ತಿದೆ. ರಾಜ್ಯದ ವಿವಿಧ ಜಿಲ್ಲೆಗಳಿಂದ ಆಗಮಿಸುವ ಜಿಲ್ಲಾಧ್ಯಕ್ಷರು ಹಾಗೂ ರಾಜ್ಯ ಪದಾಧಿಕಾರಿಗಳಿಗೆ ವಸತಿ ಮತ್ತು ಊಟದ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದರು.ಕಟ್ಟಡ ನಿರ್ಮಾಣ ಸೇರಿದಂತೆ ಸಂಘಟನೆಯ ವಿವಿಧ ಚಟುವಟಿಕೆಗಳಿಗೆ ಆರ್ಥಿಕ ಸಂಪನ್ಮೂಲ ಕ್ರೋಢೀಕರಿಸುವ ಸಲುವಾಗಿ ಸೆ.26ರಂದು ಹಾಸನದ ಕಲಾಭವನದಲ್ಲಿ ರಸಸಂಜೆ ಕಾರ್ಯಕ್ರಮ ಆಯೋಜಿಸಲಾಗಿದೆ. ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್ ನೇತೃತ್ವದಲ್ಲಿ ಸಂಜೆ 5 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದ್ದು, ರಾಜ್ಯದ 35 ಜಿಲ್ಲೆಗಳಲ್ಲಿಯೂ ಇದೇ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದು ತಿಳಿಸಿದರು.ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ ಅವರನ್ನು ಅಭಿನಂದಿಸಲಾಗುವುದು. ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಸಾಧನೆ ಮಾಡಿರುವ 10 ಮಂದಿಗೆ ‘ಕರ್ನಾಟಕ ಸಾರ್ವಭೌಮ’ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದರು.ಅರಸೀಕೆರೆಯಲ್ಲಿ ಮೂರು ದಿನಗಳ ‘ಅರಸೀ ಉತ್ಸವ’ ಆಯೋಜಿಸುವ ಕುರಿತು ಸಚಿವ ಕೆ.ಎಂ. ಶಿವಲಿಂಗೇಗೌಡ ಅವರು ಆಸಕ್ತಿ ವ್ಯಕ್ತಪಡಿಸಿದ್ದು, ಕಾರ್ಯಕ್ರಮಕ್ಕೆ ಜೊತೆಯಾಗುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಈಗಾಗಲೇ ಒಂದು ಸುತ್ತಿನ ಮಾತುಕತೆ ನಡೆದಿದ್ದು, ಸಚಿವರ ಸಾರಥ್ಯದಲ್ಲಿ ಸಮಿತಿ ರಚಿಸಿ ಅರಸೀಕೆರೆ ಇತಿಹಾಸದಲ್ಲೇ ಸ್ಮರಣೀಯವಾಗುವ ರೀತಿಯಲ್ಲಿ ಅದ್ಧೂರಿ ಉತ್ಸವ ಆಯೋಜಿಸಲು ಯೋಜಿಸಲಾಗಿದೆ ಎಂದು ನಾರಾಯಣಗೌಡ ಹೇಳಿದರು.ಈ ಸಂದರ್ಭದಲ್ಲಿ ಕರವೇ ಜಿಲ್ಲಾಧ್ಯಕ್ಷ ಸಿ.ಡಿ. ಮನುಕುಮಾರ್, ತಾಲೂಕು ಅಧ್ಯಕ್ಷ ಕಿರಣ್ ಕುಮಾರ್, ನಗರಾಧ್ಯಕ್ಷ ಸಂತೋಷ್ ಹಾಗೂ ಮುಖಂಡರಾದ ತುಳಸಿದಾಸ್, ಮಂಜುನಾಥ್, ರಘು ಮತ್ತಿತರರು ಉಪಸ್ಥಿತರಿದ್ದರು.