ದೇಶಕ್ಕೇ ಮಾದರಿ ರಾಜ್ಯ ಸರ್ಕಾರದ ಗ್ಯಾರಂಜಿ ಯೋಜನೆಗಳು

| Published : Mar 17 2024, 01:51 AM IST

ಸಾರಾಂಶ

ರಾಮನಗರ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಕೆ.ರಾಜು ಅಧಿಕಾರ ಸ್ವೀಕರಿಸಿದರು. ತಾಲೂಕು ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

ರಾಮನಗರ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಆವರಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾಧ್ಯಕ್ಷರಾಗಿ ಮಾಜಿ ಶಾಸಕ ಕೆ.ರಾಜು ಅಧಿಕಾರ ಸ್ವೀಕರಿಸಿದರು. ತಾಲೂಕು ಅಧ್ಯಕ್ಷರು ಹಾಗೂ ಸದಸ್ಯರು ಹಾಜರಿದ್ದರು.

ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ರಾಜು, ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳು ದೇಶದಲ್ಲಿ ಮಾದರಿಯಾಗಿದ್ದು, ಕರ್ನಾಟಕದಲ್ಲಿ ಉತ್ತಮ ರೀತಿಯಲ್ಲಿ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳನ್ನು ಜಿಲ್ಲೆಯ ಪ್ರತಿಯೊಬ್ಬರಿಗೂ ತಲುಪಿಸಲಾಗುತ್ತದೆ. ಜಿಲ್ಲೆಯಲ್ಲಿ ಗೃಹಲಕ್ಷ್ಮಿ ಯೋಜನೆಯ ಶೇ.90 ರಷ್ಟು ಅನುಷ್ಠಾನವಾಗಿದೆ. ಕೆಲವು ತಾಂತ್ರಿಕ ಸಮಸ್ಯೆಗಳಿಂದಾಗಿ ಬಾಕಿ ಉಳಿದವರಿಗೆ ಲಭ್ಯವಾಗಿಲ್ಲ. ಇವರಿಗೆ ಸರ್ಕಾರಿ ಸೌಲಭ್ಯ ತಲುಪುವಂತೆ ಕ್ರಮ ವಹಿಸಲಾಗುವುದು. ಗ್ಯಾರಂಟಿ ಯೋಜನೆಗಳಿಂದಾಗಿ ಕೂಲಿ ಕಾರ್ಮಿಕರ ಜೀವನ ಮಟ್ಟ ಸುಧಾರಣೆಯಾಗುತ್ತಿದೆ. ಜಿಲ್ಲೆಯ ಎಷ್ಟೋ ಮಂದಿಗೆ ಮಾಸಿಕ ವಿದ್ಯುತ್ ಬಿಲ್ ಕಟ್ಟಲು ಸಾಧ್ಯವಾಗುತ್ತಿರಲಿಲ್ಲ. ಉದ್ಯೋಗಕ್ಕೆಂದು ಇತರೆ ಕಡೆಗೆ ತೆರಳುತ್ತಿದ್ದ ಮಹಿಳೆಯರಿಗೆ ಶಕ್ತಿ ಯೋಜನೆಯಿಂದಾಗಿ ಅನುಕೂಲವಾಗಿದೆ. ಈ ತನಕ 3 ಕೋಟಿ ಮಹಿಳೆಯರು ಶಕ್ತಿ ಯೋಜನೆಯಡಿ ಸಾರಿಗೆ ಬಸ್ಸಿನಲ್ಲಿ ಸಂಚಾರ ಮಾಡಿದ್ದಾರೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 9 ತಿಂಗಳಾಗಿದೆ. ಸರ್ಕಾರ ಘೋಷಣೆ ಮಾಡಿರುವ ಐದು ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಲಾಗಿದೆ. ಇದರಿಂದ ಆರೋಗ್ಯ ಸುಧಾರಣೆ, ಮನೆಯ ಆರ್ಥಿಕ ಪರಿಸ್ಥಿತಿ ಸರಿದೂಗಿಸಿಕೊಳ್ಳಲು, ಮಕ್ಕಳ ವಿದ್ಯಾಭ್ಯಾಸಕ್ಕೂ ಅನುಕೂಲ ಆಗುತ್ತಿದೆ. ಗ್ಯಾರಂಟಿಯಿಂದ ಜನರು ತುಂಬಾ ಖುಷಿ ಆಗಿದ್ದಾರೆ. ಎಲ್ಲ ಜನರಿಗೂ ಯೋಜನೆ ತಲುಪಬೇಕು. ಉದ್ದೇಶದಿಂದ ಅನುಷ್ಠಾನ ಸಮಿತಿ ರಚನೆ ಮಾಡಿದ್ದಾರೆಂದರು. ಲೋಕಸಭಾ ಚುನಾವಣೆಯಲ್ಲಿ ಈ ಗ್ಯಾರಂಟಿ ಯೋಜನೆಗಳು ಕೈ ಹಿಡಿಯಲಿದೆ. ಜಿಲ್ಲೆಯ ಜನತೆಯು ಗ್ಯಾರಂಟಿ ಯೋಜನೆಗಳ ಪರವಾಗಿದ್ದಾರೆ ಎಂದು ಹೇಳಿದರು. ನಾನು ಕಾಂಗ್ರೆಸ್‌ಗೆ ಸೇರ್ಪಡೆಯಾದ ನಂತರ ಒಂದು ಚುನಾವಣೆ ಮಾಡಿದ್ದೇನೆ. ರಾಜಕಾರಣದಲ್ಲಿ ಸಣ್ಣ ದೊಡ್ಡ ಹುದ್ದೆ ಅನ್ನುವುದಿಲ್ಲ. ಬದ್ಧತೆಯಿಂದ ಕೆಲಸ ಮಾಡಬೇಕಿದೆ. ಪಕ್ಷದಲ್ಲಿ ನೂರಾರು ಕಾರ್ಯಕರ್ತರು ಸೇವೆ ಮಾಡಿದ್ದಾರೆ. ಅವರೆಲ್ಲರ ಜತೆಗೆ ನನ್ನನ್ನು ಗುರುತಿಸಿ ಅವಕಾಶ ನೀಡಿದ್ದಾರೆ. ಮಾಜಿ ಸಿಎಂ ಕುಮಾರಸ್ವಾಮಿಯವರು ಅಧಿಕಾರದಲ್ಲಿ ಇದ್ದಾಗ ಕಾರ್ಯಕರ್ತರಿಗೆ ಸಣ್ಣ ಅಧಿಕಾರವೂ ನೀಡಲಿಲ್ಲ. ಕಾಂಗ್ರೆಸ್ ಪಕ್ಷ ಸಾಮಾಜಿಕ ನ್ಯಾಯ ತತ್ವಕ್ಕೆ ಒತ್ತು ನೀಡುತ್ತದೆ. ಒಂದೇ ಸಮುದಾಯಕ್ಕೆ ಅಧಿಕಾರ ನೀಡಿದ್ಧಾರೆ ಎಂಬುದು ಇಲ್ಲ. ಮೊದಲ ಹಂತದಲ್ಲಿ ಬ್ಲಾಕ್ ಮಟ್ಟದಲ್ಲಿ ಕೆಲಸ ಮಾಡಿದವರಿಗೆ ಅಧಿಕಾರ ನೀಡಲಾಗಿದೆ. 20 ತಿಂಗಳ ನಂತರ ಉಳಿದ ಸಮುದಾಯಗಳಿಗೂ ಅವಕಾಶ ನೀಡಲಿದೆ ಎಂದು ಹೇಳಿದರು. ಪ್ರಾಧಿಕಾರದ ಉಪಾಧ್ಯಕ್ಷರಾದ ಕೆ.ಎಂ.ಮಹದೇಶ್ , ಶಿವಪ್ರಸಾದ್, ಸಿದ್ದೇಗೌಡ, ಶಂಕರ್, ರಾಮನಗರ ತಾಲೂಕು ಅಧ್ಯಕ್ಷ ವಿ.ಎಚ್.ರಾಜು, ಮಾಗಡಿ ತಾಲೂಕು ಅಧ್ಯಕ್ಷ ಕೆ.ಆರ್.ಶಿವಣ್ಣ, ಚನ್ನಪಟ್ಟಣ ತಾಲೂಕು ಅಧ್ಯಕ್ಷ ರಂಗನಾಥ ಹೊಂಗನೂರು, ಕನಕಪುರ ತಾಲೂಕು ಅಧ್ಯಕ್ಷ ಕೆ.ಎನ್ .ದಿಲೀಪ್, ಹಾರೋಹಳ್ಳಿ ತಾಲೂಕು ಅಧ್ಯಕ್ಷ ಕೆ.ಟಿ.ಶಿವಮಾದಯ್ಯ, ಸದಸ್ಯರಾದ ಕಾಳಮ್ಮ, ಆರ್.ಸ್ವಾಮಿ, ರಮೇಶ್ , ವನಜಾ, ಜಯಣ್ಣ, ಧನಲಕ್ಷ್ಮಿ, ಮುರಳಿ, ಚಿಕ್ಕಣ್ಣ, ಎಂ.ಮಹದೇವ್ ಹಾಜರಿದ್ದರು.

16ಕೆಆರ್ ಎಂಎನ್‌ 1.ಜೆಪಿಜಿ

ರಾಮನಗರ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕೆ.ರಾಜು ಅವರೊಂದಿಗೆ ಉಪಾಧ್ಯಕ್ಷರು, ತಾಲೂಕು ಅಧ್ಯಕ್ಷರು ಹಾಗೂ ಸದಸ್ಯರು ಇರುವುದು.