ಜಿಲ್ಲಾದ್ಯಂತ ಸಾಧಾರಣ ಮಳೆ: ಇಂದೂ ಶಾಲೆಗಳಿಗೆ ರಜೆ

| Published : Jun 13 2025, 06:42 AM IST

ಸಾರಾಂಶ

ಕೊಡಗು ಜಿಲ್ಲೆಯಾದ್ಯಂತ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಬಿಡುವು ನೀಡಿ ಮಳೆ ಸುರಿಯಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಕೊಡಗು ಜಿಲ್ಲೆಯಾದ್ಯಂತ ಗುರುವಾರ ಸಾಧಾರಣ ಮಳೆಯಾಗಿದೆ. ಜಿಲ್ಲಾ ಕೇಂದ್ರ ಮಡಿಕೇರಿ ಸೇರಿದಂತೆ ಹಲವು ಕಡೆ ಬಿಡುವು ನೀಡಿ ಮಳೆ ಸುರಿಯಿತು.

ಕೊಡಗು ಜಿಲ್ಲೆಯಲ್ಲಿ ರೆಡ್ ಅಲರ್ಟ್ ಇರುವ ಹಿನ್ನೆಲೆ ಶುಕ್ರವಾರ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ರಜೆ ನೀಡಲಾಗಿದೆ. ತೀಯ ಪಿಯು ಪರೀಕ್ಷೆ 3 ನಿಗದಿಯಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆ ಅವಧಿಯಲ್ಲಿ ಸರಾಸರಿ 7.49 ಮಿ.ಮೀ. ಮಳೆಯಾಗಿದೆ. ಮಡಿಕೇರಿ ತಾಲೂಕಿನಲ್ಲಿ 16.48 ಮಿ.ಮೀ, ವಿರಾಜಪೇಟೆ ತಾಲೂಕಿನಲ್ಲಿ 6.70 ಮಿ.ಮೀ. ಮಳೆಯಾಗಿದೆ. ಪೊನ್ನಂಪೇಟೆ ತಾಲೂಕಿನಲ್ಲಿ 2.95 ಮಿ.ಮೀ. ಮಳೆಯಾಗಿದೆ. ಸೋಮವಾರಪೇಟೆ ತಾಲೂಕಿನಲ್ಲಿ 5.40 ಮಿ.ಮೀ, ಕುಶಾಲನಗರ ತಾಲೂಕಿನಲ್ಲಿ ಮಳೆ 5.90 ಮಿ.ಮೀ. ಮಳೆಯಾಗಿದೆ.