ಸಾರಾಂಶ
ತಾಲೂಕಿನ ಮರಡಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿಗಳ ಹೊಸ ಕಟ್ಟಡ ಉದ್ಘಾಟನೆಯನ್ನು ಸಚಿವ ಡಿ ಸುಧಾಕರ್ ನೆರವೇರಿಸಿ ಮಾತನಾಡಿದರು.
ಹಿರಿಯೂರು: ಸರ್ಕಾರದ ದೃಢ ನಿರ್ಧಾರಗಳಿಂದ ಗ್ರಾಮೀಣ ಭಾಗದಲ್ಲಿಯೂ ಉತ್ತಮ ಶಿಕ್ಷಣ ದೊರೆಯುವಂತಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಹೇಳಿದರು.
ತಾಲೂಕಿನ ಮರಡಿಹಳ್ಳಿ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಯ ಪ್ರಾಥಮಿಕ ಮತ್ತು ಪ್ರೌಢಶಾಲಾ ತರಗತಿಗಳ ಹೊಸ ಕಟ್ಟಡ ಉದ್ಘಾಟನೆ, ಪ್ರೌಢಶಾಲೆ ಕೊಠಡಿಗಳ ದುರಸ್ಥಿ, ಅಡುಗೆಮನೆ ಮತ್ತು ಭೋಜನ ಶಾಲೆಯ ಶಂಕುಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿ ಅವರು ಮಾತನಾಡಿದರು. ಗ್ರಾಮದ ಶಾಲೆಯ ನೂತನ ಕಟ್ಟಡಗಳು ಮಕ್ಕಳಿಗೆ ಉತ್ತಮ ಶಿಕ್ಷಣದ ವಾತಾವರಣ ನಿರ್ಮಿಸಲು ಸಹಕಾರಿಯಾಗಲಿವೆ. ಈಗಾಗಲೇ ತಾಲೂಕಿನ ನೂರಾರು ಶಾಲೆಗಳ ದುರಸ್ಥಿ ಮತ್ತು ಕಟ್ಟಡಗಳ ನಿರ್ಮಾಣ ಕಾರ್ಯಕ್ಕೆ ಚಾಲನೆ ನೀಡಿದ್ದು, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ನಮ್ಮಸರ್ಕಾರವು ಸಹ ಶಿಕ್ಷಣಕ್ಕೆ ಉತ್ತೇಜನ ನೀಡಿ ಸಾವಿರಾರು ಕೋಟಿ ಅನುದಾನ ಒದಗಿಸುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿಯೂ ಆಧುನಿಕ ಶಿಕ್ಷಣ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ ಎಂದರು. ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿಎಂ ತಿಪ್ಪೇಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ನಗರಸಭೆ ಮಾಜಿ ಅಧ್ಯಕ್ಷ ಟಿ ಚಂದ್ರಶೇಖರ್ ಸೇರಿದಂತೆ ಶಾಲೆಯ ಶಿಕ್ಷಕರು, ಎಸ್ ಡಿ ಎಂಸಿ ಕಮಿಟಿಯವರು, ಪೋಷಕರು, ಸ್ಥಳೀಯ ಮುಖಂಡರು ಹಾಜರಿದ್ದರು.
;Resize=(128,128))
;Resize=(128,128))
;Resize=(128,128))
;Resize=(128,128))
;Resize=(128,128))