ಮೋದಿ 3ನೇ ಬಾರಿ ಪ್ರಧಾನಿ ಖಚಿತ: ಬಿ.ವೈ.ವಿಜಯೇಂದ್ರ

| Published : Jun 04 2024, 12:30 AM IST

ಸಾರಾಂಶ

ರಾಜ್ಯದಲ್ಲಿ ಬಿಜೆಪಿಯು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಜಯಸಾಧಿಸಲಿದೆ ಎಂದು ತಿಳಿಸಿದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಕೂಟ ಎಲ್ಲ 6 ಕ್ಷೇತ್ರದಲ್ಲಿ ಜಯಗಳಿಸಲಿದ್ದು, ಎಲ್ಲರ ನಿರೀಕ್ಷೆ ಮೀರಿ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಕನ್ನಡಪ್ರಭ ವಾರ್ತೆ ಶಿಕಾರಿಪುರ

ಲೋಕಸಭಾ ಚುನಾವಣೆಯ ಮತದಾನೋತ್ತರ ಸಮೀಕ್ಷೆಯಂತೆಯೇ ಕೇಂದ್ರದಲ್ಲಿ ಮತ್ತೆ ನರೇಂದ್ರ ಮೋದಿ ಪ್ರಧಾನಿಯಾಗುವುದು ಖಚಿತ. ಬಿಜೆಪಿ ಮಿತ್ರಪಕ್ಷ ಅತಿ ಹೆಚ್ಚಿನ ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಬಿಜೆಪಿ ರಾಜ್ಯಾಧ್ಯಕ್ಷ, ಶಾಸಕ ಬಿ.ವೈ.ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದರು.

ಸೋಮವಾರ ಪಟ್ಟಣದ ತಾಲೂಕು ಕಚೇರಿಯಲ್ಲಿನ ಮತಗಟ್ಟೆಯಲ್ಲಿ ನೈಋತ್ಯ ಪದವೀಧರ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಪತ್ನಿ ಪ್ರೇಮಾ ಜತೆ ಮತಚಲಾಯಿಸಿ ಮಾತನಾಡಿ ರಾಜ್ಯದಲ್ಲಿ ಬಿಜೆಪಿಯು ಅತಿ ಹೆಚ್ಚು ಕ್ಷೇತ್ರಗಳಲ್ಲಿ ಪಕ್ಷ ಜಯಸಾಧಿಸಲಿದೆ ಎಂದು ತಿಳಿಸಿದರು. ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಮಿತ್ರಕೂಟ ಎಲ್ಲ 6 ಕ್ಷೇತ್ರದಲ್ಲಿ ಜಯಗಳಿಸಲಿದ್ದು, ಎಲ್ಲರ ನಿರೀಕ್ಷೆ ಮೀರಿ ನೈಋತ್ಯ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರ ಮೊದಲ ಪ್ರಾಶಸ್ತ್ಯದ ಮತಗಳಲ್ಲಿ ಜಯಗಳಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು.

ಈ ವೇಳೆ ಎಂಎಡಿಬಿ ಮಾಜಿ ಅಧ್ಯಕ್ಷ ಗುರುಮೂರ್ತಿ, ಶ್ರವಣ, ಯುವ ಮೋರ್ಚಾ ಅಧ್ಯಕ್ಷ ವೀರಣ್ಣಗೌಡ ಮುಖಂಡ ಫಕೀರಪ್ಪ, ಪ್ರವೀಣಶೆಟ್ಟಿ,ರವೀಂದ್ರ ದೂಪದಹಳ್ಳಿ,ಪಾಲಾಕ್ಷಪ್ಪ, ಬೆಣ್ಣೆ ಪ್ರವೀಣ, ವಿನಯ್ ಸೇಬು ಮತ್ತಿತರರಿದ್ದರು.