ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚದಿಂದ ಸ್ಟೇಟ್ ಹೋಮ್‌ಗೆ ಕೊಡುಗೆ

| Published : Sep 18 2024, 01:54 AM IST

ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚದಿಂದ ಸ್ಟೇಟ್ ಹೋಮ್‌ಗೆ ಕೊಡುಗೆ
Share this Article
  • FB
  • TW
  • Linkdin
  • Email

ಸಾರಾಂಶ

ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತಮ್ಮ ಪೋಷಕರ ಸ್ಮರಣಾರ್ಥ ಮಹಿಳಾ ನಿಲಯಕ್ಕೆ ವಾಶಿಂಗ್ ಮೆಷೀನ್ ಹಸ್ತಾಂತರಿಸಿದರು. ಬಳಿಕ ಉಡುಪಿ ಮೂಡುಸಗ್ರಿಯ ಅಂಗನವಾಡಿ ಕೇಂದ್ರ ಮತ್ತು ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಪ್ರಯುಕ್ತ ಬಿಜೆಪಿ ಉಡುಪಿ ನಗರ ಮಹಿಳಾ ಮೋರ್ಚಾದ ವತಿಯಿಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಇಲ್ಲಿನ ನಿಟ್ಟೂರು ರಾಜ್ಯ ಮಹಿಳಾ ನಿಲಯಕ್ಕೆ ನಿತ್ಯೋಪಯೋಗಿ ವಸ್ತುಗಳನ್ನು ನೀಡಲಾಯಿತು.ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ತಮ್ಮ ಪೋಷಕರ ಸ್ಮರಣಾರ್ಥ ಮಹಿಳಾ ನಿಲಯಕ್ಕೆ ವಾಶಿಂಗ್ ಮೆಷೀನ್ ಹಸ್ತಾಂತರಿಸಿದರು. ಬಳಿಕ ಉಡುಪಿ ಮೂಡುಸಗ್ರಿಯ ಅಂಗನವಾಡಿ ಕೇಂದ್ರ ಮತ್ತು ಹಿ.ಪ್ರಾ. ಶಾಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿ ಹಂಚುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ರಶ್ಮಿತಾ ಬಿ. ಶೆಟ್ಟಿ, ಉಪಾಧ್ಯಕ್ಷೆ ದಯಾಶಿನಿ, ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ನಗರಸಭಾ ಸದಸ್ಯೆ ಭಾರತಿ ಪ್ರಶಾಂತ್, ನಗರ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸರೋಜಾ ಶೆಣೈ, ಕಾರ್ಯದರ್ಶಿ ಶಾಂತಿ ಮನೋಜ್, ಪ್ರಮುಖರಾದ ಮಾಯಾ ಕಾಮತ್, ಸುಜಾಲ ಸತೀಶ್, ಸುಧಾ ಪೈ, ಪೂರ್ಣಿಮಾ ರತ್ನಾಕರ್, ಸುಮಾ ನಾಯ್ಕ್, ದೀಪಾ ಪೈ, ಪ್ರೀತಿ ಹಾಗೂ ಶಿಕ್ಷಕರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಮಹಿಳಾ ಮೋರ್ಚಾದ ಸಮಿತಿ ಸದಸ್ಯರು ಉಪಸ್ಥಿತರಿದ್ದರು.