ಶಿರಸಿ ಅಂಚೆ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು.
ಕನ್ನಡಪ್ರಭ ವಾರ್ತೆ ಶಿರಸಿ
ರಾಜ್ಯಕ್ಕೆ ಅನ್ಯಾಯ ಮಾಡಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಲ್ಲಿ ಮತ ಕೇಳುವ ನೈತಿಕತೆ ಇಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಶನಿವಾರ ಮೋದಿ ಗೋ ಬ್ಯಾಕ್ ಪ್ರತಿಭಟನೆ ನಡೆಸಿದರು.ಇಲ್ಲಿಯ ಅಂಚೆ ವೃತ್ತದಲ್ಲಿ ಸೇರಿದ ಕಾಂಗ್ರೆಸ್ ಕಾರ್ಯಕರ್ತರು ನರೇಂದ್ರ ಮೋದಿ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆಯಲ್ಲಿ ಮಾತನಾಡಿದ ಕಾಂಗ್ರೆಸ್ ಪ್ರಮುಖ ರವೀಂದ್ರನಾಥ ನಾಯ್ಕ, ರಾಜ್ಯದಲ್ಲಿ ಬರ ಪರಿಸ್ಥಿತಿ ಇದೆ. ಆದರೆ, ಕೇಂದ್ರ ಸರ್ಕಾರಕ್ಕೆ ಆಗ ಇಲ್ಲಿಯವರ ಸ್ಥಿತಿ ಅರ್ಥವಾಗಿಲ್ಲ. ಈಗ ರಾಜ್ಯದಲ್ಲಿ ಮತ ಕೇಳುವ ನೈತಿಕತೆ ಬಿಜೆಪಿ ಹೊಂದಿಲ್ಲ ಎಂದರು.
ಅಬ್ಬಾಸ್ ತೋನ್ಸೆ ಮಾತನಾಡಿ, ಜಿಎಸ್‌ಟಿ ತೆರಿಗೆಯಲ್ಲಿ ರಾಜ್ಯದ ಪಾಲನ್ನು ನೀಡಲು ನರೇಂದ್ರ ಮೋದಿ ಆಸಕ್ತಿ ವಹಿಸಿಲ್ಲ. ಈಗ ಇಲ್ಲಿಯವರ ಮತ ಮಾತ್ರ ಅವರಿಗೆ ಬೇಕಿದೆ ಎಂದು ಆರೋಪಿಸಿದರು.ಪ್ರತಿಭಟನೆಯಲ್ಲಿ ಕಾಂಗ್ರೆಸ್ ಪ್ರಮುಖರಾದ ಜಗದೀಶ ಗೌಡ, ಪ್ರದೀಪ ಶೆಟ್ಟಿ, ಜ್ಯೋತಿ ಪಾಟೀಲ, ರಘು ಕಾನಡೆ ಮಹಾದೇವ ಚಲುವಾದಿ ಇತರರಿದ್ದರು.