ಸಾರಾಂಶ
ಪ್ರಧಾನಿ ಮೋದಿ ಆಡಳಿತ ಸರ್ವಾಧಿಕಾರಿ ಧೋರಣೆ ಹೊಂದಿದ್ದು, ಸಂವಿಧಾನ ಬದಲಾಯಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ ಎಂದು ಸಚಿವ ಮಂಕಾಳು ವೈದ್ಯ ಆರೋಪಿಸಿದರು.
ಹೊನ್ನಾವರ: ಹತ್ತು ವರ್ಷಗಳ ಕಾಲ ಕೇಂದ್ರದಲ್ಲಿ ಅಧಿಕಾರ ನಡೆಸಿದ ಮೋದಿ ಸರ್ಕಾರ ಕೇವಲ ಸುಳ್ಳು ಹೇಳಿ ಕಾಲಹರಣ ಮಾಡಿದ್ದು ಬಿಟ್ಟರೆ ಜನಪರ ಆಡಳಿತ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಉಸ್ತುವಾರಿ ಸಚಿವ ಮಂಕಾಳು ವೈದ್ಯ ಆರೋಪಿಸಿದರು.
ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಕಾರ್ಯಾಲಯದಲ್ಲಿ ಲೋಕಸಭಾ ಚುನಾವಣೆಯ ತಯಾರಿಯ ಕುರಿತಂತೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಪ್ರಧಾನಿ ಮೋದಿ ಆಡಳಿತ ಸರ್ವಾಧಿಕಾರಿ ಧೋರಣೆ ಹೊಂದಿದ್ದು, ಸಂವಿಧಾನ ಬದಲಾಯಿಸುವ ರಹಸ್ಯ ಕಾರ್ಯಸೂಚಿ ಹೊಂದಿದೆ. ಅಲ್ಲದೇ ಮೋದಿ ಪುನಃ ಅಧಿಕಾರಕ್ಕೆ ಬಂದರೆ ಮುಂದಿನ ದಿನದಲ್ಲಿ ದೇಶದಲ್ಲಿ ಯಾವುದೆ ಚುನಾವಣೆ ನಡೆಯುವುದರ ಕುರಿತಂತೆ ಅನುಮಾನ ವ್ಯಕ್ತಪಡಿಸಿದರು.ಉತ್ತರ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ, ಹೊನ್ನಾವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಪ್ ತೆಂಗೇರಿ, ರಾಜೀವಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ವಿನೋದ ನಾಯ್ಕ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಮಹೇಶ್, ಬಿಸಿಸಿ ಪ್ರಧಾನ ಕಾರ್ಯದರ್ಶಿ ಸುರೇಶ ಮೇಸ್ತ, ಇಂಟೆಕ್ ಪ್ರಧಾನ ಕಾರ್ಯದರ್ಶಿ ಕೇಶವ ಮೇಸ್ತ, ಸೇವಾದಳದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೃಷ್ಣ ಮಾರಿಮನೆ, ಮುಖಂಡರಾದ ನಿತ್ಯಾನಂದ ಪಾಲೇಕರ, ಹನೀಫ್ ಶೇಖ ಇನ್ನೂ ಮುಂತಾದವರು ಮಾತನಾಡಿದರು.
ಕೆಪಿಸಿಸಿ ಸದಸ್ಯ ಎಂ.ಎನ್. ಸುಬ್ರಮಣ್ಯ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ ನಾಯ್ಕ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಆರ್.ಎಚ್. ನಾಯ್ಕ, ಮಂಕಿ ಬಿಸಿಸಿ ಅಧ್ಯಕ್ಷ ಗೋವಿಂದ ನಾಯ್ಕ, ಕುಮಟಾ ಬಿಸಿಸಿ ಅಧ್ಯಕ್ಷ ಭುವನ್ ಭಾಗ್ವತ್, ಡಿಸಿಸಿ ಕಾರ್ಯದರ್ಶಿ ಬಾಲಚಂದ್ರ ನಾಯ್ಕ, ಬಿಸಿಸಿ ಶಿಕ್ಷಕರ ವಿಭಾಗದ ಅಧ್ಯಕ್ಷ ಡಾ. ಎಸ್.ಡಿ. ಹೆಗಡೆ ಇನ್ನೂ ಮುಂತಾದವರು ಉಪಸ್ಥಿತರಿದ್ದರು.ಸುಳ್ಳು ಹೇಳುವವರನ್ನು ಮನೆಗೆ ಕಳುಹಿಸಲು ಜನರ ತೀರ್ಮಾನ
ಮುಂಡಗೋಡ: ಸುಳ್ಳು ಹೇಳುವರನ್ನು ಮನೆಗೆ ಕಳುಹಿಸಲು ಜನರು ತೀರ್ಮಾನ ಮಾಡಿದ್ದಾರೆ. ಇದರಲ್ಲಿ ಯಾವುದೇ ಸಂಶಯವಿಲ್ಲ ಎಂದು ಬಿಜೆಪಿ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳು ವೈದ್ಯ ವಾಗ್ದಾಳಿ ನಡೆಸಿದರು.ಬುಧವಾರ ಸಂಜೆ ತಾಲೂಕಿನಾದ್ಯಂತ ಲೋಕಸಭಾ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ ಪರವಾಗಿ ಪ್ರಚಾರ ನಡೆಸಿ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದರು.ಬಿಜೆಪಿಯವರು ಸುಳ್ಳು ಹೇಳಿ ರಾಜಕಾರಣ ಮಾಡಿ ಗೆಲ್ಲುತ್ತ ಬಂದಿದ್ದಾರೆ. ಅದು ಈಗ ಎಲ್ಲರಿಗೂ ಅರ್ಥವಾಗಿದೆ. ಬಡವರು, ಸಾಮಾನ್ಯ ಜನರು ಬಿಜೆಪಿಯನ್ನು ತಿರಸ್ಕಾರ ಮಾಡಲು ಸಜ್ಜಾಗಿದ್ದು, ಕಾಂಗ್ರೆಸ್‌ಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ. ಬಿಜೆಪಿಯವರ ಧೋರಣೆಯಿಂದ ಜನತೆ ಬೇಸತ್ತಿದ್ದು, ರಾಜಕೀಯ ಮಾಡದವರು ಕೂಡ ರಾಜಕೀಯಕ್ಕಿಳಿದಿದ್ದು, ಅವರನ್ನು ಮನೆಗೆ ಕಳುಹಿಸಲು ಪಣ ತೊಟ್ಟಿದ್ದಾರೆ. ಇದರಿಂದ ಕಾಂಗ್ರೆಸ್ ಗೆಲುವು ನಿಶ್ಚಿತವಾಗಿದೆ. ಲಕ್ಷಕ್ಕೂ ಅಧಿಕ ಮತಗಳಿಂದ ಜಿಲ್ಲೆಯಲ್ಲಿ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ ಎಂದರು.ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಾಯಿ ಗಾಂವಕರ ಇದ್ದರು.