ಮೋದಿ ಪ್ರಮಾಣವಚನ: ಉಡುಪಿ ಜಿಲ್ಲಾ ಬಿಜೆಪಿ ಸಂಭ್ರಮಾಚರಣೆ

| Published : Jun 10 2024, 02:01 AM IST

ಸಾರಾಂಶ

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ನರೇಂದ್ರ ಮೋದಿ ಅವರು 3ನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭ ಉಡುಪಿ ಜಿಲ್ಲಾ ಬಿಜೆಪಿ ಮತ್ತು ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಹಣತೆಗಳನ್ನು ಹಚ್ಚಿ, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಲಾಯಿತು.

ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಮಾಣ ವಚನ ಕಾರ್ಯಕ್ರಮದ ನೇರ ಪ್ರಸಾರವನ್ನು ವೀಕ್ಷಿಸಲಾಯಿತು.

ಈ ಸಂದರ್ಭ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರ. ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ರೇಷ್ಮಾ ಉದಯ ಶೆಟ್ಟಿ, ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರ. ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಎಸ್. ಕುಂದರ್, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಉಡುಪಿ ನಗರಸಭೆ ಮಾಜಿ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ಪ್ರಮುಖರಾದ ಸುಜಾಲಾ ಸತೀಶ್, ನಳಿನಿ ಪ್ರದೀಪ್ ರಾವ್, ಭಾರತೀ ಚಂದ್ರಶೇಖರ್, ದಯಾಶಿನಿ, ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಆಸೀಫ್ ಕಟಪಾಡಿ, ಅಂಡಾರು ದೇವಿ ಪ್ರಸಾದ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.