ಚಿಕ್ಕಮಗಳೂರುಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಭಗವಂತನ ವರಪ್ರಸಾದವಾಗಿ ಬಂದು ಬಡವರ ಕಲ್ಯಾಣ, ದೇಶದ ಗೌರವ ಹಾಗೂ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಹೇಳಿದರು.

ಮೋದಿ ಜನ್ಮದಿನಕ್ಕೆ ಬಿಜೆಪಿ ಗ್ರಾಮಾಂತರ ಮಂಡಲದಿಂದ ಚಿಕ್ಕಗೌಜ ಗ್ರಾಮದಲ್ಲಿ ಸ್ವಚ್ಛತಾ ಅಭಿಯಾನಕನ್ನಡಪ್ರಭ ವಾರ್ತೆ ಚಿಕ್ಕಮಗಳೂರುಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ಭಗವಂತನ ವರಪ್ರಸಾದವಾಗಿ ಬಂದು ಬಡವರ ಕಲ್ಯಾಣ, ದೇಶದ ಗೌರವ ಹಾಗೂ ಅಭಿವೃದ್ಧಿಗಾಗಿ ನಿರಂತರವಾಗಿ ಶ್ರಮಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ ಹೇಳಿದರು.ಪ್ರಧಾನಿ ನರೇಂದ್ರ ಮೋದಿ ಜನ್ಮದಿನದ ಅಂಗವಾಗಿ ಬಿಜೆಪಿ ಗ್ರಾಮಾಂತರ ಮಂಡಲದಿಂದ ಚಿಕ್ಕಗೌಜ ಗ್ರಾಮದಲ್ಲಿ ಗುರು ವಾರ ಆಯೋಜಿಸಿದ್ದ ಸ್ವಚ್ಛತಾ ಅಭಿಯಾನದಲ್ಲಿ ಮಾತನಾಡಿ ಮೋದಿ ಅವರು ಮುಖ್ಯಮಂತ್ರಿ ಹಾಗೂ ಪ್ರಧಾನ ಮಂತ್ರಿಯಾಗಿ 25 ವರ್ಷಗಳ ಸಾರ್ವಜನಿಕ ಜೀವನ ಪೂರೈಸಿದ್ದಾರೆ. ಅಧಿಕಾರ ಅನುಭವಿಸುವ ಬದಲು ಪ್ರಧಾನ ಸೇವಕ ರಾಗಿ ಜನರಿಗೆ ಕೆಲಸ ಮಾಡುತ್ತಿದ್ದಾರೆ ಎಂದರು.ಜನ್‌ಧನ್ ಖಾತೆಗಳ ಮೂಲಕ ಬಡವರನ್ನು ಬ್ಯಾಂಕಿಂಗ್ ವ್ಯವಸ್ಥೆಗೆ ಜೋಡಿಸಲಾಗಿದೆ. ಕಿಸಾನ್ ಸಮ್ಮಾನ್ ಯೋಜನೆಯಡಿ ರೈತರ ಖಾತೆಗಳಿಗೆ ವಾರ್ಷಿಕ ₹6 ಸಾವಿರ ನೀಡಲಾಗುತ್ತಿದೆ. ಉಜ್ವಲ ಯೋಜನೆಯಡಿ ಬಡವರ ಮನೆಗಳಿಗೆ ಅಡುಗೆ ಅನಿಲ, ಗ್ರಾಮೀಣ ಪ್ರದೇಶಗಳಿಗೆ ವಿದ್ಯುತ್ ಹಾಗೂ ಜಲಜೀವನ್ ಮಿಷನ್ ಮೂಲಕ ನಲ್ಲಿ ಸಂಪರ್ಕ ಕಲ್ಪಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿಸಿದರು.1,281 ಕೋಟಿ ಯೋಜನೆಯಿಂದ ಕೆರೆಗಳಿಗೆ ನೀರು:ಭದ್ರಾ ನದಿಯಿಂದ ತರೀಕೆರೆ, ಕಡೂರು ಹಾಗೂ ಚಿಕ್ಕಮಗಳೂರು ಭಾಗದ ಕೆರೆಗಳನ್ನು ತುಂಬಿಸುವ ₹1,281 ಕೋಟಿ ವೆಚ್ಚದ ಯೋಜನೆ ಜಾರಿಯಲ್ಲಿದೆ. ಚಂದ್ರಕಟ್ಟೆ, ಚಿಕ್ಕಗೌಜ, ದಾಸರಹಳ್ಳಿ, ಮಾದರಸನ ಕೆರೆ, ಲಕ್ಯಾ ಕೆರೆ, ಹಳೆ ಲಕ್ಯಾ ಕೆರೆ ಹಾಗೂ ದೇವರಹಳ್ಳಿ ಸೇರಿದಂತೆ ಹಲವು ಕೆರೆಗಳು ಯೋಜನೆ ವ್ಯಾಪ್ತಿಗೆ ಒಳಪಡಲಿವೆ. ಕೆರೆಗಳು ತುಂಬಿದರೆ ಕೃಷಿ ಚಟು ವಟಿಕೆಗಳಿಗೆ ಅನುಕೂಲ ಎಂದರು.ಮೋದಿ ಜನ್ಮದಿನವನ್ನು ಸೇವಾ ಕಾರ್ಯಗಳ ಮೂಲಕ ಆಚರಿಸುವ ಉದ್ದೇಶದಿಂದ ಅ.17ರವರೆಗೆ ಸೇವಾ ಸಂಕಲ್ಪ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಇದರ ಅಂಗವಾಗಿ ಚಿಕ್ಕಗೌಜ ಗ್ರಾಮದಲ್ಲಿ ಕನಕದಾಸರ ಪ್ರತಿಮೆ, ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆ ಹಾಗೂ ದೇವಾಲಯದ ಆವರಣ ಸ್ವಚ್ಛಗೊಳಿಸಲಾಯಿತು. ಜನರ ನಡುವೆ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು.ಮೋದಿ ಪ್ರಧಾನಿಯಾದ ಬಳಿಕ ಜಗತ್ತಿನಲ್ಲಿ ಭಾರತದ ಗೌರವ ಹೆಚ್ಚಾಗಿದೆ. ದೇಶದ ಆರ್ಥಿಕ ಶಕ್ತಿ 4ನೇ ಸ್ಥಾನಕ್ಕೆ ಬಂದಿದೆ ಎಂದು ರವಿ ಸಿ.ಟಿ. ಹೇಳಿದರು.ದೀಪ ಹಚ್ಚಿ ಪ್ರಾರ್ಥನೆಗೆ ಮನವಿಮೋದಿ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಸಂಜೆ 6ರಿಂದ 7 ಗಂಟೆಯೊಳಗೆ ಪ್ರತಿಯೊಬ್ಬರೂ ತಮ್ಮ ಮನೆಗಳಲ್ಲಿ ದೀಪ ಹಚ್ಚಿ ಪ್ರಧಾನಿಯವರಿಗಾಗಿ ಪ್ರಾರ್ಥಿಸಬೇಕು. 2047ರ ವೇಳೆಗೆ ಬಡತನ ನಿರ್ಮೂಲನೆ, ಶಿಕ್ಷಣ, ಸ್ವಾವಲಂಬನೆ ಹಾಗೂ ಸ್ವಾಭಿ ಮಾನದ ಭಾರತ ನಿರ್ಮಾಣಕ್ಕಾಗಿ ಪ್ರತಿಯೊಬ್ಬರೂ ಸಂಕಲ್ಪ ಮಾಡಬೇಕು ಎಂದು ಕರೆ ನೀಡಿದರು.

ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ವಿಜಯಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಎಚ್.ಪಿ. ರಾಜೀವ, ಪ್ರಕಾಶ್ ಬಿ.ಎಲ್., ದಿಲೀಪ್ ಹುಲಿಕೆರೆ, ಜಿಲ್ಲಾ ಎಸ್.ಟಿ. ಮೋರ್ಚಾ ಅಧ್ಯಕ್ಷ ನಂದೀಶ್ ಮದಕರಿ, ಲಕ್ಯಾ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಸದಾಶಿವ, ಸಖರಾಯಪಟ್ಟಣ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ನಾಗೇಗೌಡ, ಹಿರಿಯ ಮುಖಂಡರಾದ ನಿಂಗೇಗೌಡ್ರು, ಮಾಸ್ತೇಗೌಡ್ರು, ಸುರೇಶ್ ಸೇರಿದಂತೆ ಆಶಾ ಹಾಗೂ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.