ಸಾರಾಂಶ
ಈ ದೇಶ ಕಂಡ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಅಗ್ರಗಣ್ಯರಾಗಿದ್ದಾರೆ.
ಕನ್ನಡಪ್ರಭ ವಾರ್ತೆ ಯಲಬುರ್ಗಾ
ಈ ದೇಶ ಕಂಡ ಪ್ರಧಾನಿಗಳಲ್ಲಿ ನರೇಂದ್ರ ಮೋದಿಯವರು ಅಗ್ರಗಣ್ಯರಾಗಿದ್ದಾರೆ ಎಂದು ಮಾಜಿ ಸಚಿವ ಹಾಲಪ್ಪ ಆಚಾರ ಹೇಳಿದರು.ತಾಲೂಕಿನ ಗೆದಗೇರಿ ಗ್ರಾಮದಲ್ಲಿ ತಾಲೂಕು ಬಿಜೆಪಿ ವತಿಯಿಂದ ಕೊಪ್ಪಳ ಲೋಕಸಭಾ ಚುನಾವಣೆ ಪ್ರಚಾರ ನಿಮಿತ್ತ ಆಯೋಜಿಸಿದ್ದ ಮಹಾಶಕ್ತಿ ಕೇಂದ್ರದ ಬಹಿರಂಗ ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಮೋದಿಯವರ ಜನಪರ ಆಡಳಿತವನ್ನು ಇಡೀ ದೇಶದ ಜನತೆಯೇ ಮೆಚ್ಚುಕೊಂಡು ಅವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಬೇಕೆನ್ನುವ ಸಂಕಲ್ಪ ಮಾಡಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಹತ್ತು ವರ್ಷಗಳ ಅಧಿಕಾರವಧಿಯಲ್ಲಿ ರೈಲ್ವೆ ಯೋಜನೆಗಳು, ರಾಷ್ಟ್ರೀಯ ಹೆದ್ದಾರಿ, ನದಿ ಜೋಡಣೆ ಹಾಗೂ ಆಯುಷ್ಮಾನ, ರೈತರಿಗೆ ಕೃಷಿ ಸಮ್ಮಾನ ಯೋಜನೆ ಸೇರಿದಂತೆ ಹಲವಾರು ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸುರಕ್ಷಿತ, ಸುಭದ್ರ ಆಡಳಿತ ನೀಡಿದ್ದಾರೆ. ಇದನ್ನು ಸಹಿಸಿಕೊಳ್ಳಲಾಗದ ಕಾಂಗ್ರೆಸ್ಸಿಗರು ಸೋಲಿನ ಭೀತಿಯಿಂದ ಹತಾಶೆರಾಗಿ ಕೇಂದ್ರ ಸರ್ಕಾರದ ವಿರುದ್ದ ಅಪಪ್ರಚಾರ ಮಾಡುತ್ತಿದ್ದಾರೆ. ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಬಸವರಾಜ ಕ್ಯಾವಟೂರ್ ಹೆಚ್ಚಿನ ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆಂದು ವಿಶ್ವಾಸ ವ್ಯಕ್ತಪಡಿಸಿದರು.ಕೊಪ್ಪಳ ಲೋಕಸಭಾ ಬಿಜೆಪಿ ಕ್ಷೇತ್ರದ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟೂರ್, ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ್, ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ, ಜಿಪಂ ಮಾಜಿ ಸದಸ್ಯ ಅರವಿಂದಗೌಡ ಪಾಟೀಲ, ಜೆಡಿಎಸ್ ಜಿಲ್ಲಾ ವಕ್ತಾರ ಮಲ್ಲನಗೌಡ ಕೋನನಗೌಡ ಮಾತನಾಡಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕಾಧ್ಯಕ್ಷ ಮಾರುತಿ ಗಾವರಾಳ, ಜಿಪಂ ಮಾಜಿ ಉಪಾಧ್ಯಕ್ಷ ಶಿವಶಂಕರರಾವ್ ದೇಸಾಯಿ, ಜೆಡಿಎಸ್ ತಾಲೂಕಾಧ್ಯಕ್ಷ ಬಸವರಾಜ ಗುಳಗುಳಿ, ಬಸವರಾಜ ಗೌರಾ, ಕಳಕಪ್ಪ ಕಂಬಳಿ, ಸಿ.ಎಚ್. ಪಾಟೀಲ, ರತನ್ ದೇಸಾಯಿ, ಶಂಕರಗೌಡ ಗೆದಗೇರಿ, ಅಯ್ಯನಗೌಡ ಕೆಂಚಮ್ಮನವರ್, ಶರಣಪ್ಪ ರಾಂಪೂರ, ಶ್ರೀನಿವಾಸ ತಿಮ್ಮಾಪೂರ, ಅಮರೇಶ ಹುಬ್ಬಳ್ಳಿ, ಶಂಕ್ರಪ್ಪ ಸುರಪೂರ, ಶಿವಣ್ಣ ವಾದಿ, ಶರಣಪ್ಪ ಇಳಗೇರ, ಎಸ್.ಎನ್. ಶ್ಯಾಗೋಟಿ, ಪ್ರಭುರಾಜ ಕಲಬುರ್ಗಿ, ಹನುಮಪ್ಪ ಹನುಮಾಪೂರ, ರುದ್ರಪ್ಪ ನಡುವಲಮನಿ ಮತ್ತಿತರರು ಇದ್ದರು.