ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಜಾತಿಗಣತಿ ದೇಶಕ್ಕೇ ಮಾದರಿ: ರೂಪಾಲಿ ಎಸ್.ನಾಯ್ಕ

| Published : Aug 12 2025, 12:30 AM IST

ಮೋದಿ ನೇತೃತ್ವದಲ್ಲಿ ನಡೆಯುತ್ತಿರುವ ಜಾತಿಗಣತಿ ದೇಶಕ್ಕೇ ಮಾದರಿ: ರೂಪಾಲಿ ಎಸ್.ನಾಯ್ಕ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಇಡಿ ದೇಶಕ್ಕೆ ಮಾದರಿಯಾಗಿದೆ.

ಕಾರವಾರ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಇಡಿ ದೇಶಕ್ಕೆ ಮಾದರಿಯಾಗಿದೆ. ಆ.17ರಂದು ಕಾರವಾರದಲ್ಲಿ ನಡೆಯಲಿರುವ ಜಾತಿಗಣತಿ ಕುರಿತಾದ ಸಭೆಯಲ್ಲಿ ಪ್ರತಿ ಸಮಾಜದ ಗಣ್ಯರು ಪಾಲ್ಗೊಳ್ಳುವಂತಾಗಬೇಕೆಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ರೂಪಾಲಿ ಎಸ್.ನಾಯ್ಕ ವಿನಂತಿಸಿದರು.

ನಗರದ ಪಕ್ಷದ ಕಚೇರಿಯಲ್ಲಿ ಭಾರತೀಯ ಜನತಾ ಪಾರ್ಟಿಯ ಗ್ರಾಮೀಣ ಹಾಗೂ ನಗರ ಘಟಕದಿಂದ ಆಯೋಜಿಸಿದ್ದ ಜಾತಿ ಗಣತಿಯ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಕೇಂದ್ರ ಸರ್ಕಾರ ನಡೆಸುತ್ತಿರುವ ಜಾತಿ ಗಣತಿಯಲ್ಲಿ ಅವಕಾಶ ವಂಚಿತ ಸಮಾಜಕ್ಕೆ ನ್ಯಾಯ ದೊರೆಯಲಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ದೊರಕಿಸಿಕೊಡುವುದು ಇದರ ಹಿಂದಿದೆ. ಇದೊಂದು ದೇಶಕ್ಕೆ ಮಾದರಿಯಾಗಿದೆ. ಈ ಜಾತಿ ಗಣತಿ ಐತಿಹಾಸಿಕವಾದುದು ಎಂದು ಹೇಳಿದರು.

ಕೇಂದ್ರ ಸರ್ಕಾರ ಜಾತಿ ಗಣತಿಗೆ ಮುಂದಾದಾಗ ರಾಜ್ಯದ ಕಾಂಗ್ರೆಸ್ ಸರ್ಕಾರ ಜಾತಿ ಗಣತಿಯ ನಾಟಕವಾಡುತ್ತಿದೆ. ಹೇಳೋದಿಲ್ಲ. ಕೇಳೋದಿಲ್ಲ. ಮನೆಯ ಎದುರು ಸ್ಟಿಕ್ಕರ್ ಅಂಟಿಸಿ ಹೋಗುತ್ತಿದ್ದಾರೆ. ಮುಖ್ಯಮಂತ್ರಿ ತಮ್ಮ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿಯ ಗಿಮಿಕ್ ನಡೆಸುತ್ತಿದ್ದಾರೆ ಎಂದು ರೂಪಾಲಿ ನಾಯ್ಕ ವ್ಯಂಗ್ಯವಾಡಿದರು.

ಭಾರತ ಮಾತೆಗೆ ಪುಷ್ಪ ನಮನ ಸಲ್ಲಿಸಿ ಚಾಲನೆ ನೀಡಲಾಯಿತು. ಪ್ರಾಸ್ತಾವಿಕ ಮಾತನಾಡಿದ ನಿಕಟಪಪೂರ್ವ ಜಿಲ್ಲಾ ಅಧ್ಯಕ್ಷ ವೆಂಕಟೇಶ್ ನಾಯಕ, ಪ್ರಧಾನಿ ನರೇಂದ್ರ ಮೋದಿ ಕನಸು ನನಸಾಗಲಿ. ಆ ನಿಟ್ಟಿನಲ್ಲಿ ಪ್ರತಿ ಕಾರ್ಯಕರ್ತರು ಕಾರ್ಯ ಪ್ರವೃತ್ತರಾಗಬೇಕು ಎಂದರು.

ವಿಭಿಷನ್ ವಿಭಿಶಕ್ ಜಿಲ್ಲಾ ಸಂಚಾಲಕ ಎಂ.ಜಿ. ಭಟ್ ಕಾರ್ಯಕ್ರಮದ ವಿಶೇಷತೆ ಬಗ್ಗೆ ವಿವರಿಸಿದರು.

ಗ್ರಾಮೀಣ ಮಂಡಲ ಅಧ್ಯಕ್ಷ ಸುಭಾಷ್ ಗುನಗಿ, ನಗರ ಮಂಡಲ ಅಧ್ಯಕ್ಷ ನಾಗೇಶ್ ಕುರ್ಡೇಕರ್ ಕಾರ್ಯಕ್ರಮದ ರೂಪುರೇಷೆ ಬಗ್ಗೆ ತಿಳಿಸಿದರು.

ಗ್ರಾಮೀಣ ಪ್ರಭಾರ ಗಜಾನನ ಗುನಗಾ, ನಗರ ಮಂಡಲ ಪ್ರಭಾರಿ ರಾಜು ಭಂಡಾರಿ, ರಾಜ್ಯ ಪ್ರಕೋಸ್ಟದ ಸುನಿಲ್ ಸೋನಿ, ಮಾಧ್ಯಮ ಸಹ ಸಂಚಾಲಕ ಕಿಶನ್ ಕಾಂಬ್ಳೆ, ನಗರಸಭೆ ಅಧ್ಯಕ್ಷ ರವಿರಾಜ್ ಅಂಕೋಲೆಕರ್, ನಾಗರಾಜ್ ನಾಯಕ, ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಸೂರಜ್ ದೇಸಾಯಿ, ನಗರ ಪ್ರಧಾನ ಕಾರ್ಯದರ್ಶಿ, ದೇವಿದಾಸ್ ಕಂತ್ರಿಕರ್, ಯುವ ನಾಯಕ ಪರ್ಭತ್ ನಾಯ್ಕ್ ಉಪಸ್ಥಿತರಿದ್ದರು.

ಗ್ರಾಮೀಣ ಪ್ರಧಾನ ಕಾರ್ಯದರ್ಶಿ ಉದಯ ನಾಯ್ಕ್ ಸ್ವಾಗತಿಸಿದರು. ನಗರ ಪ್ರಧಾನ ಕಾರ್ಯದರ್ಶಿ ಅಶೋಕ ಗೌಡ ವಂದಿಸಿದರು. ಬಿಜೆಪಿಯ ಪ್ರಮುಖರು, ಪದಾಧಿಕಾರಿಗಳು, ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.

ಆಗಸ್ಟ್ 17 ರಂದು ಕಾರವಾರದ ಪಾರ್ವತಿ ಶಂಕರ ಹಾಲ್ ನಲ್ಲಿ ನಡೆಯಲಿರುವ ಜಾತಿ ಗಣತಿ ಕುರಿತಾದ ಸಭೆಯಲ್ಲಿ ಸಂಸದರಾದ ವಿಶ್ವೇಶ್ವರ ಹೆಗಡೆ ಕಾಗೇರಿ, ಕೋಟ ಶ್ರೀನಿವಾಸ ಪೂಜಾರಿ, ಯದುವೀರ ಒಡೆಯರ್, ಬಿಜೆಪಿ ರಾಜ್ಯ ಉಪಾಧ್ಯಕ್ಷ ಹರತಾಳ ಹಾಲಪ್ಪ, ಆರ್‌ಎಸ್‌ಎಸ್ ಗಣ್ಯರು, ಮತ್ತಿತರ ಗಣ್ಯರು ಪಾಲ್ಗೊಳ್ಳಲಿದ್ದಾರೆ.