ನಾರಿ ಶಕ್ತಿಯನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ್ದು ಮೋದಿ

| Published : Mar 25 2024, 12:46 AM IST

ನಾರಿ ಶಕ್ತಿಯನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ್ದು ಮೋದಿ
Share this Article
  • FB
  • TW
  • Linkdin
  • Email

ಸಾರಾಂಶ

ದೇಶದಲ್ಲಿ ಶೇ.೫೦ಕ್ಕಿಂತ ಹೆಚ್ವು ಇರುವ ಮಹಿಳಾ ಶಕ್ತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ೩೦೦ ಕ್ಕೂ ಹೆಚ್ಚು ಯೋಜನೆ ಗಳನ್ನು ನೀಡಿ ಅವರನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲುತ್ತದೆ ಎಂದು ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಮಂಜುಳ ಹೇಳಿದರು.

ಕನ್ನಡಪ್ರಭ ವಾರ್ತೆ ಚಾಮರಾಜನಗರದೇಶದಲ್ಲಿ ಶೇ.೫೦ಕ್ಕಿಂತ ಹೆಚ್ವು ಇರುವ ಮಹಿಳಾ ಶಕ್ತಿಯನ್ನು ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ೩೦೦ ಕ್ಕೂ ಹೆಚ್ಚು ಯೋಜನೆ ಗಳನ್ನು ನೀಡಿ ಅವರನ್ನು ರಾಷ್ಟ್ರೀಯ ಶಕ್ತಿಯನ್ನಾಗಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಗೆ ಸಲ್ಲುತ್ತದೆ ಎಂದು ಮಹಿಳಾ ಮೋರ್ಚಾದ ರಾಜ್ಯಾಧ್ಯಕ್ಷೆ ಮಂಜುಳ ಹೇಳಿದರು.

ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಹಿಳಾ ಮೋರ್ಚಾದ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿ, ಕಳೆದ ೧೦ ವರ್ಷಗಳ ಹಿಂದೆ ಅಧಿಕಾರ ಬಂದ ಪ್ರಧಾನಿ ಮೋದಿ ಅವರು ಮಹಿಳೆಯರ ಸಬಲೀಕರಣಕ್ಕಾಗಿ ಜಾರಿಗೆ ತಂದ ಯೋಜನೆಗಳಿಂದ ಇಂದು ದೇಶದ ಕೋಟ್ಯಾಂತರ ಮಹಿಳೆಯರು ಸ್ವಾಭಿಮಾನದ ಬದುಕು ಕಟ್ಟಿಕೊಂಡಿದ್ದಾರೆ. ಇಂತಹ ಯೋಜನೆಗಳನ್ನು ಜಾರಿ ಮಾಡಿ ವಿಶ್ವಖ್ಯಾತಿ ಹೊಂದಿರುವ ನರೇಂದ್ರಮೋದಿ ಮತ್ತೆ ಪ್ರಧಾನಿ ಮಾಡಬೇಕಾಗಿರುವುದು ನಮ್ಮೆಲ್ಲರ ಅದ್ಯ ಕರ್ತವ್ಯವಾಗಿದೆ ಎಂದರು. ಕಳೆದ ೬೫ ವರ್ಷಗಳಿಂದ ಆಡಳಿತ ನಡೆಸಿದ ಕಾಂಗ್ರೆಸ್‌ಗೆ ಮಹಿಳೆಯರಿಗೆ ಮೀಸಲಾತಿ ನೀಡುವ ಪರಿಕಲ್ಪನೆ ಬಂದಿರಲಿಲ್ಲ. ಅದರೆ ನಮ್ಮ ಪ್ರಧಾನಿ ಮೋದಿ ಅವರು ನಾರಿ ಶಕ್ತಿ ವಂದನಾ ಅಧಿನಿಯಮ -೨೦೨೩ ಮಸೂದೆ ಜಾರಿ ಲೋಕಸಭಾ, ಹಾಗೂ ವಿಧಾನ ಸಭೆಯಲ್ಲಿ ಶೇ.೩೩ ಮೀಸಲಾತಿ ನೀಡಿದೆ. ಸ್ಥಳೀಯ ಸಂಸ್ಥೆಗಳಿಗೆ ಶೇ.೫೦ ರ ಮೀಸಲಾತಿ ಸೌಲಭ್ಯ ಕಲ್ಪಿಸುವ ಕಾಯ್ದೆಯನ್ನು ಜಾರಿ ಮಾಡಿದ್ದಾರೆ. ಎಲ್ಲ ರಂಗದಲ್ಲಿಯೂ ಮಹಿಳೆಯರು ಮುಖ್ಯವಾಹಿನಿಗೆ ಬರುವ ಆಶಯವನ್ನು ಹೊಂದಿದ್ದಾರೆ. ಹೀಗಾಗಿ ಚಾಮರಾಜನಗರ ಗಡಿ ಲೋಕಸಭಾ ಕ್ಷೇತ್ರದಿಂದ ಕಾಶ್ಮೀರದವರಗೆ ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ನರೇಂದ್ರ ಮೋದಿಯನ್ನು ಮತ್ತೆ ಪ್ರಧಾನಿ ಮಾಡಲು ನಾವೆಲ್ಲರೂ ಶ್ರಮಿಸಬೇಕು ಎಂದರು.

ಕಾಂಗ್ರೆಸ್ ಸರ್ಕಾರ ವಿರುದ್ದ ವಾಗ್ದಾಳಿ:

ರಾಜ್ಯ ಕಾಂಗ್ರೆಸ್ ಸರ್ಕಾರ ರಾಜಮಾರ್ಗದಲ್ಲಿ ಹೋಗದೆ ಅನ್ಯ ಮಾರ್ಗದಲ್ಲಿ ಹೋಗಿ ಗ್ಯಾರಂಟಿ ಯೋಜನೆಗಳ ಮೂಲಕ ಅಧಿಕಾರ ಹಿಡಿದಿದ್ದು, ಈ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಮತ ಹಾಕಿದರೆ ಮಾತ್ರ ಗ್ಯಾರಂಟಿ ಯೋಜನೆ ಮುಂದುವರಿಯುತ್ತದೆ ಎನ್ನುವ ಮೂಲಕ ಅ ಪಕ್ಷದ ಶಾಸಕರೇ ಬಹಿರಂಗ ಹೇಳಿಕೆ ನೀಡಿ, ಮಹಿಳೆಯರಿಗೆ ಅಪಮಾನ ಮಾಡುತ್ತಿದ್ದಾರೆ. ಇದು ಮಹಿಳೆಯರ ಸ್ವಾಭಿಮಾನದ ಪ್ರಶ್ನೆಯಾಗಿದೆ. ಸ್ವಾಭಿಮಾನದಿಂದ ಬದುಕು ಕಟ್ಟಿಕೊಳ್ಳುವ ಶಾಶ್ವತ ಯೋಜನೆ ಬೇಕಾ, ಪುಕ್ಕಟೆ ೨ ಸಾವಿರ ನೀಡುತ್ತಿದ್ದೇವೆ ಎಂದು ಇತರೇ ಬೆಲೆಗಳನ್ನು ಏರಿಕೆ ಮಾಡಿ, ಒಂದಿಷ್ಟು ಮಹಿಳೆಯರ ಖಾತೆಗೆ ೨ ಸಾವಿರ ರು.ಗಳನ್ನು ಕೆಲವೇ ತಿಂಗಳು ಹಾಕಿ ಸ್ಥಗಿತ ಮಾಡುವ ಯೋಜನೆಗಳು ಬೇಕಾ ಎಂಬುವುದು ನಮ್ಮ ಮಹಿಳೆಯರು ಈಗಾಗಲೇ ವಿಮರ್ಶೆ ಮಾಡಿದ್ದಾರೆ. ನಮ್ಮ ಮತ ರಾಷ್ಟ್ರದ ರಕ್ಷಣೆ, ಸ್ವಾಭಿಮಾನದ ಬದುಕು ರೂಪಿಸಿಕೊಟ್ಟ ಮೋದಿಗೆ ಎಂದು ತೀರ್ಮಾನ ಮಾಡಿದ್ದಾರೆ ಎಂದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜಿಲ್ಲಾಧ್ಯಕ್ಷ ಸಿ.ಎಸ್.ನಿರಂಜನ್ ಕುಮಾರ್ ಮಾತನಾಡಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆಗಳು ಮುಗಿದೋಯಿತು. ಬಹಳ ದಿನಗಳ ಕಾಲ ನಿಲ್ಲಲ್ಲ, ಇದನ್ನು ಮೋಸ ಮಾಡಿ ಚುನಾವಣಾ ಅಸ್ತವಾಗಿ ಬಳಸಿಕೊಂಡರು. ಗ್ಯಾರಂಟಿ ಯೋಜನೆಗಳನ್ನು ಕೊಟ್ಟು ಮತ್ತೊಂದು ಕಡೆ ಅಗತ್ಯ ವಸ್ತುಗಳ ಬೆಲೆಗಳ ಹೆಚ್ವು ಮಾಡುವ ಕೆಲಸ ಮಾಡಿದೆ ಎಂದು ಆರೋಪಿಸಿದರು.

ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಪ್ರೋ.ಕೆ.ಆರ್.ಮಲ್ಲಿಕಾರ್ಜುನಪ್ಪ ಮಾತನಾಡಿ, ಪ್ರಧಾನಿ ಮೋದಿ ಅವರು ನಾರಿಶಕ್ತಿ ವಂದನೆ ಯೋಜನೆಯ ಮೂಲಕ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅದನ್ನು ಪ್ರತಿ ಮನೆ ಮನೆ ಅರಿವು ಮೂಡಿಸಬೇಕು. ಇಡೀ ದೇಶ, ಭಾರತೀಯರನ್ನು ಮುನ್ನಡೆಸುತ್ತಿದ್ದಾರೆ. ಇಡೀ ವಿಶ್ವದಲ್ಲೇ ಮಹಿಳೆಯರ ಸೂಚ್ಯಂಕ ದುಪ್ಪಟ್ಟು ಆಗಿದೆ ಎಂದರು.

ಮಹಿಳಾ ಮೋರ್ಚಾದ ಜಿಲ್ಲಾಧ್ಯಕ್ಷೆ ಕಮಲಮ್ಮ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸದಸ್ಯೆ ಜಯಶೀಲ ರಾಜಶೇಖರ್, ಮೈಸೂರು ಜಿಲ್ಲಾಧ್ಯಕ್ಷೆ ರೇಣುಕಾರಾಜು, ಪ್ರಧಾನ ಕಾರ್ಯದರ್ಶಿ ನಂದಿನಿಮಹೇಶ್‌, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸರಸ್ವತಿ, ಕಾರ್ಯದರ್ಶಿಗಳಾದ ಮಮತ ಬಾಲಸುಬ್ರಹ್ಮಣ್ಯ, ಶೈಲ, ಉಪಾಧ್ಯಕ್ಷ ದಾಕ್ಷಯಿಣಿ, ವನಜಾಕ್ಷಿ, ಜಿಲ್ಲೆಯ ಎಂಟು ಮಂಡಲಗಳ ಅಧ್ಯಕ್ಷರು, ಪದಾಧಿಕಾರಿಗಳು ಭಾಗವಹಿಸಿದ್ದರು.