ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚಾದಿಂದ ಕಾಪು ಮಾರಿಯಮ್ಮನಿಗೆ ಪೂಜೆ

| Published : Sep 20 2024, 01:41 AM IST

ಮೋದಿ ಜನ್ಮದಿನ: ಬಿಜೆಪಿ ಮಹಿಳಾ ಮೋರ್ಚಾದಿಂದ ಕಾಪು ಮಾರಿಯಮ್ಮನಿಗೆ ಪೂಜೆ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನಾಚರಣೆ ಪ್ರಯುಕ್ತ ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಈ ಕಾರ್ಯಕ್ರಮದಲ್ಲಿ ಶಾಸಕ ಸುರೇಶ್ ಶೆಟ್ಟಿ ಮತ್ತು ಮಾಜಿ ಶಾಸಕ ಲಾಲಾಜಿ ಮೆಂಡನ್‌ ಭಾಗವಹಿಸಿದ್ದರು.ಈ ಸಂದರ್ಭ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ರಾಜ್ಯ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ನೀತಾ ಗುರುರಾಜ್, ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ಉಪಾಧ್ಯಕ್ಷೆ ಪವಿತ್ರ ಶೆಟ್ಟಿ, ಸುಮಾ ಶೆಟ್ಟಿ, ಪುರಸಭಾ ಅಧ್ಯಕ್ಷ ಹರಿಣಾಕ್ಷಿ ದೇವಾಡಿಗ, ಕಾಪು ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಶಶಿಪ್ರಭಾ ಶೆಟ್ಟಿ, ಉಪಾಧ್ಯಕ್ಷ ಪವಿತ್ರಾ ಗಿರೀಶ್, ಹಿರಿಯರಾದ ಶೀಲಾ ಕೆ. ಶೆಟ್ಟಿ, ಹಿಂದುಳಿದ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸುರೇಖಾ ಶೈಲೇಶ್ ಹಾಗೂ ಮಹಿಳಾ ಮೋರ್ಚಾದ ಎಲ್ಲ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.