ಸಾರಾಂಶ
ಕನ್ನಡಪ್ರಭ ವಾರ್ತೆ ಗೋಕಾಕಸತತ 3ನೇ ಬಾರಿಗೆ ನರೇಂದ್ರ ಮೋದಿಯವರು ದೇಶದ ಪ್ರಧಾನ ಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿರುವ ಹಿನ್ನೆಲೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.ನಗರದ ಬಸವೇಶ್ವರ ವೃತ್ತದಲ್ಲಿ ಸೇರಿದ ಬಿಜೆಪಿ ನಗರ ಹಾಗೂ ಗ್ರಾಮೀಣ ಮಂಡಲಗಳ ಕಾರ್ಯಕರ್ತರು ನಗರದ ವಿವಿಧ ಬೀದಿಗಳಲ್ಲಿ ಪಾಟಕಿ ಸಿಡಿಸಿ, ಸಿಹಿ ಹಂಚಿ ಪ್ರಧಾನಿ ನರೇಂದ್ರ ಮೋದಿಯವರ ಪರ ಘೋಷಣೆಗಳನ್ನು ಕೂಗಿ ಸಂಭ್ರಮಿಸಿದರು.ಈ ಸಂದರ್ಭದಲ್ಲಿ ಮಾಜಿ ಶಾಸಕ ಎಂ.ಎಲ್.ಮುತ್ತೇನ್ನವರ, ಜಿಪಂ ಮಾಜಿ ಸದಸ್ಯ ಟಿ.ಆರ್.ಕಾಗಲ, ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಸದಸ್ಯ ಲಕ್ಷ್ಮಣ ತಪಸಿ, ಜಿಲ್ಲಾ ಉಪಾಧ್ಯಕ್ಷ ಬಸವರಾಜ ಹಿರೇಮಠ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಅಲ್ಪಸಂಖ್ಯಾತ ಮೋರ್ಚಾ ರಾಜ್ಯ ಉಪಾಧ್ಯಕ್ಷ ಶಹನವಾಜ ಧಾರವಾಡಕರ, ಪದಾಧಿಕಾರಿಗಳಾದ ಜಯಾನಂದ ಹುಣಚ್ಯಾಳ, ಬಾಳೇಶ ಗಿಡ್ಡನವರ, ಲಕ್ಕಪ್ಪ ತಹಸೀಲ್ದಾರ್, ಲಕ್ಷ್ಮಣ ತಳ್ಳಿ, ಅನೀಲ ತುರಾಯಿದಾರ, ಮಂಜು ಪ್ರಭುನಟ್ಟಿ, ಶ್ರೀರಂಗ ನಾಯಿಕ, ಬಾಳೇಶ ತೋಟಗಿ, ಬೀರಪ್ಪ ಮೈಲನ್ನವರ, ಮುಖಂಡರುಗಳಾದ ಅಬ್ಬಾಸ ದೇಸಾಯಿ, ಪ್ರಕಾಶ ಮುರಾರಿ, ವಿಜಯ ಜತ್ತಿ ಸೇರಿದಂತೆ ನಗರಸಭೆ ಸದಸ್ಯರು, ಬಿಜೆಪಿಯ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.