ಸಾರಾಂಶ
ಎನ್‌ಡಿಎ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.
ತುಮಕೂರು: ಎನ್‌ಡಿಎ ನಾಯಕರಾಗಿ ಅವಿರೋಧವಾಗಿ ಆಯ್ಕೆಯಾದ ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಭಾನುವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ವಿಜಯೋತ್ಸವ, ಸಂಭ್ರಮಾಚರಣೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಎಚ್.ಎಸ್.ರವಿಶಂಕರ್ ಹೆಬ್ಬಾಕ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುವ ನರೇಂದ್ರ ಮೋದಿ ಸರ್ಕಾರದ ಪ್ರಮಾಣವಚನ ಸಮಾರಂಭದ ನೇರ ಪ್ರಸಾರ ವೀಕ್ಷಣೆ ಮಾಡಲು ನಗರದ ಭದ್ರಮ್ಮ ವೃತ್ತದಲ್ಲಿರುವ ಬಿಜೆಪಿ ಕಚೇರಿಯಲ್ಲಿ ಎಲ್‌ಇಡಿ ಸ್ಕ್ರೀನ್ ಅಳವಡಿಸಲಾಗಿದೆ. ಎಲ್ಲರಿಗೂ ವಿತರಿಸಲು ಬೂಂದಿ ಸಿದ್ಧ ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಮುಖಂಡರು, ಸಾರ್ವಜನಿಕರು ಈ ಸಂಭ್ರಮಾಚರಣೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ.