ರಾಜ್ಯದಲ್ಲಿ ಮೋದಿ ಅಲೆ ವ್ಯಾಪಕ: ಶ್ರೀರಾಮುಲು

| Published : Jan 23 2024, 01:45 AM IST

ಸಾರಾಂಶ

ಲೋಕಸಭಾ ಚುನಾವಣೆಗೆ ಜೆಡಿಎಸ್‌ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದು ಶ್ರೀರಾಮುಲು ತಿಳಿಸಿದರು.

ಕೊಟ್ಟೂರು: ಪ್ರಧಾನಿ ನರೇಂದ್ರ ಮೋದಿಯವರ ಅಲೆ ರಾಜ್ಯದಲ್ಲಿ ವ್ಯಾಪಕವಾಗಿ ಕಾಣಿಸಿಕೊಳ್ಳತೊಡಗಿದೆ. ಅಲ್ಲದೇ ಕಾಂಗ್ರೆಸ್‌ ಸರ್ಕಾರದ ಗ್ಯಾರಂಟಿ ಯೋಜನೆಗಳು ಸಂಪೂರ್ಣವಾಗಿ ವಿಫಲವಾಗಿದ್ದು, ಇದರ ಪರಿಣಾಮ ಮತದಾರರು ಬಿಜೆಪಿಯತ್ತ ವಾಲಿದ್ದಾರೆ ಎಂದು ಮಾಜಿ ಸಚಿವ ಬಿ. ಶ್ರೀರಾಮುಲು ತಿಳಿಸಿದರು.

ಭಾನುವಾರ ಸಂಜೆ ಸುದ್ದಿಗಾರರೊಂದಿಗೆ ಮಾತನಾಡಿ, ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಳ್ಳಾರಿ ಕ್ಷೇತ್ರಕ್ಕೆ ಪಕ್ಷದ ಅಭ್ಯರ್ಥಿಯಾಗಲು ಕ್ಷೇತ್ರಾದ್ಯಂತ ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ತಮ್ಮ ಮೇಲೆ ಒತ್ತಡ ಹೇರುತ್ತಿದ್ದು, ಜನಬೆಂಬಲದ ಪರಿಣಾಮವಾಗಿ ಅಭ್ಯರ್ಥಿಯಾಗಲು ಇಚ್ಛಿಸಿರುವೆ. ಆದರೆ ಪಕ್ಷದ ವರಿಷ್ಠರು ಅಂತಿಮವಾಗಿ ಯಾರಿಗೆ ಟಿಕೆಟ್‌ ನೀಡುತ್ತಾರೋ ಅವರ ಪರ ಪ್ರಚಾರ ಕೈಗೊಳ್ಳುವೆ ಎಂದರು.

ನಾನು ಸ್ಪರ್ಧಾಕಾಂಕ್ಷಿಯಾಗಿದ್ದರೂ ಹಾಲಿ ಸಂಸದ ದೇವೇಂದ್ರಪ್ಪ ಅವರಿಗೆ ಪಕ್ಷ ಸ್ಪರ್ಧಿಸಲು ಅವಕಾಶ ನೀಡಿದರೆ ಅವರ ಪರವಾಗಿ ಪ್ರಚಾರ ಕೈಗೊಂಡು ಬಿಜೆಪಿ ಗೆಲುವಿಗೆ ಶ್ರಮಿಸುವೆ ಎಂದರು.

ಲೋಕಸಭಾ ಚುನಾವಣೆಗೆ ಜೆಡಿಎಸ್‌ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ವಿಶ್ವಾಸ ಹೊಂದಿದ್ದೇವೆ ಎಂದರು.

ಕೊಟ್ಟೂರು ಬಿಜೆಪಿ ಘಟಕಾಧ್ಯಕ್ಷ ಭರಮನಗೌಡ ಪಾಟೀಲ್‌, ಹರೀಶ್‌ಗೌಡ, ಪಪಂ ಸದಸ್ಯರಾದ ಮರಬದ ಕೊಟ್ರೇಶ್‌, ಸಿದ್ದಯ್ಯ, ಕೆಂಗರಾಜ್‌, ಚಂದ್ರು ಜಂಬೂರು, ಅಂಗಡಿ ಪಂಪಾಪತಿ, ಪ್ರಜ್ವಲ್‌, ಪ್ರಶಾಂತ, ಅಭಿಷೇಕ್‌ ಮತ್ತಿತರರು ಇದ್ದರು.