ಮೋದಿ ಆಡಳಿತ ವೈಖರಿ ಇಡೀ ವಿಶ್ವಕ್ಕೆ ಮಾದರಿ: ವೆಂಕಟರಾವ್ ನಾಡಗೌಡ

| Published : Apr 01 2024, 12:46 AM IST

ಮೋದಿ ಆಡಳಿತ ವೈಖರಿ ಇಡೀ ವಿಶ್ವಕ್ಕೆ ಮಾದರಿ: ವೆಂಕಟರಾವ್ ನಾಡಗೌಡ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರಧಾನಿ ನರೇಂದ್ರ ಮೋದಿಯವರ ೧೦ ವರ್ಷಗಳ ಭ್ರಷ್ಟಾಚಾರ ಮುಕ್ತ ಆಡಳಿತ ವೈಖರಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ.

ಕನ್ನಡಪ್ರಭ ವಾರ್ತೆ ಯಲಬುರ್ಗಾ

ಪ್ರಧಾನಿ ನರೇಂದ್ರ ಮೋದಿಯವರ ೧೦ ವರ್ಷಗಳ ಭ್ರಷ್ಟಾಚಾರ ಮುಕ್ತ ಆಡಳಿತ ವೈಖರಿ ಇಡೀ ವಿಶ್ವಕ್ಕೆ ಮಾದರಿಯಾಗಿದೆ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ಹೇಳಿದರು.

ಪಟ್ಟಣದ ಸಾಯಿ ಪ್ಯಾಲೇಸ್‌ನಲ್ಲಿ ಬಿಜೆಪಿ ಯಲಬುರ್ಗಾ ಮಂಡಲ ವತಿಯಿಂದ ಭಾನುವಾರ ಆಯೋಜಿಸಿದ್ದ ಸಾರ್ವತ್ರಿಕ ಲೋಕಸಭಾ ಚುನಾವಣೆ ಅಂಗವಾಗಿ ಬೂತ್ ವಿಜಯ ಅಭಿಯಾನ ಹಾಗೂ ಬಿಜೆಪಿ-ಜೆಡಿಎಸ್ ಸಮನ್ವಯ ಸಭೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಧರ್ಮ ಪಾಲನೆಯಿಂದ ೨೮ ಸ್ಥಾನಗಳಲ್ಲೂ ಎಲ್ಲರೂ ಒಟ್ಟಾಗಿ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ಕಾಂಗ್ರೆಸ್‌ನವರಿಗೆ ಪಾಠ ಕಲಿಸೋಣ ಎಂದರು.

ಬಿಜೆಪಿ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟೂರ್‌ ಅವರನ್ನು ಎರಡು ಪಕ್ಷಗಳ ಕಾರ್ಯಕರ್ತರು ಒಂದಾಗಿ ಅತೀ ಹೆಚ್ಚು ಮತಗಳಿಂದ ಗೆಲ್ಲಿಸಿ ದೇಶದಲ್ಲಿ ಮತ್ತೊಮ್ಮೆ ಮೋದಿಯವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡುವ ದೃಢ ಸಂಕಲ್ಪ ಮಾಡೋಣ ಎಂದು ಕರೆ ನೀಡಿದರು.

ಮುಖ್ಯಸಚೇತಕ ದೊಡ್ಡನಗೌಡ ಪಾಟೀಲ ಮಾತನಾಡಿ, ದೇಶದ ಪ್ರಧಾನಿ ನರೇಂದ್ರ ಮೋದಿಯವರಿಗೆ ಅರ್ಥಶಾಸ್ತ್ರದ ಬಗ್ಗೆ ಜ್ಞಾನವಿಲ್ಲ ಎಂದು ಶಾಸಕ ಬಸವರಾಜ ರಾಯರಡ್ಡಿ ಬಹಳ ವ್ಯಂಗ್ಯವಾಗಿ ಮಾತನಾಡಿದ್ದಾರೆ. ಆದರೆ ಮೋದಿಯವರ ಜನಪರ ಆಡಳಿತವನ್ನು ಇಡೀ ವಿಶ್ವವೇ ಮೆಚ್ಚಿಕೊಂಡು ಅವರನ್ನು ಮೂರನೇ ಬಾರಿಗೆ ಈ ದೇಶದ ಪ್ರಧಾನಿಯನ್ನಾಗಿ ಮಾಡಲು ದೇಶದ ಜನತೆ ಒಲವು ಹೊಂದಿದೆ ಎಂದರು.

ಮಾಜಿ ಸಚಿವ ಹಾಲಪ್ಪ ಆಚಾರ್ ಮಾತನಾಡಿ, ದೇಶದ ಸಂರಕ್ಷಣೆಗಾಗಿ ಮೂರನೇ ಬಾರಿಗೆ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿ ಮಾಡಬೇಕೆನ್ನುವುದು ಜನತೆಯ ಆಶಯವಾಗಿದೆ. ಸಂಸದ ಸಂಗಣ್ಣ ಕರಡಿ ತಮ್ಮ ೧೦ ವರ್ಷಗಳ ಅಧಿಕಾರವಧಿಯಲ್ಲಿ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡುವ ಮೂಲಕ ಜನಪರ ಅಭಿವೃದ್ದಿ ಕಾರ್ಯ ಮಾಡಿದ್ದಾರೆ. ಆ ಅಭಿವೃದ್ಧಿ ಕಾರ್ಯಗಳೇ ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರೀರಕ್ಷೆಯಾಗಲಿದೆ ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಡಾ. ಬಸವರಾಜ ಕ್ಯಾವಟೂರ್, ಸಿಂಧನೂರಿನ ಮಾಜಿ ಸಂಸದ ಕೆ. ವಿರೂಪಾಕ್ಷಪ್ಪ, ಕುಷ್ಟಗಿ ಮಾಜಿ ಶಾಸಕ ಪರಣ್ಣ ಮುನವಳ್ಳಿ, ಕನಕಗಿರಿ ಮಾಜಿ ಶಾಸಕ ಬಸವರಾಜ ದಡೇಸ್ಗೂರ, ಬಿಜೆಪಿ ಜಿಲ್ಲಾಧ್ಯಕ್ಷ ನವೀನಕುಮಾರ ಗುಳಗಣ್ಣನವರ್, ವಿಪ ಸದಸ್ಯೆ ಹೇಮಲತಾ ನಾಯಕ, ಜೆಡಿಎಸ್ ಜಿಲ್ಲಾಧ್ಯಕ್ಷ ಸುರೇಶ ಭೂಮರೆಡ್ಡಿ, ಸಿ.ವ್ಹಿ. ಚಂದ್ರಶೇಖರ, ಚಂದ್ರಶೇಖರ ಪಾಟೀಲ, ಬಿಜೆಪಿ ವಕ್ತಾರ ವೀರಣ್ಣ ಹುಬ್ಬಳ್ಳಿ, ಮಾಜಿ ಶಾಸಕ ಕೆ. ಶರಣಪ್ಪ, ಜೆಡಿಎಸ್ ತಾಲೂಕಾಧ್ಯಕ್ಷ ಬಸವರಾಜ ಗುಳಗುಳಿ, ಕರಿಯಪ್ಪ, ಬಸವಲಿಂಗಪ್ಪ ಭೂತೆ, ಸಿ.ಎಚ್. ಪಾಟೀಲ, ಎಲ್. ಗಿರಿಗೌಡ, ಶರಣಪ್ಪ ರಾಂಪೂರ, ಕಳಕಪ್ಪ ಕಂಬಳಿ, ಶಿವಶಂಕರರಾವ್ ದೇಸಾಯಿ, ಮಲ್ಲನಗೌಡ ಕೋನನಗೌಡ, ನರಸಿಂಗರಾವ್ ಕುಲಕರ್ಣಿ ಮತ್ತಿತರರಿದ್ದರು.