ಮತದಾರರು ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಏಕೆಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವಾಗ ದೇಶದ ಜನರಿಗೆ ಹಾಗೂ ರಾಜ್ಯದ ಜನರಿಗೆ ಅನೇಕ ಭರವಸೆಗಳನ್ನು ನೀಡಿದ್ದರು. ಆದರೂ ಬಡವರ ಒಂದು ಆಸೆಯನ್ನು ಅವರಿಗೆ ಈಡೇರಿಸಲು ಇವತ್ತಿನವರೆಗೂ ಸಾಧ್ಯವಾಗಲಿಲ್ಲ.

ಶಿರಸಿ: ಮತದಾರರು ಈ ಬಾರಿ ಕಾಂಗ್ರೆಸ್ ಪಶ್ಚಿಮ ಪದವೀಧರರ ಕ್ಷೇತ್ರದ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರನ್ನು ಆಯ್ಕೆ ಮಾಡುವುದು ಶತಸಿದ್ಧ ಎಂದು ಸಹಕಾರ ಸಚಿವ ಲಕ್ಷ್ಮಣ ಸವದಿ ವಿಶ್ವಾಸ ವ್ಯಕ್ತಪಡಿಸಿದರು.

ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಸಂಕನೂರ ಅವರು ಈಗಾಗಲೇ ಎರಡು ಬಾರಿ ಆಯ್ಕೆಯಾಗಿ ಏನು ಮಾಡಿದ್ದಾರೆ ಎಂದು ಪಶ್ಚಿಮ ಪದವೀಧರ ಮತದಾರರು ಸರಿಯಾಗಿ ಅರ್ಥ ಮಾಡಿಕೊಂಡಿದ್ದಾರೆ. ಇದರಿಂದ ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿಯ ಗೆಲವು ಖಚಿತ ಎಂದರು.ಮತದಾರರು ಕೇಂದ್ರ ಸರ್ಕಾರದ ಮೇಲೆ ನಂಬಿಕೆ ಕಳೆದುಕೊಂಡಿದ್ದಾರೆ. ಏಕೆಂದರೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಅಧಿಕಾರಕ್ಕೆ ಬರುವಾಗ ದೇಶದ ಜನರಿಗೆ ಹಾಗೂ ರಾಜ್ಯದ ಜನರಿಗೆ ಅನೇಕ ಭರವಸೆಗಳನ್ನು ನೀಡಿದ್ದರು. ಆದರೂ ಬಡವರ ಒಂದು ಆಸೆಯನ್ನು ಅವರಿಗೆ ಈಡೇರಿಸಲು ಇವತ್ತಿನವರೆಗೂ ಸಾಧ್ಯವಾಗಲಿಲ್ಲ ಎಂದು ಆರೋಪಿಸಿದರು.ವಿದೇಶದಲ್ಲಿರುವ ಕಪ್ಪು ಹಣವನ್ನು ಹೊರಗೆ ತಂದು ದೇಶದಲ್ಲಿ ಸುಸಜ್ಜಿತವಾದ ರಸ್ತೆಗಳನ್ನು ನಿರ್ಮಾಣ ಮಾಡಲಾಗುವುದು, ಬುಲೆಟ್ ಟ್ರೈನ್ ಮತ್ತು ದೇಶದ ಹಾಗೂ ಜಿಲ್ಲೆಯ ಮತ್ತು ತಾಲೂಕಿನಲ್ಲಿ ವಿಮಾನ ನಿಲ್ದಾಣಗಳನ್ನು ನಿರ್ಮಾಣ ಮಾಡುತ್ತೇನೆ, ದೇಶವನ್ನು ಅಭಿವೃದ್ಧಿಪಥದತ್ತ ಕೊಂಡೊಯ್ಯುತ್ತೇನೆ ಹಾಗೂ ದೇಶದ ಪ್ರತಿಯೊಬ್ಬ ನಾಗರಿಕರಿಗೂ ₹15 ಲಕ್ಷ ಅವರ ವೈಯಕ್ತಿಕ ಖಾತೆಗೆ ಜಮಾ ಮಾಡುತ್ತೇನೆ ಎಂದು ಹೇಳಿದ್ದರು. ಆದರೆ ಇವತ್ತಿನವರೆಗೂ ಇದ್ಯಾವುದೇ ಕೆಲಸವನ್ನು ಮಾಡದೆ ದೇಶದ ಮತ್ತು ರಾಜ್ಯದ ಜನರಿಗೆ ಪ್ರಧಾನಿ ನರೇಂದ್ರ ಮೋದಿಯವರು ಸುಳ್ಳು ಭರವಸೆ ನೀಡಿ ದಾರಿ ತಪ್ಪಿಸುವ ಕೆಲಸ ಮಾಡಿದ್ದಾರೆ ಎಂದರು.ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಜಿ.ಟಿ. ನಾಯ್ಕ್, ಗ್ಯಾರಂಟಿ ಯೋಜನೆಯ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಸತೀಶ್ ನಾಯ್ಕ್ ಇದ್ದರು.