ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ: ನ್ಯಾಯಮೂರ್ತಿ ಬಸವರಾಜ ತಳವಾರ

| Published : Jul 28 2024, 02:08 AM IST

ಸಾರಾಂಶ

ಹಣ ಸಂಪಾದನೆಗೆ ಕೊಡುವಷ್ಟು ಗಮನ ಆರೋಗ್ಯದ ಕಡೆ ಬಹುತೇಕರು ಕೊಡಲ್ಲ, ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು. ಗುಂಡ್ಲುಪೇಟೆಯಲ್ಲಿ ಹಮ್ಮಿಕೊಂಡ ಉಚಿತ ಆರೋಗ್ಯ ಶಿಬಿರದಲ್ಲಿ ಮಾತನಾಡಿದರು.

ಆರೋಗ್ಯ ಉಚಿತ ತಪಾಸಣೆ ಶಿಬಿರಕನ್ನಡಪ್ರಭ ವಾರ್ತೆ ಗುಂಡ್ಲುಪೇಟೆ

ಹಣ ಸಂಪಾದನೆಗೆ ಕೊಡುವಷ್ಟು ಗಮನ ಆರೋಗ್ಯದ ಕಡೆ ಬಹುತೇಕರು ಕೊಡಲ್ಲ, ಹಣ ಕೊಟ್ರೂ ಆರೋಗ್ಯ ಖರೀದಿಸಲು ಆಗಲ್ಲ ಎಂದು ತಾಲೂಕು ಕಾನೂನು ಸೇವೆಗಳ ಸಮಿತಿ ಅಧ್ಯಕ್ಷ, ಹಿರಿಯ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಬಸವರಾಜ ತಳವಾರ ಹೇಳಿದರು.

ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮೈಸೂರು ನಾರಾಯಣ ಆಸ್ಪತ್ರೆಯ ಸಹಯೋಗದಲ್ಲಿ ಆರೋಗ್ಯ ಉಚಿತ ತಪಾಸಣೆ ಶಿಬಿರ ಉದ್ಘಾಟಿಸಿ ಮಾತನಾಡಿದರು.

ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಆರೋಗ್ಯವೇ ಭಾಗ್ಯ ಎಂಬ ಮಾತಿದೆ. ಹಣ ಸಂಪಾದನೆ ಮುಖ್ಯ ಹಾಗಂತ ಆರೋಗ್ಯ ತಪಾಸಣೆ ಕಡೆಗಣಿಸಬೇಡಿ. ವರ್ಷದಲ್ಲಿ ೨ ಬಾರಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ ಸದಸ್ಯ ಕಾರ್ಯದರ್ಶಿ ಹಾಗೂ ಪ್ರಧಾನ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶ ಶಿವಕುಮಾರ್‌ ಜಿ.ಜೆ, ಅಪರ ಸಿವಿಲ್‌ ಮತ್ತು ಜೆಎಂಎಫ್‌ಸಿ ನ್ಯಾಯಾಧೀಶೆ ಕಾಂತಮ್ಮ ಎ.ಎನ್, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್. ವೆಂಕಟೇಶ್‌, ತಾಲೂಕು ಆರೋಗ್ಯಾಧಿಕಾರಿ ಡಾ. ಅಲೀಂ ಪಾಶ, ತಾಲೂಕು ಸಾರ್ವಜನಿಕ ಆಸ್ಪತ್ರೆಯ ಮುಖ್ಯ ಆಡಳಿತಾಧಿಕಾರಿ ಡಾ.ಮಂಜುನಾಥ್‌, ನಾರಾಯಣ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಗುಲ್ಜರ್‌, ವಕೀಲರ ಸಂಘದ ಕಾರ್ಯದರ್ಶಿ ಎಂ.ಬೀರೇಗೌಡ, ಸರ್ಕಾರಿ ಸಹಾಯಕ ಅಭಿಯೋಜಕರಾದ ರೇವಣ್ಣ ಪಿ.ಸಿ.ಮಹಮ್ಮದ್‌ ವಸೀಂಮುಲ್ಲ, ಉಷಾರಾಣಿ ಸೇರಿದಂತೆ ಹಲವರಿದ್ದರು.