ಚುನಾವಣೆ ಮುಂಚೆ ಮಹಿಳೆಯರ ಅಕೌಂಟ್‌ಗೆ ಹಣ -ತಕ್ಷಣ ತಡೆಗೆ ಸಂಸದ ಬೊಮ್ಮಾಯಿ ಆಗ್ರಹ

| Published : Nov 13 2024, 12:47 AM IST / Updated: Nov 13 2024, 12:48 AM IST

ಚುನಾವಣೆ ಮುಂಚೆ ಮಹಿಳೆಯರ ಅಕೌಂಟ್‌ಗೆ ಹಣ -ತಕ್ಷಣ ತಡೆಗೆ ಸಂಸದ ಬೊಮ್ಮಾಯಿ ಆಗ್ರಹ
Share this Article
  • FB
  • TW
  • Linkdin
  • Email

ಸಾರಾಂಶ

ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್‌ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರುಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ಧವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

ಹಾವೇರಿ: ಪ್ರತಿ ಬಾರಿಯೂ ಚುನಾವಣೆಯ ಮುಂಚೆ ಮಹಿಳೆಯರ ಅಕೌಂಟ್‌ಗೆ ಗೃಹಲಕ್ಷ್ಮೀ ಯೋಜನೆಯ ಎರಡು ಸಾವಿರ ರುಪಾಯಿಯನ್ನು ಹಾಕುವುದು ನೀತಿ ಸಂಹಿತೆಯ ವಿರುದ್ಧವಾಗಿದೆ. ಚುನಾವಣಾ ಆಯೋಗ ತಕ್ಷಣ ತಡೆ ಹಿಡಿಯಬೇಕು ಎಂದು ಮಾಜಿ ಸಿಎಂ, ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಚುನಾವಣೆ ಪಾರದರ್ಶಕವಾಗಿರಬೇಕು. ರಾಜ್ಯ ಸರ್ಕಾರ ಪ್ರತಿ ಬಾರಿಯೂ ಚುನಾವಣೆಗೆ ಮುನ್ನ ಸರ್ಕಾರದ ಹಣದಲ್ಲಿ ತಮ್ಮ ರಾಜಕೀಯ ರೊಟ್ಟಿ ಸುಟ್ಟುಕೊಳ್ಳುವ ಕೆಲಸ ಮಾಡುತ್ತಿದೆ. ಇದು ಅತ್ಯಂತ ಖಂಡನೀಯ. ಚುನಾವಣಾ ಆಯೋಗ ಕಣ್ಣು ಮುಚ್ಚಿ ಕುಳಿತಿದೆ. ಹಾವೇರಿ ಜಿಲ್ಲಾಧಿಕಾರಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ. ಇದನ್ನು ಕೂಡಲೆ ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ. ಚುನಾವಣೆಗೆ ಸರ್ಕಾರದ ಹಣ ಬಳಕೆಯಾಗುತ್ತಿರುವುದು ಸ್ಪಷ್ಟ. ಸಿಎಂ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವ, ಸಂವಿಧಾನದ ಬಹಳ ಬಗ್ಗೆ ಮಾತನಾಡುತ್ತಾರೆ. ಇಡೀ ಸರ್ಕಾರವೇ ಸರ್ಕಾರಿ ದುಡ್ಡಿನಲ್ಲಿ ರಾಜಕೀಯ ಭ್ರಷ್ಟಾಚಾರ ಮಾಡುತ್ತಿದೆ. ಶಿಗ್ಗಾಂವಿ-ಸವಣೂರು ಕ್ಷೇತ್ರದ ಜನರು ಯಾವುದೇ ಆಸೆ ಆಮಿಷಗಳಿಗೆ ಒಳಗಾಗದೇ ನಿರಂತರವಾಗಿ ನಡೆಯುತ್ತಿರುವ ಈ ಕ್ಷೇತ್ರದ ಅಭಿವೃದ್ಧಿಯನ್ನು ನೋಡಿ ಎಲ್ಲ ವರ್ಗದ ಜನರು ಈಗಾಗಲೇ ಏನು ತೀರ್ಮಾನ ಮಾಡಿದ್ದಿರಿ, ಅದನ್ನು ಯಾವುದೇ ಕಾರಣಕ್ಕೂ ಬದಲಾಯಿಸದೇ ಮತದಾನ ಮಾಡುವಂತೆ ಮನವಿ ಮಾಡಿದ್ದಾರೆ.