ಸಾರಾಂಶ
ಹಾಸನದ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (ಪಿಎಂ ಶ್ರೀ ಯೋಜನೆಯ ಶಾಲೆ) ಕ್ರೀಡಾಪಟು ಮೋನಿಷ, ೨೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ. ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿರುವ ಮೋನಿಷಾಳಿಗೆ ಇಲಾಖೆಯಿಂದ ಸಹಕಾರ ನೀಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೀಪಾ ಹೇಳಿದರು.
ಕನ್ನಡಪ್ರಭ ವಾರ್ತೆ ಚನ್ನರಾಯಪಟ್ಟಣ
ಹಾಸನದ ಕ್ರೀಡಾಂಗಣದಲ್ಲಿ ಏರ್ಪಡಿಸಿದ್ದ ಜಿಲ್ಲಾಮಟ್ಟದ ಪ್ರಾಥಮಿಕ ಶಾಲೆಗಳ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ (ಪಿಎಂ ಶ್ರೀ ಯೋಜನೆಯ ಶಾಲೆ) ಕ್ರೀಡಾಪಟು ಮೋನಿಷ, ೨೦೦ ಮೀಟರ್ ಓಟದ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾಳೆ.ಶಾಲೆಯ ವತಿಯಿಂದ ಕ್ರೀಡಾಪಟು ಮೋನಿಷಳನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ದೀಪಾ, ಕ್ಷೇತ್ರ ಸಮನ್ವಯಾಧಿಕಾರಿ ಕೆ.ಎನ್. ಅನಿಲ್, ಮುಖ್ಯಶಿಕ್ಷಕ ಡಿ.ಜಿ. ಪ್ರಕಾಶ್, ದೈಹಿಕ ಶಿಕ್ಷಣ ಪರಿವೀಕ್ಷಕ ಕೆ.ಟಿ. ಆನಂದ್, ಸಮೂಹಸಂಪನ್ಮೂಲ ವ್ಯಕ್ತಿ ಲೋಕೇಶ್ ಜಿಲ್ಲಾ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಶಾಲೆಯ ದೈಹಿಕ ಶಿಕ್ಷಣ ನಿರ್ದೇಶಕಿ ಪದ್ಮಿನಿ ಅವರನ್ನು ಸಹ ಸನ್ಮಾನಿಸಲಾಯಿತು.ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿರುವ ಮೋನಿಷಾಳಿಗೆ ಇಲಾಖೆಯಿಂದ ಸಹಕಾರ ನೀಡಲಾಗುವುದು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ದೀಪಾ ಹೇಳಿದರು. ದೈಹಿಕ ಶಿಕ್ಷಣ ಪರಿವೀಕ್ಷಕ ಆನಂದ್ ಮಾತನಾಡಿ, ಜಿಲ್ಲಾಮಟ್ಟದಲ್ಲಿ ಚನ್ನರಾಯಪಟ್ಟಣ ತಾಲೂಕಿನ ೧೨೦ ಕ್ರೀಡಾಪಟುಗಳು ಪಾಲ್ಗೊಂಡಿದ್ದರು. ಅದರಲ್ಲಿ ೩೪ ವಿದ್ಯಾರ್ಥಿಗಳು ಪ್ರಥಮ ಮತ್ತು ದ್ವಿತೀಯ ಸ್ಥಾನಗಳಿಸುವ ಮೂಲಕ ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.