ಚುನಾವಣಾ ವೆಚ್ಚ, ನೀತಿಸಂಹಿತೆ ಉಲ್ಲಂಘನೆ ಮೇಲೆ ನಿಗಾ ವಹಿಸಿ

| Published : Apr 30 2024, 02:09 AM IST

ಚುನಾವಣಾ ವೆಚ್ಚ, ನೀತಿಸಂಹಿತೆ ಉಲ್ಲಂಘನೆ ಮೇಲೆ ನಿಗಾ ವಹಿಸಿ
Share this Article
  • FB
  • TW
  • Linkdin
  • Email

ಸಾರಾಂಶ

ಕನ್ನಡಪ್ರಭ ವಾರ್ತೆ ಬೆಳಗಾವಿ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾ ಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಹಾಗೂ ಚಿಕ್ಕೋಡಿ ಲೋಕಸಭಾ ಕ್ಷೇತ್ರಗಳ ವೆಚ್ಚ ವೀಕ್ಷಕರು ನಗರದ ವಾರ್ತಾ ಭವನದಲ್ಲಿ ಸ್ಥಾಪಿಸಲಾಗಿರುವ ಮಾಧ್ಯಮ ಕಣ್ಗಾವಲು ಘಟಕಕ್ಕೆ ಸೋಮವಾರ ಭೇಟಿ ನೀಡಿ ಪರಿಶೀಲಿಸಿದರು.

ಈ ಸಂದರ್ಭದಲ್ಲಿ ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕ ಹರಕ್ರಿಪಾಲ್ ಖಟಾನಾ ಮಾತನಾಡಿ, ದಿನಪತ್ರಿಕೆ, ಟಿವಿ ಚಾನೆಲ್‌ ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟವಾಗುವ ಪ್ರತಿಯೊಂದು ಚುನಾವಣಾ ಸುದ್ದಿ‌ ಹಾಗೂ ಜಾಹೀರಾತುಗಳ ಮೇಲೆ ನಿಗಾ ವಹಿಸಬೇಕು ಎಂದು ಸೂಚಿಸಿದರು.ರಾಜಕೀಯ ಪಕ್ಷಗಳು ಅಥವಾ ಅಭ್ಯರ್ಥಿಗಳ ಚುನಾವಣಾ ಜಾಹೀರಾತುಗಳಿಗೆ ಸಂಬಂಧಿಸಿದ ವೆಚ್ಚವನ್ನು ಸಹಾಯಕ ವೆಚ್ಚ ನೋಡಲ್ ಅಧಿಕಾರಿಗಳ ಗಮನಕ್ಕೆ ತರಬೇಕು. ಇದಲ್ಲದೇ ಮಾದರಿ ನೀತಿಸಂಹಿತೆ ಉಲ್ಲಂಘನೆ ಕಂಡುಬಂದರೇ ಅಂತಹ ವಿಷಯಗಳನ್ನು ಕೂಡ ಎಂಸಿಸಿ ನೋಡಲ್ ಅಧಿಕಾರಿಗಳ ಅವಗಾಹನೆಗೆ ತರಬೇಕು ಎಂದು ತಿಳಿಸಿದರು.

ಮಾಧ್ಯಮ ಪ್ರಮಾಣೀಕರಣ ಹಾಗೂ ಕಣ್ಗಾವಲು ಸಮಿತಿ(ಎಂಸಿಎಂಸಿ)ಯ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದ ನೋಡಲ್ ಅಧಿಕಾರಿ ಗುರುನಾಥ ಕಡಬೂರ ಅವರು, ಪ್ರತಿಯೊಂದು ದಿನಪತ್ರಿಕೆಗಳು, ಟಿವಿ ಚಾನೆಲ್‌ ಮಾತ್ರವಲ್ಲದೇ ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಲಾಗಿರುತ್ತದೆ ಎಂದು ವಿವರಿಸಿದರು.

ಬೆಳಗಾವಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ನರಸಿಂಗ್ ರಾವ್ ಬಿ, ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವೆಚ್ಚ ವೀಕ್ಷಕರಾದ ಎನ್.ಮೋಹನ‌ ಕೃಷ್ಣಾ, ಅಂಕಿತ್ ತಿವಾರಿ, ಐಎಎಸ್ ಪ್ರೊಬೇಷನರಿ ಅಧಿಕಾರಿ ಶುಭಂ ಶುಕ್ಲಾ ಮತ್ತಿತರರು ಇದ್ದರು.

ಈ ಸಂದರ್ಭದಲ್ಲಿ ಮಾಧ್ಯಮ‌ ಘಟಕದ‌ ಉಸ್ತುವಾರಿಗಳಾದ ಝಡ್.ಜಿ.ಸಯ್ಯದ್, ವಿ.ಎಂ.ಕಂಗ್ರಾಳಕರ, ಎಂ.ಎಂ.ಪಾಟೀಲ, ಎಸ್.ಎಸ್.ಘೋರ್ಪಡೆ, ಎ.ಬಿ.ಕಾಮಣ್ಣವರ, ಎಂ.ಪಿ.ನಿಚ್ಚಣಕಿ, ಮಹಾಂತೇಶ ಪತ್ತಾರ ಮತ್ತಿತರರು ಉಪಸ್ಥಿತರಿದ್ದರು.