ಸಾರಾಂಶ
ಯರಗಟ್ಟಿ: 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಯರಗಟ್ಟಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚೆಕ್‌ಪೋಸ್ಟ್ ಮುಖಾಂತರ ಹಾಯ್ದು ಹೋಗುವ ವಾಹನಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದು, ತಪಾಸಣೆಯನ್ನು ನಡೆಸಲಾಗುತ್ತಿದೆ.
ಯರಗಟ್ಟಿ: 2024ರ ಲೋಕಸಭಾ ಚುನಾವಣೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕಾನೂನು ಬಾಹಿರ ಚಟುವಟಿಕೆಗಳನ್ನು ತಡೆಯುವ ಉದ್ದೇಶದಿಂದ ಯರಗಟ್ಟಿ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಚೆಕ್ ಪೋಸ್ಟ್‌ಗಳನ್ನು ತೆರೆಯಲಾಗಿದೆ. ಚೆಕ್‌ಪೋಸ್ಟ್ ಮುಖಾಂತರ ಹಾಯ್ದು ಹೋಗುವ ವಾಹನಗಳ ಮೇಲೆ ಪೊಲೀಸರು ನಿಗಾ ಇಟ್ಟಿದ್ದು, ತಪಾಸಣೆಯನ್ನು ನಡೆಸಲಾಗುತ್ತಿದೆ. ಯರಗಟ್ಟಿ ಪಿಎಸ್‌ಐ ಐ.ಎಂ.ಹಿರೇಗೌಡರ ಹಾಗೂ ಕಂದಾಯ ಅಧಿಕಾರಿಗಳು, ಡಿವೈಎಸ್ಪಿ ಹಾಗೂ ಸಿಪಿಐ ಮಾರ್ಗದರ್ಶನದಲ್ಲಿ ಮುರಗೋಡ ಪೊಲೀಸರು ಹಾಗೂ ತಾಲೂಕಾಡಳಿತದ ಚುನಾವಣಾ ಸಿಬ್ಬಂದಿ ಚೆಕ್‌ಪೋಸ್ಟ್ ಗಳಿಗೆ ತೆರಳಿ ಪರಿಶೀಲನೆ ನಡೆಸಿದರು.