ಸಾರಾಂಶ
ದುಬೈನಿಂದ ಆಗಮಿಸಿರುವ ಉಡುಪಿಯ ವ್ಯಕ್ತಿಯೋರ್ವರಲ್ಲಿ ಮಂಕಿಪಾಕ್ಸ್ ಕಾಣಿಸಿಕೊಂಡಿದೆ. ಸದ್ಯ ಮಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಕಿ ಪಾಕ್ಸ್ ಬಗ್ಗೆ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಕನ್ನಡಪ್ರಭ ವಾರ್ತೆ ಉಡುಪಿ
ದುಬೈನಿಂದ ಆಗಮಿಸಿರುವ ಉಡುಪಿಯ ವ್ಯಕ್ತಿಯೋರ್ವರಲ್ಲಿ ಮಂಕಿ ಪಾಕ್ಸ್ ಕಾಣಿಸಿಕೊಂಡಿದ್ದು, ಸದ್ಯ ಅವರು ಮಂಗಳೂರಿನಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಮಂಕಿ ಪಾಕ್ಸ್ ಬಗ್ಗೆ ಆತಂಕ ಬೇಡ ಎಂದು ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಗುರುವಾರ ಸುದ್ದಿಗಾರರಿಗೆ ತಿಳಿಸಿದರು.ಆ ವ್ಯಕ್ತಿಯ ಸ್ಯಾಂಪಲ್‌ನ್ನು ಲ್ಯಾಬ್‌ಗೆ ಕಳಿಸಲಾಗಿದ್ದು ಆರೋಗ್ಯಾಧಿಕಾರಿಗಳು ವರದಿಯ ನಿರೀಕ್ಷೆಯಲ್ಲಿದ್ದಾರೆ. ಆ ವ್ಯಕ್ತಿಯ ಸಂಬಂಧಿಕರಲ್ಲಿ ರೋಗಲಕ್ಷಣಗಳು ಕಂಡುಬಂದಿಲ್ಲ. ಅವರು ಬೇರೆಡೆಯಿಂದ ಬಂದಿರುವ ವ್ಯಕ್ತಿ. ಅವರನ್ನು ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗಿದೆ.
ಅವರ ಎಲ್ಲಾ ಸಂಬಂಧಿಕರನ್ನು ಪರೀಕ್ಷಿಸಲಾಗಿದೆ. ಯಾರಲ್ಲೂ ರೋಗಲಕ್ಷಣ ಕಂಡುಬಂದಿಲ್ಲ. ಆ ವ್ಯಕ್ತಿ ಕೂಡ ಯಾರನ್ನೂ ಸಂಪರ್ಕ ಮಾಡಿಲ್ಲ. ವಿದೇಶದಿಂದ ಬಂದವರು ನೇರವಾಗಿ ಆಸ್ಪತ್ರೆಗೆ ಬಂದಿದ್ದಾರೆ. ಯಾವುದೇ ಆತಂಕದ ಅವಶ್ಯಕತೆ ಇಲ್ಲ ಎಂದು ಜಿಲ್ಲಾಧಿಕಾರಿ ಸ್ಪಷ್ಟಪಡಿಸಿದರು.