ಸಾರಾಂಶ
ಮೂಡುಬಿದಿರೆ ಶ್ರೀ ಮಹಾವೀರ ಕಾಲೇಜು ೬೦ನೇ ವರ್ಷದ ಸಂಭ್ರಮಾಚರಣೆಯಲ್ಲಿ ರಕ್ಷಕ-ಶಿಕ್ಷಕ ಸಭೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು. ಅಂತಿಮ ಬಿ.ಸಿ.ಎ. ವಿದ್ಯಾರ್ಥಿಗಳಾದ ಲತೇಶ್ ಮತ್ತು ಶ್ರವೀನ್ ನಿರ್ದೇಶನದಲ್ಲಿ ದಿವಂ ಪ್ರೊಡಕ್ಷನ್ ಮೂಲಕ ಹೊರಬಂದ ‘ಕಣ್ಮಣಿ’ ಕಿರುಚಿತ್ರ ಪ್ರದರ್ಶಿಸಲಾಯಿತು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಇಲ್ಲಿನ ಶ್ರೀ ಮಹಾವೀರ ಕಾಲೇಜು ೬೦ನೇ ವರ್ಷದ ಸಂಭ್ರಮಾಚರಣೆಯಲ್ಲಿ ರಕ್ಷಕ-ಶಿಕ್ಷಕ ಸಭೆ ಇತ್ತೀಚೆಗೆ ಕಾಲೇಜಿನಲ್ಲಿ ನಡೆಯಿತು.ಅಧ್ಯಕ್ಷತೆ ವಹಿಸಿದ್ದ ಅಬ್ದುಲ್ ರೆಹಮಾನ್ ಮಾತನಾಡಿ ವಿದ್ಯಾರ್ಥಿಗಳ ಭವಿಷ್ಯದ ದಿನಗಳು ಉತ್ತಮವಾಗಿ ರೂಪುಗೊಳ್ಳಲು ಕಾಲೇಜಿನ ಶಿಕ್ಷಣದ ಜೊತೆಗೆ ಹೆತ್ತವರ ಪಾತ್ರವೂ ಅಗತ್ಯವಾಗಿದೆ. ಮಕ್ಕಳು ಚೆನ್ನಾಗಿ ಓದಿ ಉತ್ತೀರ್ಣರಾಗಲು ಹೆತ್ತವರು ಕಟುಬದ್ಧವಾಗಿರಬೇಕು. ಮಹಾವೀರ ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳು ಉತ್ತಮ ಸ್ಥಾನಕ್ಕೆ ತಲುಪುವುದು ಖಂಡಿತಾ ಸಾಧ್ಯ. ಇಲ್ಲಿ ದೊರಕುವ ಸೌಲಭ್ಯಗಳನ್ನು ಉತ್ತಮವಾಗಿ ಬಳಸಿಕೊಳ್ಳಬೇಕು ಎಂದರು.
ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ರಾಧಾಕೃಷ್ಣ ಪ್ರಾಸ್ತಾವಿಕ ಮಾತನಾಡಿದರು. ಅಂತಿಮ ಬಿ.ಸಿ.ಎ. ವಿದ್ಯಾರ್ಥಿಗಳಾದ ಲತೇಶ್ ಮತ್ತು ಶ್ರವೀನ್ ನಿರ್ದೇಶನದಲ್ಲಿ ದಿವಂ ಪ್ರೊಡಕ್ಷನ್ ಮೂಲಕ ಹೊರಬಂದ ‘ಕಣ್ಮಣಿ’ ಕಿರುಚಿತ್ರ ಪ್ರದರ್ಶಿಸಲಾಯಿತು. ಹಣಕಾಸು ನಿರ್ವಹಣೆ ಘಟಕದ ವರದಿಯನ್ನು ತೃತೀಯ ಬಿ.ಸಿ.ಎ. ವಿದ್ಯಾರ್ಥಿ ಪ್ರಜ್ವಲ್ ನೀಡಿದರು. ಈ ಘಟಕ ನಡೆಸಿದ ಸ್ಪರ್ಧೆಯಲ್ಲಿ ವಿಜೇತರಾದ ಜುವೇರಿಯತುಲ್ ಸಾಝಿಯಾ ಅವರ ಪ್ರಬಂಧ ಮಂಡಿಸಿದರು.ಕಾಲೇಜಿನ ಉದ್ಯೋಗ ಮಾಹಿತಿ ಘಟಕ ಹಮ್ಮಿಕೊಂಡ ಕಾರ್ಯಕ್ರಮ ಮತ್ತು ಉದ್ಯೋಗ ಸಂದರ್ಶನದಲ್ಲಿ ಭಾಗವಹಿಸಿ ಉದ್ಯೋಗ ಪಡೆದ ವಿದ್ಯಾರ್ಥಿಗಳ ವಿವರಗಳನ್ನು ತೃತೀಯ ಬಿ.ಎಸ್ಸಿ. ಜೋಸ್ಲಿನ್ ನೀಡಿದರು. ಪ್ರಸ್ತುತ ಶೈಕ್ಷಣಿಕ ವರ್ಷದ ಪಠ್ಯ ಮತ್ತು ಪಠ್ಯೇತರ ಚಟುವಟಿಕೆಗಳ ಸಾಧನೆಯನ್ನು ತೃತೀಯ ಬಿ.ಸಿ.ಎ. ವಿದ್ಯಾರ್ಥಿ ರೋಹಿಸ್ಟನ್ ಪಿಂಟೋ ವಿವರಿಸಿದರು.
ಪದವಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಎಂ ರಮೇಶ್ ಭಟ್, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪೊ. ಹರೀಶ್ ರಕ್ಷಕ-ಶಿಕ್ಷಕ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾದ ಶಿವಾನಂದ ಪೇರಿ ಹಾಗೂ ತಿಮ್ಮಪ್ಪ ಪೂಜಾರಿ ಇದ್ದರು.ವಿದ್ಯಾರ್ಥಿನಿ ಶಾಶ್ವತಾ ಸ್ವಾಗತಿಸಿದರು. ಅಶ್ವಿನಿ ವಂದಿಸಿದರು. ರಕ್ಷಿತಾ ಶೆಟ್ಟಿ ನಿರೂಪಿಸಿದರು.