ಮೂಡುಬಿದಿರೆ: ವಿದ್ಯುತ್ ಕಂಪನಿ ವಿರುದ್ಧ ರೈತರ ಬೃಹತ್ ಪ್ರತಿಭಟನೆ

| Published : Nov 02 2025, 04:00 AM IST

ಮೂಡುಬಿದಿರೆ: ವಿದ್ಯುತ್ ಕಂಪನಿ ವಿರುದ್ಧ ರೈತರ ಬೃಹತ್ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

440 ಕೆ.ವಿ. ವಿದ್ಯುತ್ ಲೈನ್ ಕಾಮಗಾರಿ ಸಂದರ್ಭ ರೈತರ ಕೃಷಿ ನಾಶ ಮಾಡಿದ್ದಲ್ಲದೆ, ಪೊಲೀಸ್ ಬಲವನ್ನು ಬಳಸಿ ರೈತರ ಮೇಲೆ ದೌರ್ಜನ್ಯವೆಸಗಿದ ವಿದ್ಯುತ್ ಕಂಪನಿ ವಿರುದ್ಧ ಅಶ್ವತ್ಥಪುರ ಸೀತಾರಾಮ ದೇವಸ್ಥಾನದ ಬಳಿ ಬೃಹತ್ ಸಂಖ್ಯೆಯಲ್ಲಿ ಸೇರಿದ ರೈತರು ಬೃಹತ್‌ ಪ್ರತಿಭಟನೆ ನಡೆಸಿದರು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

440 ಕೆ.ವಿ. ವಿದ್ಯುತ್ ಲೈನ್ ಕಾಮಗಾರಿ ಸಂದರ್ಭ ರೈತರ ಕೃಷಿ ನಾಶ ಮಾಡಿದ್ದಲ್ಲದೆ, ಪೊಲೀಸ್ ಬಲವನ್ನು ಬಳಸಿ ರೈತರ ಮೇಲೆ ದೌರ್ಜನ್ಯವೆಸಗಿದ ವಿದ್ಯುತ್ ಕಂಪನಿ ವಿರುದ್ಧ ರೈತರು ಬೃಹತ್‌ ಪ್ರತಿಭಟನೆ ನಡೆಸಿದ್ದಾರೆ.

ಅಶ್ವತ್ಥಪುರ ಸೀತಾರಾಮ ದೇವಸ್ಥಾನದ ಬಳಿ ಬೃಹತ್ ಸಂಖ್ಯೆಯಲ್ಲಿ ಸೇರಿದ ರೈತರು, ಕಂಪನಿ ವಿರುದ್ಧ ಜಾಥಾ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಭಾರತೀಯ ಕಿಸಾನ್ ಸಂಘದ ಮಾಜಿ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ನೇತೃತ್ವ ವಹಿಸಿದ್ದರು.

ರೈತರ ಮೇಲಿನ ದೌರ್ಜನ್ಯ ನಿಲ್ಲಲಿ, ಭೂಮಿ ಉಳಿಸಿ, ಬದುಕಲು ಬಿಡಿ ಎಂಬ ಘೋಷವಾಕ್ಯದೊಂದಿಗೆ ಅಶ್ವತ್ಥಪುರ ದೇವಸ್ಥಾನದಿಂದ ಒಂಟಿಮಾರ್ ವರೆಗೆ ಜಾಥಾ ನಡೆಯಿತು.

ಕೇಮಾರು ಈಶ ವಿಠಲದಾಸ ಸ್ವಾಮೀಜಿ ಜಾಥಾವನ್ನು ಉದ್ಘಾಟಿಸಿ, ಪ್ರತಿಭಟನೆಗೆ ಬೆಂಬಲ ಸೂಚಿಸಿದರು. ಕಟೀಲು ದೇವಸ್ಥಾನದ ಅನಂತ ಆಸ್ರಣ್ಣ, ರೈತ ಸಂಘದ ರಾಜ್ಯ ಮುಖಂಡ ನಾರಾಯಣ ಸ್ವಾಮಿ, ಸುಚರಿತ ಶೆಟ್ಟಿ, ಕೃಷ್ಷಪ್ರಸಾದ್ ತಂತ್ರಿ, ಗ್ರಾ.ಪಂ. ಅಧ್ಯಕ್ಷೆ ಶಾಲಿನಿ, ಪ್ರವೀಣ್ ಭಂಡಾರಿ, ವಸಂತ ಭಟ್, ರವಿರಾಜ್, ಸುರೇಶ್ ಶೆಟ್ಟಿ ದೋಟ, ಬಾಲಕೃಷ್ಣ ದೇವಾಡಿಗ, ಭಾಸ್ಕರ ಶೆಟ್ಟಿ,ಅಲ್ಫೋನ್ಸ್ ನಿಡ್ಡೋಡಿ, ಕೃಷ್ಣಮೂರ್ತಿ ಮತ್ತತರ ಪ್ರಮುಖರು ಈ ಜಾಥಾದಲ್ಲಿ ಭಾಗವಹಿಸಿದ್ದರು.