ಸಾರಾಂಶ
ಪಂಚಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ಲಭಿಸುತ್ತಿದೆಯಾ? ಸಿಗದಿರುತ್ತಿದ್ದರೆ ಅದಕ್ಕೆ ಕಾರಣವೇನು ಮತ್ತು ಪರಿಹಾರ ಹೇಗೆ? ತಿರಸ್ಕೃತ ಅರ್ಜಿಗಳ ವಿಲೇವಾರಿಗಾಗಿ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಮಂಗಳವಾರ ಮೂಡುಬಿದಿರೆ ಸಮಾಜಮಂದಿರದಲ್ಲಿ ವಿಲೇವಾರಿ ಕ್ಯಾಂಪನ್ನು ಹಮ್ಮಿಕೊಂಡಿತ್ತು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳು ಜನರಿಗೆ ಸಮರ್ಪಕವಾಗಿ ಲಭಿಸುತ್ತಿದೆಯಾ? ಸಿಗದಿರುತ್ತಿದ್ದರೆ ಅದಕ್ಕೆ ಕಾರಣವೇನು ಮತ್ತು ಪರಿಹಾರ ಹೇಗೆ? ತಿರಸ್ಕೃತ ಅರ್ಜಿಗಳ ವಿಲೇವಾರಿಗಾಗಿ ಮೂಡುಬಿದಿರೆ ತಾಲೂಕು ಗ್ಯಾರಂಟಿ ಯೋಜನಾ ಸಮಿತಿ ಮಂಗಳವಾರ ಮೂಡುಬಿದಿರೆ ಸಮಾಜಮಂದಿರದಲ್ಲಿ ವಿಲೇವಾರಿ ಕ್ಯಾಂಪನ್ನು ಹಮ್ಮಿಕೊಂಡಿತ್ತು.ಬೇರೆ ಬೇರೆ ಕಾರಣಗಳಿಂದಾಗಿ ಪಂಚಗ್ಯಾರಂಟಿ ಯೋಜನೆಗಳಿಂದ ವಂಚಿತರಾದವರಿಗೆ ಸರಿಪಡಿಸಿ ಪರಿಹಾರ ಒದಗಿಸಲು ಇದೊಂದು ಉತ್ತಮ ಅವಕಾಶವಾಗಿತ್ತು.
ತಾಲೂಕಿನ ವಿವಿಧ ಕಡೆಗಳಿಂದ ಜನರು ತಮ್ಮ ಸಮಸ್ಯೆಗಳೊಂದಿಗೆ ಈ ವಿಲೇವಾರಿ ಶಿಬಿರಕ್ಕೆ ಬಂದಿದ್ದರು. ಸಮಾಜ ಮಂದಿರ ಹೌಸ್‌ಫುಲ್ ಆಗಿತ್ತು.ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿ ಶಿಬಿರ ಉದ್ಘಾಟಿಸಿ ಮಾತನಾಡಿದರು.
ಮಾಜಿ ಸಚಿವ ಕೆ.ಅಭಯಚಂದ್ರ, ಕೆಪಿಸಿಸಿ ಕಾರ್ಯದರ್ಶಿ ಮಿಥುನ್ ರೈ ಭಾಗವಹಿಸಿದರು.ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕುಸುಮಾಕರ್ ಸ್ವಾಗತಿಸಿದರು. ಗ್ಯಾರಂಟಿ ಯೋಜನಾ ತಾಲೂಕು ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಸದಸ್ಯ ಶಿವಾನಂದ ಪಾಂಡ್ರು ನಿರೂಪಿಸಿ ವಂದಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಮೇಲ್ವಿಚಾರಕಿ ಶುಭಾ, ಕೆಎಸ್ಸಾರ್ಟಿಸಿ, ಮೆಸ್ಕಾಂ ಅಧಿಕಾರಿಗಳು, ಗ್ಯಾರಂಟಿ ಯೋಜನಾ ಸಮಿತಿ ಸದಸ್ಯರಾದ ಹರೀಶ್ ಆಚಾರ್ಯ, ರಜನಿ,ಶಕುಂತಲಾ ದೇವಾಡಿಗ,ರೆಕ್ಸನ್ ಪಿಂಟೊ, ಗಣೇಶ್ ಆಚಾರ್ಯ ಮತ್ತಿತರರು ಇದ್ದರು.