ಮೂಡುಬಿದಿರೆ: ತೋಟಗಾರಿಕಾ ಬೆಳೆಗಳ ಸಂಸ್ಕರಣೆ ತರಬೇತಿ

| Published : Aug 10 2025, 02:18 AM IST

ಮೂಡುಬಿದಿರೆ: ತೋಟಗಾರಿಕಾ ಬೆಳೆಗಳ ಸಂಸ್ಕರಣೆ ತರಬೇತಿ
Share this Article
  • FB
  • TW
  • Linkdin
  • Email

ಸಾರಾಂಶ

ಮಂಗಳೂರು ಜಿಲ್ಲಾ ಪಂಚಾಯಿತಿ ತೋಟಗಾರಿಕಾ ಇಲಾಖೆ, ಮೂಡುಬಿದಿರೆ ಕೃಷಿ ವಿಚಾರ ವಿನಿಮಯ ಕೇಂದ್ರ, ರೈತ ಜನ್ಮಯ ರೈತ ಉತ್ಪಾದಕರ ಕಂಪನಿ, ಮೂಡುಬಿದರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿಗಳ ಸಹಭಾಗಿತ್ವದಲ್ಲಿ ತೋಟಗಾರಿಕೆ ಪಿತಾಮಹ ದಿ.ಡಾ. ಎಂ.ಎಚ್. ಮರಿಗೌಡ ಜನ್ಮ ದಿನಾಚರಣೆ ಅಂಗವಾಗಿ ತೋಟಗಾರಿಕೆ ಬೆಳೆಗಳಲ್ಲಿ ಸಂಸ್ಕರಣೆ, ಯೋಜನೆ, ತರಬೇತಿ ಹಾಗೂ ಚರ್ಚಾ ಗೋಷ್ಠಿ ಮೂಡುಬಿದಿರೆ ಕೋ ಆಪರೇಟಿವ್ ಸರ್ವಿಸ್ ಸೊಸೈಟಿ ಸಭಾಂಗಣದಲ್ಲಿ ನಡೆಯಿತು.

ಕನ್ನಡಪ್ರಭ ವಾರ್ತೆ ಮೂಡುಬಿದಿರೆ

ಕಾರ್ಯಕ್ರಮವನ್ನು ಕಲ್ಪವೃಕ್ಷಕ್ಕೆ ನೀರು ಎರೆದು ಶಾಸಕ ಉಮಾನಾಥ ಕೋಟ್ಯಾನ್ ಉದ್ಘಾಟಿಸಿದರು.

ಎಂಸಿಎಸ್ ಬ್ಯಾಂಕ್‌ ಅಧ್ಯಕ್ಷ ಬಾಹುಬಲಿ ಪ್ರಸಾದ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೃಷಿಕರಿಗೆ ನಮ್ಮ ಸೊಸೈಟಿ ಉತ್ತೇಜನವನ್ನು ನೀಡುತ್ತಿದೆ. ಎಲ್ಲ ಸೌಲಭ್ಯಗಳನ್ನು ಕೃಷಿಕರು ಉಪಯೋಗಿಸಿಕೊಳ್ಳಬೇಕೆಂದು ಕೇಳಿಕೊಂಡರು.

ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ., ತೋಟಗಾರಿಕೆ ಬೆಳೆಗಳ ಸಂಸ್ಕರಣೆ, ಯೋಜನೆಗಳ ಬಗ್ಗೆ ತರಬೇತಿ ನೀಡಿದರು. ಆರಂಭದಲ್ಲಿ ಕೃಷಿ ವಿಚಾರ ವಿನಿಮಯ ಕೇಂದ್ರದ ಹಿರಿಯ ಸದಸ್ಯರಾದ ರಾಜವರ್ಮ ಬೈಲಂಗಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.ವೇದಿಕೆಯಲ್ಲಿ ಎಂಸಿಎಸ್ ಬ್ಯಾಂಕಿನ ಕಾರ್ಯನಿರ್ವಾಹಕರಾದ ರಘುವೀರ್ ಕಾಮತ್, ಕೃಷಿ ವಿಚಾರ ಕೇಂದ್ರ ಅಧ್ಯಕ್ಷ ಅಭಯ ಕುಮಾರ್, ರೈತಜನ್ಯ ಸಂಸ್ಥೆಯ ಅಧ್ಯಕ್ಷ ಲಿಯೋ ವಾಲ್ಟರ್ ನಜ್ರೆತ್ ಹಾಜರಿದ್ದರು.ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಪ್ರವೀಣ್ ಕೆ. ಸ್ವಾಗತಿಸಿ, ವಂದಿಸಿದರು. ಸದಾನಂದ ನಾರಾವಿ ಕಾರ್ಯಕ್ರಮ ನಿರ್ವಹಿಸಿದರು.