ಸಾರಾಂಶ
ಮೂಡುಬಿದಿರೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಆಶ್ರಯದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರವು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಮೂಡುಬಿದಿರೆ: ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಹಾಗೂ ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಸಮುದಾಯ ಆರೋಗ್ಯ ಕೇಂದ್ರ ಆಶ್ರಯದಲ್ಲಿ ವಿಶೇಷ ಅಗತ್ಯವುಳ್ಳ ಮಕ್ಕಳಿಗೆ ವೈದ್ಯಕೀಯ ಮೌಲ್ಯಾಂಕನ ಶಿಬಿರವು ಪ್ರಾಂತ್ಯ ಸರ್ಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಪುರಸಭಾ ಸದಸ್ಯ ಇಕ್ಬಾಲ್ ಕರಿಂ, ಶಿಬಿರವನ್ನು ಉದ್ಘಾಟಿಸಿ ಮಕ್ಕಳಿಗೆ ಶುಭ ಹಾರೈಸಿದರು.ಸಮುದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಅಕ್ಷತಾ ನಾಯಕ್ ಭಾಗವಹಿಸಿ, ವೈದ್ಯಕೀಯ ತಪಾಸಣೆಯ ಮಹತ್ವವನ್ನು ತಿಳಿಸಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ, ಪೋಷಕರಿಗೆ ಮತ್ತು ಮಕ್ಕಳಿಗೆ ವಿಶೇಷ ಅಗತ್ಯವುಳ್ಳ ಮಕ್ಕಳ ಸಾಧನ ಸಲಕರಣೆಗಳ ಅಗತ್ಯತೆ ಮತ್ತು ಬಳಕೆಯ ಬಗ್ಗೆ ಹಾಗೂ ಇಲಾಖೆ ಕೈಗೊಳ್ಳುವ ಹಲವಾರು ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು.ಸಮನ್ವಯ ಅಧಿಕಾರಿ ಸೌಮ್ಯ ಪ್ರಾಸ್ತಾವಿಕವಾಗಿ ಮಾತನಾಡಿದರು.
ಐ.ಇ.ಆರ್.ಟಿ.ಸುಶೀಲಾ ಕಾರ್ಯಕ್ರಮ ನಿರೂಪಿಸಿದರು. ಪ್ಲೇವಿ ಡಿಸೋಜ ವಂದಿಸಿದರು.ವೆನ್ಲಾಕ್ ಜಿಲ್ಲಾ ಆಸ್ಪತ್ರೆ ವೈದ್ಯರ ತಂಡ ಆಗಮಿಸಿ ಸುಮಾರು ಐವತ್ತು ವಿದ್ಯಾರ್ಥಿಗಳ ವೈದ್ಯಕೀಯ ತಪಾಸಣೆ ನಡೆಸಿದರು. ಅಲಿಂಕೋ ಸಂಸ್ಥೆಯಿಂದ ಆಗಮಿಸಿದಂತಹ ವೈದ್ಯರು, ಸಾಧನ ಸಲಕರಣೆಗಳ ಅಳತೆ ಮಾಪನವನ್ನು ಪಡೆದು ಸಾಧನ ಸಲಕರಣೆಗಳನ್ನು ಮಂಜೂರು ಗೊಳಿಸಲು ವರದಿಯನ್ನು ನೀಡಿದರು.