ಸಾರಾಂಶ
ರಾಜ್ಯ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪಂಚಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಹಮ್ಮಿಕೊಂಡಿರುವ ಮನೆ ಮನೆಗೆ ಗ್ಯಾರಂಟಿ, ‘ಗ್ಯಾರಂಟಿ ಸಂಭ್ರಮೋತ್ಸವ’ ಕಾರ್ಯಕ್ರಮವು ಮಂಗಳವಾರ ಮೂಡುಬಿದಿರೆಯಲ್ಲಿ ನಡೆಯಿತು.
ಕನ್ನಡಪ್ರಭ ವಾರ್ತೆ ಮೂಡುಬಿದಿರೆ
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಎರಡು ವರ್ಷಗಳನ್ನು ಪೂರೈಸಿರುವ ಹಿನ್ನೆಲೆಯಲ್ಲಿ ಪಂಚಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಹಮ್ಮಿಕೊಂಡಿರುವ ಮನೆ ಮನೆಗೆ ಗ್ಯಾರಂಟಿ, ‘ಗ್ಯಾರಂಟಿ ಸಂಭ್ರಮೋತ್ಸವ’ ಕಾರ್ಯಕ್ರಮವು ಮಂಗಳವಾರ ಮೂಡುಬಿದಿರೆಯಲ್ಲಿ ನಡೆಯಿತು.ಪುರಸಭಾ ಸದಸ್ಯೆ,ಗ್ಯಾರಂಟಿ ಯೋಜನಾ ಸದಸ್ಯೆ ಶಕುಂತಲಾ ಹರೀಶ್ ದೇವಾಡಿಗ ಅವರ ವಾರ್ಡ್ ನ ನಾಗರಕಟ್ಟೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಅವರು ಭಾಗವಹಿಸಿದ್ದರು.
ಈ ಸಂದರ್ಭ ಮಾತನಾಡಿದ ಅವರು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆದಿದೆ, ಪಂಚ ಗ್ಯಾರಂಟಿಗಳ ಮೂಲಕ ಬಡ ಜನರ ಬಾಳಿಗೆ ನೆರವಾಗುತ್ತಿದೆ, ಇದನ್ನು ಸಹಿಸಲಾಗದ ವಿರೋಧ ಪಕ್ಷದವರು ಏನೆಲ್ಲಾ ಹೇಳುತ್ತಿದ್ದಾರೆ,ಆದರೆ ಈ ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ತಮಗೆ ಸರಕಾರದಿಂದ ಸಿಗುತ್ತಿರುವ ಗ್ಯಾರಂಟಿ ಯೋಜನೆಗಳು,ಸೌಲಭ್ಯಗಳ ಬಗ್ಗೆ ನೆಮ್ಮದಿ ಇದೆ, ಮೂಡುಬಿದಿರೆಯಲ್ಲಿ ಅರುಣ್ ಕುಮಾರ್ ಶೆಟ್ಟಿ ನೇತೃತ್ವದ ಗ್ಯಾರಂಟಿ ಅನುಷ್ಠಾನ ಸಮಿತಿ ಈ ಭಾಗದ ಜನರಿಗೆ ಪ್ರಾಮಾಣಿಕವಾಗಿ ಸ್ಪಂದಿಸುತ್ತಿದೆ, ಜನರಿಗೆ ಇದರಿಂದ ಲಾಭವಾಗುತ್ತಿದೆ ಎಂದರು.ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷ ಅರುಣ್ ಕುಮಾರ್ ಶೆಟ್ಟಿ, ಸದಸ್ಯರಾದ ಶೌಕತ್ ಬೆಳುವಾಯಿ, ಶಕುಂತಲಾ ದೇವಾಡಿಗ, ಗಣೇಶ್ ಆಚಾರ್ಯ, ಹರೀಶ್ ಆಚಾರ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಮಾಜಿ ಅಧ್ಯಕ್ಷ ವಲೇರಿಯನ್ ಸಿಕ್ವೇರ, ಬ್ಲಾಕ್ ಕಾಂಗ್ರೆಸ್ ವಕ್ತಾರ ರಾಜೇಶ್ ಕಡಲಕೆರೆ, ಯೂತ್ ಕಾಂಗ್ರೆಸ್ ಅಧ್ಯಕ್ಷ ಅನೀಶ್ ಡಿಸೋಜ ಮತ್ತಿತರರು ಇದ್ದರು.
;Resize=(128,128))
;Resize=(128,128))