ಸಾರಾಂಶ
ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ -2025 ಸ್ವರಾಜ್ಯ ಮೈದಾನದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು.
ಮೂಡುಬಿದಿರೆ: ಮೂಡುಬಿದಿರೆ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ -2025 ಸ್ವರಾಜ್ಯ ಮೈದಾನದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ನಡೆಯಿತು. ಪುರಸಭಾಧ್ಯಕ್ಷೆ ಜಯಶ್ರೀ ಕೇಶವ್ ಅಧ್ಯಕ್ಷತೆ ವಹಿಸಿ ಉದ್ಘಾಟಿಸಿದರು.ಮಾಜಿ ಕ್ರೀಡಾ ಸಚಿವ ಅಭಯಚಂದ್ರ ಜೈನ್ ಕ್ರೀಡಾ ಧ್ವಜಾರೋಹಣಗೊಳಿಸಿ ಮಾತನಾಡಿ, ಇಡೀ ಕರ್ನಾಟಕದಲ್ಲಿ ತಾಲೂಕಿನಲ್ಲಿ ಸಿಂಥೆಟಿಕ್ ಟ್ರಾಕ್ ನ್ನೊಳಗೊಂಡ ಸುಸಜ್ಜಿತವಾದ ಕ್ರೀಡಾಂಗಣ ಇರುವುದೆಂದರೆ ಮೂಡುಬಿದಿರೆಯಲ್ಲಿ ಮಾತ್ರ. ಆದರೆ ಈ ಕ್ರೀಡಾಂಗಣವು ಮೋಹನ್ ಆಳ್ವರ ಕ್ರೀಡಾಭಿಮಾನದಲ್ಲಿ ಅಂದಿನಿಂದ ಇಂದಿನವರೆಗೂ ನಿರ್ವಹಣೆ ಮಾಡುತ್ತಿರುವುದು ಶ್ಲಾಘನೀಯ ಎಂದರು.ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಕುಸುಮಾಧರ್, ಪುರಸಭಾ ಸದಸ್ಯ ಸುರೇಶ್ ಕೋಟ್ಯಾನ್, ಜಿಲ್ಲಾ ಯುವಜನ ಕ್ರೀಡಾ ಇಲಾಖೆಯ ಸರಸ್ವತಿ ಪುತ್ರನ್, ನಾಗೇಶ್ ಇದ್ದರು.ಕ್ರೀಡಾಕೂಟದ ನೋಡಲ್ ಅಧಿಕಾರಿ ನವೀನ್ ಚಂದ್ರ ಅಂಬೂರಿ ಸ್ವಾಗತಿಸಿ, ನಿರ್ವಹಿಸಿದರು.ವಿವಿಧ ರನ್ನಿಂಗ್ ರೇಸ್ ನಲ್ಲಿ ವಿಜೇತರಾದ ಕ್ರೀಡಾಪಟುಗಳಿಗೆ ಕ್ರೀಡಾ ಪದಕ ನೀಡಿ ಗೌರವಿಸಲಾಯಿತು.
ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮೂಡುಬಿದಿರೆ ತಾಲೂಕು ಪಂಚಾಯಿತಿ, ಪುರಸಭೆ, ಯುವಜನ ಒಕ್ಕೂಟ, ಹಾಗೂ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು.