ಸಾರಾಂಶ
ಕನ್ನಡಪ್ರಭ ವಾರ್ತೆ ಕುಂದಾಪುರ
ಇಲ್ಲಿನ ಮೂಡ್ಲಕಟ್ಟೆ ಐಎಂಜೆ ವಿಜ್ಞಾನ ಮತ್ತು ವಾಣಿಜ್ಯ ಕಾಲೇಜಿನಲ್ಲಿ ಐಟಿ ಮತ್ತು ಕೋಡಿಂಗ್ ಕ್ಲಬ್ ಆಶ್ರಯದಲ್ಲಿ ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ ಮತ್ತು ಬಾಹ್ಯಾಕಾಶ ವಿಜ್ಞಾನಕ್ಕೆ ಸಂಬಂಧಿಸಿದ ನವೀನ ಮಾದರಿಗಳ ಪ್ರದರ್ಶನ ಜರುಗಿತು.ಈ ಮೂಲಕ ವಿದ್ಯಾರ್ಥಿಗಳು ಬಾಹ್ಯಾಕಾಶ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷಯವನ್ನು ಅನ್ವೇಷಿಸಲು ಪ್ರದರ್ಶನವು ಸೃಜನಶೀಲ ವೇದಿಕೆಯಾಗಿ ಕಾರ್ಯನಿರ್ವಹಿಸಿತು.ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಆಗಮಿಸಿದ ಮೂಡ್ಲಕಟ್ಟೆ ಎಂಐಟಿಯ ಡೇಟಾ ಸೈನ್ಸ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ. ಕಾರ್ತಿಕೇಯನ್ ಕಾರ್ಯಕ್ರಮ ಉದ್ಘಾಟಿಸಿ, ಬಾಹ್ಯಾಕಾಶ ವಿಜ್ಞಾನಕ್ಕೆ ಉಜ್ವಲ ಭವಿಷ್ಯ ಇದೆ. ಈ ಬಗ್ಗೆ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು ಎಂದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ. ಪಟೇಲ್ ಉಪಸ್ಥಿತರಿದ್ದರು. ಬಿಸಿಎ ವಿಭಾಗದ ಮುಖ್ಯಸ್ಥೆ ಮತ್ತು ಐಟಿ ಮತ್ತು ಕೋಡಿಂಗ್ ಕ್ಲಬ್ ಸಂಯೋಜಕಿ ಸ್ವರ್ಣರಾಣಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದರು. ವಿದ್ಯಾರ್ಥಿ ಸಂಯೋಜಕರಾದ ತೃತೀಯ ಬಿಸಿಎ ವಿದ್ಯಾರ್ಥಿಗಳಾದ ಅಶ್ವಿನ್ ಎ.ಜೆ. ಮತ್ತು ತೀರ್ಥ ಕುಲಾಲ್ ಉಪಸ್ಥಿತರಿದ್ದರು.ಎಂಐಟಿಯಲ್ಲಿ ಕಾರ್ಯಾಗಾರ:
ಇಲ್ಲಿನ ಎಂಐಟಿಯ ಎಂಬಿಎ ವಿದ್ಯಾರ್ಥಿಗಳಿಗೆ ‘ಮೈಕ್ರೋ ಸೆಷನ್ ಆನ್ ಎಂಟ್ರೆಪ್ರೆನರ್‌ಶಿಪ್ ಆ್ಯಂಡ್ ಇಂಡಸ್ಟ್ರಿ ಟ್ರೆಂಡ್ಸ್’ ಎಂಬ ಕಾರ್ಯಾಗಾರ ನಡೆಸಲಾಯಿತು. ಸಂಪನ್ಮೂಲ ವ್ಯಕ್ತಿಯಾಗಿ ಅವಿನ್ಯ ಟ್ಯಾಲೆಂಟ್ (ಕೆನಡಾ) ಸಂಸ್ಥಾಪಕಿ ಶ್ರುತಿ ದಿನಕರ್ ಆಗಮಿಸಿದ್ದರು.ಕಾರ್ಯಕ್ರಮದಲ್ಲಿ ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ ಹೆಗ್ಡೆ, ಐಎಂಜೆ ಸಂಶೋಧನಾ ಕೇಂದ್ರದ ಡಾ. ಸತ್ಯಜಿತ್, ಎಂಬಿಎ ವಿಭಾಗದ ಮುಖ್ಯಸ್ಥೆ ಡಾ.ಸುಚಿತ್ರ ಪೂಜಾರಿ ಉಪಸ್ಥಿತರಿದ್ದರು. ಸಿಂಚನಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.