ಸಾರಾಂಶ
ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಲಲಿತಕಲಾ ಸಂಘ ಹಾಗೂ ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ‘ಗಣೇಶ ಉತ್ಸವ - 2025’ನ್ನು ಸಂಭ್ರಮದಿಂದ ಆಚರಿಸಲಾಯಿತು.
ಕುಂದಾಪುರ: ಇಲ್ಲಿನ ಮೂಡ್ಲಕಟ್ಟೆಯ ಐ.ಎಂ.ಜೆ. ವಿಜ್ಞಾನ ಮತ್ತು ವಾಣಿಜ್ಯ ಸಂಸ್ಥೆಯಲ್ಲಿ ಲಲಿತಕಲಾ ಸಂಘ ಹಾಗೂ ಸಾಹಿತ್ಯ ಸಂಘದ ಜಂಟಿ ಆಶ್ರಯದಲ್ಲಿ ‘ಗಣೇಶ ಉತ್ಸವ - 2025’ನ್ನು ಸಂಭ್ರಮದಿಂದ ಆಚರಿಸಲಾಯಿತು. ಪ್ರತಿ ವರ್ಷವೂ ಕಾಲೇಜಿನಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದ್ದು, ಈ ವರ್ಷದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳೇ ರಚಿಸಿದ ವೇದಿಕೆಯಲ್ಲಿ ಗಣೇಶನ ಹಬ್ಬದ ಸಂಭ್ರಮಾಚರಣೆ ನಡೆಸಲಾಯಿತು.
ವಿಶೇಷವಾಗಿ ದ್ವಿತೀಯ ಬಿಸಿಎ ವಿದ್ಯಾರ್ಥಿನಿ ರಮಿತಾ ಬಿಡಿಸಿದ ಗಣೇಶನ ಚಿತ್ರವನ್ನು ಪೂಜಿಸಲಾಯಿತು. ದ್ವಿತೀಯ ಬಿ.ಕಾಂ ವಿದ್ಯಾರ್ಥಿನಿ ಹರ್ಷಿತಾ ರಚಿಸಿದ ಗಣೇಶನ ಚಿತ್ರಪಟ ವಿಶೇಷ ಆಕರ್ಷಣೆಯಾಗಿತ್ತು. ಕಾರ್ಯಕ್ರಮದ ಕೇಂದ್ರ ಬಿಂದುವಾಗಿ ಗಣೇಶನ ಜನನ ಕಥನವನ್ನು ಅಭಿನಯ ಮತ್ತು ನೃತ್ಯದ ರೂಪಕದಲ್ಲಿ ವಿದ್ಯಾರ್ಥಿಗಳು ಪ್ರದರ್ಶಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಪ್ರತಿಭಾ ಎಂ. ಪಟೇಲ್, ಉಪ ಪ್ರಾಂಶುಪಾಲ ಜಯಶೀಲ್ ಕುಮಾರ್, ಸಂಸ್ಥೆಯ ಬ್ರ್ಯಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ. ರಾಮಕೃಷ್ಣ, ಲಲಿತಾ ಕಲಾ ಸಂಘ ಹಾಗೂ ಸಾಹಿತ್ಯ ಸಂಘದ ಸಂಯೋಜಕರು ಮತ್ತು ವಿದ್ಯಾರ್ಥಿ ಸಂಯೋಜಕರು, ಉಪನ್ಯಾಸಕ ವೃಂದದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ದ್ವಿತೀಯ ಬಿಸಿಎ ವಿದ್ಯಾರ್ಥಿನಿ ಶ್ರೀ ರಕ್ಷಾ ನಿರೂಪಿಸಿದರು.