ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ (ಎಂಐಟಿಕೆ) ಇದರ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ವತಿಯಿಂದ ಕಾಲೇಜಿನಲ್ಲಿ ‘ಬಜೆಟ್ ವಿಶ್ಲೇಷಣೆ–2026’ ಕುರಿತ ಸ್ಪರ್ಧೆ

ಕನ್ನಡಪ್ರಭ ವಾರ್ತೆ ಕುಂದಾಪುರ

ಇಲ್ಲಿನ ಮೂಡ್ಲಕಟ್ಟೆ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕುಂದಾಪುರ (ಎಂಐಟಿಕೆ) ಇದರ ಮ್ಯಾನೇಜ್ಮೆಂಟ್ ಸ್ಟಡೀಸ್ ವಿಭಾಗದ ವತಿಯಿಂದ ಕಾಲೇಜಿನಲ್ಲಿ ‘ಬಜೆಟ್ ವಿಶ್ಲೇಷಣೆ–2026’ ಕುರಿತ ಸ್ಪರ್ಧೆಯನ್ನು ಎಂಬಿಎ ವಿದ್ಯಾರ್ಥಿಗಳಿಗಾಗಿ ಯಶಸ್ವಿಯಾಗಿ ಆಯೋಜಿಸಲಾಯಿತು.

ಕಾರ್‍ಯಕ್ರಮವನ್ನು ಕಾಲೇಜಿನ ಪ್ರಾಂಶುಪಾಲ ಡಾ. ರಾಮಕೃಷ್ಣ ಹೆಗ್ಡೆ ಉದ್ಘಾಟಿಸಿ, ಸ್ಪರ್ಧೆಗೆ ಶುಭ ಹಾರೈಸಿದರು. ಈ ಸ್ಪರ್ಧೆಯ ಉದ್ದೇಶ ವಿದ್ಯಾರ್ಥಿಗಳಿಗೆ ಕೇಂದ್ರ ಬಜೆಟ್ 2026 ಕುರಿತು ಆಳವಾದ ಅರಿವು ಮೂಡಿಸುವುದಾಗಿದ್ದು, ವಿದ್ಯಾರ್ಥಿಗಳು ಬಜೆಟ್‌ನ ಆದಾಯ–ವೆಚ್ಚವಿನ್ಯಾಸ, ವಿವಿಧ ಕ್ಷೇತ್ರಗಳಿಗೆ ನೀಡಿರುವ ಅನುದಾನ ಹಾಗೂ ಆರ್ಥಿಕ ಪರಿಣಾಮಗಳ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಕೋಟದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಅವರು ತೀರ್ಪುಗಾರರಾಗಿದ್ದರು. ಅವರು ವಿದ್ಯಾರ್ಥಿಗಳ ವಿಶ್ಲೇಷಣಾತ್ಮಕ ದೃಷ್ಟಿಕೋನ ಮತ್ತು ಪ್ರೆಸೆಂಟೇಶನ್ ಕೌಶಲ್ಯವನ್ನು ಮೆಚ್ಚಿ, ಉಪಯುಕ್ತ ಸಲಹೆಗಳನ್ನು ನೀಡಿದರು. ಜೊತೆಗೆ ಎಂಬಿಎ ವಿಭಾಗದ ಸಹಾಯಕ ಪ್ರಾಧ್ಯಾಪಕ ಪರಿಚರಣ್ ಅವರು ಆಂತರಿಕ ಮೌಲ್ಯಮಾಪಕರಾಗಿ ಕಾರ್ಯನಿರ್ವಹಿಸಿದರು. ಸ್ಪರ್ಧೆಯಲ್ಲಿ ಉತ್ತಮ ಪ್ರದರ್ಶನ ನೀಡಿದ ವಿದ್ಯಾರ್ಥಿಗಳಿಗೆ ವಿಜೇತ ಮತ್ತು ರನ್ನರ್‌ಅಪ್ ಬಹುಮಾನ, ನಗದು ಬಹುಮಾನ ಹಾಗೂ ಟ್ರೋಫಿ ನೀಡಿ ಗೌರವಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಮುಖ್ಯಸ್ಥೆ ಡಾ. ಸುಚಿತ್ರ ಪೂಜಾರಿ ಹಾಗೂ ಇತರ ಉಪನ್ಯಾಸಕರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಎಂಬಿಎ ಪ್ರಥಮ ವರ್ಷದ ವಿದ್ಯಾರ್ಥಿನಿ ಅದಿತಿ ಅವರು ನಿರ್ವಹಿಸಿದರು. ಪ್ರಥಮ ವರ್ಷದ ಎಂಬಿಎ ವಿದ್ಯಾರ್ಥಿನಿ ಶ್ವೇತಾ ವಂದಿಸಿದರು.