ಕಕುಂದಾಪುರ: ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯಲ್ಲಿ ವಿಶ್ವ ಭೂ ಸಪ್ತಾಹದ ಅಂಗವಾಗಿ ರಿಸರ್ಚ್ ಹೈಟ್ಸ್ ಫೌಂಡೇಶನ್ ಆಶ್ರಯದಲ್ಲಿ ಹಾಗೂ ಎನ್ವಿರಾನ್ಮೆಂಟ್ ಪ್ರೊಟೆಕ್ಷನ್ ಟ್ರೈನಿಂಗ್ ಅಂಡ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಹಯೋಗದಲ್ಲಿ ‘ಇಂಡಿಯಾ ಎನ್ವಿರಾನ್‌ಮೆಂಟ್ ಪ್ರೋಗ್ರಾಂ-ಇಂಡಿಯಾ ಸಸ್ಟೇನಬಲ್ ಕ್ಯಾಂಪಸ್ ಮಿಷನ್ 2026’ ಎಂಬ ಒಂದು ವಾರ ಕಾಲ ಅಭಿಯಾನವನ್ನು ಆಯೋಜಿಸಲಾಗಿತ್ತು.ಈ ‘ಅರ್ಥ್ ವೀಕ್’ ಸಂಭ್ರಮಾಚರಣೆಯ ಭಾಗವಾಗಿ, ಕ್ಯಾಂಪಸ್‌ನಲ್ಲಿ ಸುಸ್ಥಿರ ಜೀವನಶೈಲಿ ಮತ್ತು ಪರಿಸರ ಜಾಗೃತಿಯನ್ನು ಉತ್ತೇಜಿಸುವುದು ಈ ಯೋಜನೆಯ ಪ್ರಮುಖ ಉದ್ದೇಶವಾಗಿತ್ತು.ತ್ಯಾಜ್ಯ ನಿರ್ವಹಣೆ, ಹಸಿರು ಅಭ್ಯಾಸಗಳ ಅಳವಡಿಕೆ ಹಾಗೂ ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಹವಾಮಾನ ಬದಲಾವಣೆಯ ಸವಾಲುಗಳನ್ನು ಎದುರಿಸಲು ಮತ್ತು ಪರಿಸರ ಸಂರಕ್ಷಣೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಲು ವಿದ್ಯಾರ್ಥಿಗಳು ಉತ್ಸಾಹದಿಂದ ಪ್ರತಿಜ್ಞೆ ಮಾಡಿದರು.ಕಾಲೇಜಿನ ಪ್ರಾಂಶುಪಾಲರ ನೇತೃತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಿವಿಧ ವಿಭಾಗಗಳ ಮುಖ್ಯಸ್ಥರು, ಉಪನ್ಯಾಸಕರು ಹಾಗೂ ನೂರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ಕುಂದಾಪುರ: ಎಂಐಟಿಯಲ್ಲಿ ವಿಶ್ವ ಭೂ ಸಪ್ತಾಹ ಆಚರಣೆ
ಇಲ್ಲಿನ ಮೂಡ್ಲಕಟ್ಟೆ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (ಎಂಐಟಿ)ಯಲ್ಲಿ ವಿಶ್ವ ಭೂ ಸಪ್ತಾಹದ ಅಂಗವಾಗಿ ರಿಸರ್ಚ್ ಹೈಟ್ಸ್ ಫೌಂಡೇಶನ್ ಆಶ್ರಯದಲ್ಲಿ ಹಾಗೂ ಎನ್ವಿರಾನ್ಮೆಂಟ್ ಪ್ರೊಟೆಕ್ಷನ್ ಟ್ರೈನಿಂಗ್ ಅಂಡ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಸಹಯೋಗದಲ್ಲಿ ‘ಇಂಡಿಯಾ ಎನ್ವಿರಾನ್‌ಮೆಂಟ್ ಪ್ರೋಗ್ರಾಂ-ಇಂಡಿಯಾ ಸಸ್ಟೇನಬಲ್ ಕ್ಯಾಂಪಸ್ ಮಿಷನ್ 2026’ ಎಂಬ ಒಂದು ವಾರ ಕಾಲ ಅಭಿಯಾನವನ್ನು ಆಯೋಜಿಸಲಾಗಿತ್ತು.
Latest Videos
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.