ಎಕ್ಸಲೆಂಟ್ ಮೂಡುಬಿದಿರೆಯ ಜೂನಿಯರ್ ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 29ರಂದು ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ನಡೆಯಿತು.

ಮೂಡುಬಿದಿರೆ: ಎಕ್ಸಲೆಂಟ್ ಮೂಡುಬಿದಿರೆಯ ಜೂನಿಯರ್ ರೆಡ್ ಕ್ರಾಸ್ ಹಾಗೂ ರೋವರ್ಸ್ ಮತ್ತು ರೇಂಜರ್ಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ಅಕ್ಟೋಬರ್ 29ರಂದು ಪ್ರಥಮ ಚಿಕಿತ್ಸಾ ತರಬೇತಿ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲ ಪುಷ್ಪರಾಜ್ ಮಾತನಾಡಿ, “ತುರ್ತು ಸಂದರ್ಭಗಳಲ್ಲಿ ಪ್ರಥಮ ಚಿಕಿತ್ಸೆ ನೀಡುವ ಜ್ಞಾನ ಮತ್ತು ಅದರ ಬಳಕೆಯ ಬಗ್ಗೆ ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ತಿಳಿದುಕೊಳ್ಳಬೇಕು. ತಮ್ಮ ಜೀವನದಲ್ಲಿ ಎದುರಾಗುವ ತುರ್ತು ಸಂದರ್ಭಗಳಲ್ಲಿ ಹಾಗೂ ಇತರರ ಜೀವ ರಕ್ಷಣೆಗೆ ಪ್ರಥಮ ಚಿಕಿತ್ಸಾ ತರಬೇತಿ ಅತ್ಯಗತ್ಯವಾಗಿದೆ,” ಎಂದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸ್ಕೌಟ್ಸ್ ಲೀಡರ್ ಚೇವಾರು ವಿನೋದ್ ಅವರು ಪ್ರಥಮ ಚಿಕಿತ್ಸೆಯ ವಿವಿಧ ವಿಧಾನಗಳು, ತಂತ್ರಗಳು ಹಾಗೂ ಅವುಗಳ ಬಳಕೆಯ ಕುರಿತು ವಿದ್ಯಾರ್ಥಿಗಳಿಗೆ ಪ್ರಾತ್ಯಕ್ಷಿಕೆಗಳ ಮೂಲಕ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ವಾಣಿಜ್ಯ ವಿಭಾಗದ ಮುಖ್ಯಸ್ಥ ಪ್ರಶಾಂತ್ ಶೆಟ್ಟಿ, ಉಪನ್ಯಾಸಕರಾದ ಪ್ರದೀಪ್, ಅಶೋಕ್, ಸಂಧ್ಯಾ ಹಾಗೂ ಭಾಸ್ಕರ್ ನೆಲ್ಯಾಡಿ ಉಪಸ್ಥಿತರಿದ್ದರು.