ಸಾರಾಂಶ
ಕನ್ನಡಪ್ರಭ ವಾರ್ತೆ ಮೂಗೂರುಗ್ರಾಮದ ಕೆಪಿಎಸ್ ಶಾಲೆಯ ವಿಭಾಗದ ವಿದ್ಯಾರ್ಥಿಗಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಸಂಸ್ಥೆ ವತಿಯಿಂದ ಟ್ಯೂಷನ್ ಕ್ಲಾಸ್ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು. ತಾಲೂಕು ಯೋಜನಾಧಿಕಾರಿ ಹನುಮಂತಪ್ಪ ಅಂಗಡಿ ಹಾಗೂ ಕೆಪಿಎಸ್. ಶಾಲೆಯ ಉಪ ಪ್ರಾಂಶುಪಾಲ ಪುಟ್ಟಸ್ವಾಮಿ ಉದ್ಘಾಟಿಸಿದರು.ನಂತರ ಹನುಮಂತಪ್ಪ ಅಂಗಡಿ ಮಾತನಾಡಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ 1982 ಸಾಲಿನಿಂದಲೂ ಶಾಲೆಗಳಿಗೆ ಸೌಲಭ್ಯ ಕೊಡುತ್ತಿದೆ. ಆಟದ ಮೈದಾನ ಅಭಿವೃದ್ಧಿ ಪಡಿಸುವುದು ಹಾಗೂ ಶೌಚಾಲಯದ ವ್ಯವಸ್ಥೆ.ಕುಡಿಯುವ ನೀರು ವ್ಯವಸ್ಥೆ ಹಾಗೂ ವಿದ್ಯಾರ್ಥಿಗಳಿಗೆ ಡೆಸ್ಕ್ ವ್ಯವಸ್ಥೆ ಹಾಗೂ ಶಾಲೆಗಳಿಗೆ ಅತಿಥಿ ಶಿಕ್ಷಕರನ್ನು ನೇಮಿಸಿ ಅವರಿಗೆ ಶಿಕ್ಷಕರಿಗೆ ತಿಂಗಳಿಗೆ 8 ರಿಂದ 10 ಸಾವಿರ ರುಪಾಯಿಗಳನ್ನು ಸಂಸ್ಥೆ ನೀಡುತ್ತಿದೆ ಎಂದರು. ಶಾಲೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳನ್ನು ಗುರುತಿಸಿ ಅತಿ ಹೆಚ್ಚು ಅಂಕ ಗಳಿಸಲು ವಿಶೇಷ ತರಗತಿಗಳನ್ನು ಏರ್ಪಡಿಸಿದೆ ಎಂದು ಹೇಳಿದರು ಉಪ ಪ್ರಾಂಶುಪಾಲ ಪುಟ್ಟಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗಳಿಂದ ಹಾಗೂ ಟಿವಿ ಗಳಿಂದ ದೂರ ಉಳಿಯಬೇಕು ಹೆಚ್ಚು ಅಂಕಗಳನ್ನು ಗಳಿಸಿ ಶಾಲೆಗೇ ಕೀರ್ತಿ ತರಬೇಕು ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮೂಗೂರು ವಲಯಾಧಿಕಾರಿ ಕುಮಾರಿ, ಜ್ಞಾನ ವಿಕಾಸ ಸಂಸ್ಥೆಯ ಸಮನ್ವಯಾಧಿಕಾರಿ ಕಾವೇರಿ ಸಂಘದ ಒಕ್ಕೂಟದ ಅಧ್ಯಕ್ಷೆ ಸಾವಿತ್ರಿ ಹಾಗೂ ಶಿಕ್ಷಕರಾದ ಕೇಶವ, ರಮೇಶ, ಮಂಜುನಾಥ ಹಾಗೂ ಸಂಘದ ಸದಸ್ಯರುಗಳು ಮತ್ತು ವಿದ್ಯಾರ್ಥಿಗಳು ಇದ್ದರು.