ಮೂಕಾಂಬಿಕಾ ಪದವಿ ಪೂರ್ವ ಕಾಲೇಜು ಪ್ರಥಮ

| Published : Oct 20 2025, 01:04 AM IST

ಸಾರಾಂಶ

ಜಿಲ್ಲಾ ಮಟ್ಟದಲ್ಲಿ ಕುಶಾಲನಗರ ಮೂಕಾಂಬಿಕಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ.

ಕನ್ನಡಪ್ರಭ ವಾರ್ತೆ ಕುಶಾಲನಗರ ಕುಶಾಲನಗರ ಮೂಕಾಂಬಿಕಾ ಪದವಿ ಪೂರ್ವ ಕಾಲೇಜಿನ 2025- 26ನೇ ಸಾಲಿನ ಪದವಿ ಪೂರ್ವ ಕಾಲೇಜುಗಳ ಬಾಲಕರ ತಂಡ ಕಬಡ್ಡಿ ವಿಭಾಗದಲ್ಲಿ ಜಿಲ್ಲಾ ಮಟ್ಟದಲ್ಲಿ ಕುಶಾಲನಗರ ಮೂಕಾಂಬಿಕಾ ಪದವಿ ಪೂರ್ವ ಕಾಲೇಜು ಪ್ರಥಮ ಸ್ಥಾನವನ್ನು ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ ಪಿ ಚಂದ್ರಕಲ, ಪ್ರಾಂಶುಪಾಲರಾದ ಬಿ ಎಸ್ ಪ್ರಸನ್ನ, ದೈಹಿಕ ಶಿಕ್ಷಣ ಶಿಕ್ಷಕರಾದ ಮತ್ತು ಮುಖ್ಯೋಪಾಧ್ಯಾಯರಾದ ಡಿ ಕೆ ಸುರೇಶ್ ಹಾಗೂ ಉಪನ್ಯಾಸಕರು ವಿಜೇತ ತಂಡಕ್ಕೆ ಅಭಿನಂದನೆ ಸಲ್ಲಿಸಿದ್ದಾರೆ.