ವಿರಾಜಪೇಟೆ : ಪೆರಂಬಾಡಿ ಚೆಕ್‌ಪೋಸ್ಟ್‌ನಲ್ಲಿ ನಡೆದಿರುವ ಎನ್ನಲಾದ ನೈತಿಕ ಪೊಲೀಸ್‌ಗಿರಿ ವಿರೋಧಿಸಿ ಬಿಜೆಪಿ ವಿರಾಜಪೇಟೆ ಮಂಡಲ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.

ವಿರಾಜಪೇಟೆ : ಪೆರಂಬಾಡಿ ಚೆಕ್‌ಪೋಸ್ಟ್‌ನಲ್ಲಿ ನಡೆದಿರುವ ಎನ್ನಲಾದ ನೈತಿಕ ಪೊಲೀಸ್‌ಗಿರಿ ವಿರೋಧಿಸಿ ಬಿಜೆಪಿ ವಿರಾಜಪೇಟೆ ಮಂಡಲ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.ಪ್ರತಿಭಟನೆಯ ಅಂಗವಾಗಿ ವಿರಾಜಪೇಟೆ-ಮಾಕುಟ್ಟ ಅಂತರರಾಜ್ಯ ರಸ್ತೆಯನ್ನು ಬಂದ್ ಮಾಡಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಪೆರಂಬಾಡಿ ಚೆಕ್‌ಪೋಸ್ಟ್ ಬಳಿ ಪ್ರತಿಭಟನಾಕಾರರು ರಸ್ತೆ ತಡೆ ನಡೆಸಿದ್ದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿ, ರಸ್ತೆಯ ಎರಡೂ ಬದಿಗಳಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತಿದ್ದವು.ಘಟನೆ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪ್ರಯಾಣಿಕರು ಹಾಗೂ ವಾಹನ ಸವಾರರು ಪರದಾಡುವಂತಾಯಿತು.ಘಟನೆಗೆ ಸಂಬಂಧಿಸಿದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯರು ಭಾಗವಹಿಸಿದ್ದರು.

ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿಗಳಾದ ಬಿಂದು ಮಣಿ ಮನವಿ ಪತ್ರ ಸ್ವೀಕರಿಸಿದರು. ಹೆಚ್ಚಿನ ಪೊಲೀಸ್ ಬಂದೋಬಸ್ತು ಏರ್ಪಡಿಸಲಾಗಿತ್ತು. ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿ ಕಾಳಪ್ಪ, ವಿಧಾನ ಪರಿಷತ್ ಸದಸ್ಯ ಸುಜಾ ಕುಶಾಲಪ್ಪ, ಪ್ರಮುಖರಾದ ರವಿ ಕುಶಾಲಪ್ಪ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.