ಸಾರಾಂಶ
ಕನ್ನಡಪ್ರಭ ವಾರ್ತೆ ಬಂಗಾರಪೇಟೆ
ಕೋಮುಲ್ ವತಿಯಿಂದ ಅಕ್ರಮವಾಗಿ ಹುತ್ತೂರು ಗ್ರಾಮದಲ್ಲಿ ಸ.ನಂ.೧೦೩ರಲ್ಲಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ ಅಂಬೇಡ್ಕರ್ ವಸತಿ ಶಾಲೆ ನಿರ್ಮಾಣಕ್ಕೆ ಮೀಸಲಿಟ್ಟಿದ್ದ ಜಾಗವನ್ನು ಒತ್ತುವರಿ ಮಾಡಿಕೊಂಡು ಸೋಲಾರ್ ಪ್ಯಾನಲ್‌ನ್ನು ಅಳವಿಡಿಸಿರುವುದನ್ನು ಕೂಡಲೇ ತೆರವುಗೊಳಿಸಬೇಕೆಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.ಕೋಲಾರ ತಾಲೂಕು ಹುತ್ತೂರು ಹೋಬಳಿಯ ಸ.ನಂ. ೧೦೩ರಲ್ಲಿ ೧೫೩ ಎಕರೆ ಜಾಗವನ್ನು ವಿವಿಧ ಅಭಿವೃದ್ದಿ ಕಾರ್ಯಗಳಿಗೆ ಮೀಸಲಿಟ್ಟಿದೆ, ಆದರೆ ಕೋಮುಲ್ ಸಂಸ್ಥೆ ಈ ಜಾಗದಲ್ಲಿ ಮೇವು ಉತ್ಪಾದನೆ ಮಾಡುವ ಸಲುವಾಗಿ, ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರದೇಶವ ಬಳಸಿಕೊಂಡಿರುವುದು ಸರಿಯಲ್ಲಿಲ ಎಂದಿದ್ದಾರೆ.ಕಂದಾಯ ಸಚಿವರ ವಿರೋಧ
ಈ ಜಾಗಕ್ಕೆ ಸಂಬಂಧಿಸಿದಂತೆ ಯಾವುದೇ ದುರಸ್ತಿ, ಟಿಪ್ಪಣಿ ಸರ್ವೆ ಭೂಪರಿವರ್ತನೆ ಆದೇಶ ಹಾಗೂ ಸರ್ಕಾರದ ಪೂರ್ವಾನುಮತಿ ಪಡೆಯದೆ ಸೋಲಾರ್ ಪ್ಯಾನಲ್ ಅಳವಡಿಸಲಾಗಿದೆ. ಈ ಬಗ್ಗೆ ತಾವು ಮಳೆ ಗಾಲದ ಅಧಿವೇಶದಲ್ಲಿ ಧ್ವನಿ ಎತ್ತಿ ಕೋಮುಲ್ ಕೈಗೊಂಡಿರುವ ಕಾನೂನು ಬಾಹಿರ ಕಾಮಗಾರಿಯನ್ನು ಕೂಡಲೇ ಸ್ಥಗಿತಗೊಳಿಸಬೇಕೆಂದು ಕಂದಾಯ ಸಚಿವರ ಗಮನ ಸೆಳೆದಿದ್ದಾಗಿ ತಿಳಿಸಿದ್ದಾರೆ. ಕಂದಾಯ ಸಚಿವ ಕೃಷ್ಣಬೈರೇಗೌಡ ಸಹ ಕೋಮುಲ್ ಇತರೇ ಕಾರ್ಯಗಳಿಗೆ ಮೀಸಲಿಟ್ಟಿದ್ದ ಜಾಗದಲ್ಲಿ ಸೋಲಾರ್ ಪ್ಯಾನಲ್ ಅಳವಡಿಸಿರುವುದು ಸರಿಯಿಲ್ಲ ಮತ್ತು ಇಲಾಖೆಯಿಂದ ಯಾವುದೇ ಅನುಮತಿ ಸಹ ಪಡೆದಿರುವುದಿಲ್ಲ ಎಂದು ಉತ್ತರ ನೀಡಿದ್ದರು.ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕ ಗೋಪಾಲಮೂರ್ತಿ ವಿರುದ್ದ ಸದರಿ ವಿವಾದದ ಜಮೀನಿನ ಮೇಲೆ ಪ್ರಕರಣ ದಾಖಲಿಸಿ ಮಕ್ಕಳ ಭವಿಷ್ಯಕ್ಕಾಗಿ ಸರ್ಕಾರದ ಸದುದ್ದೇಶವನ್ನು ಗೌರವಿಸುವರೆಂದು ಭಾವಿಸಿ ವಸತಿ ಶಾಲೆಯ ಜಮೀನನ್ನು ಉಳಿಸುವಂತೆ ೩ ತಿಂಗಳ ಹಿಂದೆ ಕ್ರಮಕ್ಕೆ ಕೋರಿದ್ದರೂ ಉಪವಿಭಾಗಾಧಿಕಾರಿ ಯಾವುದೇ ಕ್ರಮ ತೆಗೆದುಕೊಳ್ಳದೆ ನಿರ್ಲಕ್ಷ್ಯವಹಿಸಿರುವುದು ಬಡ ರೈತ ದಲಿತ ಮಕ್ಕಳ ವಿದ್ಯಾಭ್ಯಾಸಕ್ಕೆ ನಿರ್ಲಕ್ಷ್ಯವಹಿಸಿರುವುದು ಗೋಚರಿಸುತ್ತದೆ ಎಂದು ತಿಳಿಸಿದ್ದಾರೆ.
ಕೋರ್ಟ್‌ಗೆ ಹೋಗುವ ಎಚ್ಚರಿಕೆಶಾಲೆಯ ಜಾಗವನ್ನು ಕೋಮುಲ್ ಸಂಸ್ಥೆಗೆ ಬಳಸಿರುವುದು ನಿಮ್ಮ ಬೇಜವಾಬ್ದಾರಿ ಎಂದು ಏಕೆ ಪರಿಗಣಿಸಬಾರದು, ಈಗ ಅಂಬೇಡ್ಕರ್ ವಸತಿ ಶಾಲೆ ಮಂಜೂರಾಗಿದ್ದು ಕೂಡಲೇ ಕ್ರಮವಹಿಸಬೇಕು. ತಪ್ಪಿದ್ದಲ್ಲಿ ನ್ಯಾಯಾಂಗ ಉಲ್ಲಂಘನೆ ಮಾಡಿದವರನ್ನು ರಕ್ಷಿಸುತ್ತಿರುವ ಹಾಗೂ ಬಡ ದಲಿತ ಮಕ್ಕಳ ವಿದ್ಯಾರ್ಥಿಗಳಿಗೆ ಮಂಜೂರಾಗಿದ್ದ ಭೂಮಿಯನ್ನು ಕಬಳಿಸಿರುವವರ ಪರವಾಗಿರುವ ತಮ್ಮನ್ನು ದೋಷಾರೋಪಿಯನ್ನಾಗಿ ಮಾಡಿ ತಮ್ಮ ಮೇಲೆ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಲಾಗುವುದು ಎಂದು ಎಸಿಗೆ ಬರೆದ ಪತ್ರದಲ್ಲಿ ಶಾಸಕ ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ.