ಬಿಜೆಪಿಯಿಂದ ಪರಿಶಿಷ್ಟ ವರ್ಗಗಳಿಗೆ ಹೆಚ್ಚಿನ ಕೊಡುಗೆ: ಬಂಗಾರು ಹನುಮಂತು

| Published : Mar 13 2024, 02:00 AM IST

ಬಿಜೆಪಿಯಿಂದ ಪರಿಶಿಷ್ಟ ವರ್ಗಗಳಿಗೆ ಹೆಚ್ಚಿನ ಕೊಡುಗೆ: ಬಂಗಾರು ಹನುಮಂತು
Share this Article
  • FB
  • TW
  • Linkdin
  • Email

ಸಾರಾಂಶ

ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದ ಮೋದಿಯಂತಹ ನಾಯಕತ್ವ ದೇಶಕ್ಕೆ ಸಿಕ್ಕಿರುವುದು ನಮ್ಮ ಪುಣ್ಯ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದಷ್ಟೇ ಅಲ್ಲ, ಅಲ್ಲಿ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ. ಮೋದಿ ಮತ್ತೆ ಪ್ರಧಾನಿಯಾಗಿ ಮಾಡಲು ಪರಿಶಿಷ್ಟ ವರ್ಗಗಳು ಸೇರಿ ದೇಶ ವಾಸಿಗಳು ಬಿಜೆಪಿಯನ್ನು ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಬೇಕು.

ಕನ್ನಡಪ್ರಭ ವಾರ್ತೆ ದಾವಣಗೆರೆ

ಗ್ಯಾರಂಟಿ ಯೋಜನೆಗಳಿಗಾಗಿ ಪರಿಶಿಷ್ಟ ಜಾತಿ-ಪಂಗಡದವರ ಅಭಿವೃದ್ಧಿಗೆ ಮೀಸಲಿಟ್ಟಿದ್ದ ₹11,400 ಕೋಟಿ ಅನುದಾನ ಕಿತ್ತುಕೊಂಡ ಕಾಂಗ್ರೆಸ್ ಸರ್ಕಾರಕ್ಕೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಿಸುವ ಮೂಲಕ ತಕ್ಕ ಪಾಠ ಕಲಿಸುವಂತೆ ಬಿಜೆಪಿ ಎಸ್‌ಟಿ ಮೋರ್ಚಾ ರಾಜ್ಯಾಧ್ಯಕ್ಷ ಬಂಗಾರು ಹನುಮಂತು ಕರೆ ನೀಡಿದರು.

ವಿನೋಬ ನಗರದ ದಾ-ಹ ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಸಮುದಾಯ ಭವನದಲ್ಲಿ ಬಿಜೆಪಿ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶ ಉದ್ಘಾಟಿಸಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಮತ್ತೆ ಈಗ 14 ಸಾವಿರ ಕೋಟಿ ರು. ಮೇಲೆ ಕಣ್ಣು ಹಾಕಿದೆ. ಅನೇಕ ವರ್ಷದಿಂದಲೂ ಪರಿಶಿಷ್ಟ ವರ್ಗಕ್ಕೆ ಮೀಸಲಾತಿ ಹೆಚ್ಚಿಸುವಂತೆ ಹೋರಾಟ ನಡೆದಿತ್ತು. ಸ್ವಾಮೀಜಿ ನೇತೃತ್ವದಲ್ಲಿ ಪಾದಯಾತ್ರೆ, ಧರಣಿ ಸತ್ಯಾಗ್ರಹ ನಡೆಸಲಾಗಿತ್ತು. ಬಸವರಾಜ ಬೊಮ್ಮಾಯಿ ಎಸ್ಟಿ ಮೀಸಲಾತಿ ಶೇ.3ರಿಂದ ಶೇ.7ಕ್ಕೆ ಹೆಚ್ಚಿಸಿದರು. ಬಿ.ಎಸ್.ಯಡಿಯೂರಪ್ಪ ವಾಲ್ಮೀಕಿ ಜಯಂತಿ, ಭವನ ನಿರ್ಮಾಣ, ಪ್ರತ್ಯೇಕ ಸಚಿವಾಲಯ ಆರಂಭಿಸಿ ಪರಿಶಿಷ್ಟ ವರ್ಗಗಳಿಗೆ ಅತೀ ಹೆಚ್ಚು ಕೊಡುಗೆ ನೀಡಿದ್ದಾರೆ ಎಂದರು.

ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚು ಅನುದಾನ ನೀಡಿದ ಮೋದಿಯಂತಹ ನಾಯಕತ್ವ ದೇಶಕ್ಕೆ ಸಿಕ್ಕಿರುವುದು ನಮ್ಮ ಪುಣ್ಯ. ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣವಾಗಿದ್ದಷ್ಟೇ ಅಲ್ಲ, ಅಲ್ಲಿ ಮಹರ್ಷಿ ವಾಲ್ಮೀಕಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವೆಂದು ನಾಮಕರಣ ಮಾಡಲಾಗಿದೆ. ಮೋದಿ ಮತ್ತೆ ಪ್ರಧಾನಿಯಾಗಿ ಮಾಡಲು ಪರಿಶಿಷ್ಟ ವರ್ಗಗಳು ಸೇರಿ ದೇಶ ವಾಸಿಗಳು ಬಿಜೆಪಿಯನ್ನು ಅತೀ ಹೆಚ್ಚು ಕ್ಷೇತ್ರಗಳಲ್ಲಿ ಗೆಲ್ಲಿಸಬೇಕು ಎಂದು ಮನವಿ ಮಾಡಿದರು.

ಸಂಸದ ಡಾ.ಜಿ.ಎಂ.ಸಿದ್ದೇಶ್ವರ ಮಾತನಾಡಿ, ಪರಿಶಿಷ್ಟ ವರ್ಗಗಳ ಅಭಿವೃದ್ಧಿಗೆ ಪ್ರಧಾನಿ ನರೇಂದ್ರ ಮೋದಿ ಅತೀ ಹೆಚ್ಚು ಅನುದಾನ ನೀಡಿದ್ದಾರೆ. ವಾಲ್ಮೀಕಿ ನಾಯಕ ಸಮಾಜದ ವೀರ ಮದಕರಿ ನಾಯಕ, ಭರಮಪ್ಪ ನಾಯಕರು ದಾವಣಗೆರೆ-ಚಿತ್ರದುರ್ಗ ಅವಳಿ ಜಿಲ್ಲೆಗಳಲ್ಲಿ ಹಲವಾರು ಕೆರೆಗಳ ಕಟ್ಟಿಸಿದವರು. ನಾಯಕ ಸಮಾಜ ಯಾವಾಗಲೂ ಬಿಜೆಪಿ ಬೆಂಬಲಿಸಿಕೊಂಡು ಬಂದಿದೆ. ಲೋಕಸಭೆ ಚುನಾವಣೆಯಲ್ಲೂ ಮತ್ತೆ ಬಿಜೆಪಿಗೆ ಬೆಂಬಲಿಸಿ ನರೇಂದ್ರ ಮೋದಿಯವರ ಮೂರನೇ ಅ‍ವಧಿಗೆ ಪ್ರಧಾನಿಯಾಗಿ ಮಾಡಿ, ದೇಶ ರಕ್ಷಿಸೋಣ. ಈ ಮಹತ್ಕಾರ್ಯಕ್ಕೆ ನಾಯಕ ಸಮಾಜವೂ ಕೈಜೋಡಿಸಬೇಕು ಎಂದರು.

ಎಸ್ಟಿ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಎಸ್.ಕೃಷ್ಣಕುಮಾರ ಅಧ್ಯಕ್ಷತೆ ವಹಿಸಿದ್ದರು. ಶಾಸಕರಾದ ಬಿ.ಪಿ.ಹರೀಶ ಗೌಡ, ಹೇಮಲತಾ ನಾಯಕ, ಮಾಜಿ ಸಚಿವ ಎಸ್.ಎ.ರವೀಂದ್ರನಾಥ, ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ, ಮಾಡಾಳು ವಿರೂಪಾಕ್ಷಪ್ಪ, ಮಾಜಿ ಮುಖ್ಯ ಸಚೇತಕ ಡಾ.ಎ.ಎಚ್.ಶಿವಯೋಗಿಸ್ವಾಮಿ, ಎಂ.ಬಸವರಾಜ ನಾಯ್ಕ, ಜಿಲ್ಲಾಧ್ಯಕ್ಷ ಎನ್.ರಾಜಶೇಖರ ನಾಗಪ್ಪ, ಪ್ರಧಾನ ಕಾರ್ಯದರ್ಶಿಗಳಾದ ಧನಂಜಯ ಕಡ್ಲೇಬಾಳು, ಅನಿಲಕುಮಾರ ನಾಯ್ಕ, ರಾಜ್ಯ ಉಪಾಧ್ಯಕ್ಷ ಅನಿಲಕುಮಾರ, ವಾದಿರಾಜ, ಮಾಯಕೊಂಡ ಜಿ.ಎಸ್.ಶ್ಯಾಮ್, ಮಣಿಕಂಠ, ಕೆ.ಬಿ.ಕೊಟ್ರೇಶ, ಮಂಗೇನಹಳ್ಳಿ ರೋಹಿತ್, ಎಂ.ಲೋಕೇಶಪ್ಪ, ಮೆದಿಕೆರೆ ಸಿದ್ದೇಶ, ಹನುಮಂತಪ್ಪ, ನವೀನ, ಲಕ್ಷ್ಮಣ, ದುರುಗೇಶ, ಗುಮ್ಮನೂರು ಶ್ರೀನಿವಾಸ ಇತರರಿದ್ದರು. ಸಮಾವೇಶಕ್ಕೂ ಮುನ್ನ ಸಾಮಾಜಿಕ ಕಾರ್ಯಕರ್ತ ವಾದಿರಾಜ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು.ಸಮಗ್ರ ಅಭಿವೃದ್ಧಿ

ಬಿಜೆಪಿ ಪರಿಶಿಷ್ಟ ವರ್ಗಗಳ ಸಮಗ್ರ ಅಭಿವೃದ್ಧಿಗೆ ಅಪಾರ ಕೊಡುಗೆ ಜೊತೆಗೆ ನರೇಂದ್ರ ಮೋದಿ ಜೊತೆಗೆ ನಿಲ್ಲುವ ಸಂದೇಶ ಸಾರುವ ಉದ್ದೇಶದಿಂದ ಪರಿಶಿಷ್ಟ ಪಂಗಡಗಳ ಮುನ್ನಡೆ ಸಮಾವೇಶ ನಡೆಸಲಾಗುತ್ತಿದೆ. ಮುಂದಿನ ಲೋಕಸಭೆ ಚುನಾವಣೆಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರವನ್ನೂ ಒಳಗೊಂಡಂತೆ ಎಲ್ಲಾ 28 ಕ್ಷೇತ್ರದಲ್ಲೂ ಬಿಜೆಪಿ ಗೆಲ್ಲಿಸಬೇಕು.

ಶ್ರೀನಿವಾಸ ಟಿ.ದಾಸಕರಿಯಪ್ಪ, ಎಸ್ಟಿ ಮೋರ್ಚಾ ರಾಜ್ಯ ಉಪಾಧ್ಯಕ್ಷ, ಯುವ ಮುಖಂಡ