ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಹೆಚ್ಚಿನ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ

| Published : Mar 25 2024, 12:49 AM IST

ಮೋದಿ ಪ್ರಧಾನಿಯಾದ ಬಳಿಕ ದೇಶದಲ್ಲಿ ಹೆಚ್ಚಿನ ಅಭಿವೃದ್ಧಿ: ಸಂಸದ ಬಿ.ವೈ.ರಾಘವೇಂದ್ರ
Share this Article
  • FB
  • TW
  • Linkdin
  • Email

ಸಾರಾಂಶ

ಕೇಂದ್ರ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಬೇಕಿದೆ. ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಮತದಾರ ಬಂಧುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರನ್ನು ಸಂಪರ್ಕಿಸಿ ಪಕ್ಷದ ಸಾಧನೆಗಳ ಪಟ್ಟಿಯನ್ನು ತಲುಪಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಬೆಂಬಲ ಕೊಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು.

ಕನ್ನಡಪ್ರಭ ವಾರ್ತೆ ಶಿವಮೊಗ್ಗ

ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಬಂದಾಗಿನಿಂದಲೂ ದೇಶದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಕೇಂದ್ರ ಸರ್ಕಾರದ ಸಾಧನೆ ಪಟ್ಟಿ ಮನೆ ಮನೆಗೆ ಮುಟ್ಟಿಸಬೇಕಿದೆ ಎಂದು ಶಿವಮೊಗ್ಗ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ.ರಾಘವೇಂದ್ರ ಕಾರ್ಯಕರ್ತರಿಗೆ ಕರೆ ನೀಡಿದರು.

ಇಲ್ಲಿನ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭಾನುವಾರ ಆಯೋಜಿಸಿದ್ದ ಜಿಲ್ಲಾ ಕಾರ್ಯಕಾರಿಣಿಯಲ್ಲಿ ಮಾತನಾಡಿದ ಹಾಲಿ ಸಂಸದರೂ ಆಗಿರುವ ರಾಘವೇಂದ್ರ ಅವರು, ಮೋದಿ ಪ್ರಧಾನಿಯಾದ ಬಳಿಕ ವಿಶ್ವವೇ ಭಾರತವನ್ನು ತಿರುಗಿ ನೋಡುತ್ತಿದೆ. ಇದಕ್ಕೆ ಕಾರಣ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಅಭಿವೃದ್ಧಿ ಕಾರ್ಯಗಳು ಎಂದರು.

ಸ್ವಚ್ಛ ಭಾರತ್ ಯೊಜನೆ, ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ, ಜಲ ಜೀವನ್ ಮಿಷನ್ ಯೋಜನೆ, ರೈಲ್ವೆ, ರಸ್ತೆ, ಸಾರಿಗೆ, ವಿಮಾನ ನಿಲ್ದಾಣ, ಶಿಕ್ಷಣ ಸಂಸ್ಥೆ, ಹಲವಾರು ಯೋಜನೆಗಳ ಸಾರ್ವಜನಿಕರಿಗೆ ಮನವರಿಕೆ ಮಾಡಬೇಕಾಗಿದೆ. ಜಮ್ಮು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನದ ಆರ್ಟಿಕಲ್ 370 ರದ್ದು ವಿಚಾರದಿಂದಲೇ ಬಿಜೆಪಿ 370 ಸೀಟುಗಳನ್ನು ಗೆಲ್ಲಲು ಟಾರ್ಗೆಟ್ ಮಾಡಿಕೊಂಡಿದ್ದು, ಶ್ರೀರಾಮ ದೇವಾಲಯ ನಿರ್ಮಾಣ ಸೇರಿ ವಿವಿಧ ವಿಚಾರಗಳನ್ನು ಸಾರ್ವಜನಿಕರ ಮುಂದಿಡುವ ಕೆಲಸವಾಗಬೇಕಾಗಿದೆ ಎಂದರು.

ಕೇಂದ್ರ ಸರ್ಕಾರದ ಸಾಧನೆಯನ್ನು ಮನೆ ಮನೆಗೆ ಮುಟ್ಟಿಸಬೇಕಿದೆ. ಚುನಾವಣೆಯಲ್ಲಿ ಎಲ್ಲಾ ಸಮುದಾಯದ ಮತದಾರ ಬಂಧುಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು, ಅವರನ್ನು ಸಂಪರ್ಕಿಸಿ ಪಕ್ಷದ ಸಾಧನೆಗಳ ಪಟ್ಟಿಯನ್ನು ತಲುಪಿಸುವ ಮೂಲಕ ಪಕ್ಷಕ್ಕೆ ಹೆಚ್ಚಿನ ಬೆಂಬಲ ಕೊಡಿಸುವ ನಿಟ್ಟಿನಲ್ಲಿ ಕಾರ್ಯಕರ್ತರು ಕಾರ್ಯನಿರ್ವಹಿಸಬೇಕು ಎಂದು ಕರೆ ನೀಡಿದರು.

ಸಭೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್, ಆರಗ ಜ್ಞಾನೇಂದ್ರ, ಮುಖಂಡರಾದ ಎಂ.ಬಿ.ಭಾನುಪ್ರಕಾಶ್, ಆರ್‌.ಕೆ.ಸಿದ್ಧರಾಮಣ್ಣ, ಸ್ವಾಮಿರಾವ್, ಗಿರೀಶ್ ಪಟೇಲ್ , ಕೆ.ಜಿ.ಕುಮಾರಸ್ವಾಮಿ, ಕೆ.ಬಿ.ಅಶೋಕ್ ನಾಯಕ್ ಮತ್ತಿತರರಿದ್ದರು.

ಕಾಂಗ್ರೆಸ್‌ ಸರ್ಕಾರ ಜಿಲ್ಲೆಗೆ ಅನುದಾನ ನೀಡಿಲ್ಲ

ರಾಜ್ಯದಲ್ಲಿರುವ ಕಾಂಗ್ರೆಸ್ ಸರ್ಕಾರ ಐದು ಗ್ಯಾರಂಟಿ ಯೋಜನೆ ಬಿಟ್ಟರೆ ಜಿಲ್ಲೆಗೆ ಯಾವುದೇ ಅನುದಾನ ನೀಡಿಲ್ಲ. ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ಅಭಿವೃದ್ಧಿಯ ಬಗ್ಗೆ ಒಂದೇ ಒಂದು ಮಾತನಾಡದೇ ಕಾಲಹರಣ ಮಾಡುತ್ತಿದೆ. ಸರ್ಕಾರದ ಬೊಕ್ಕಸ ಖಾಲಿಯಾಗಿದ್ದು, ಜನರ ದಾರಿತಪ್ಪಿಸಲು ಕೇಂದ್ರದ ಮೇಲೆ ಬೊಟ್ಟು ಮಾಡುತ್ತಿದೆ. ಈಗಾಗಲೇ ರಾಜ್ಯ ಸರ್ಕಾರ ದಿವಾಳಿಯಾಗಿದೆ.

ಬಿ.ವೈ.ರಾಘವೇಂದ್ರ, ಸಂಸದ