ಧರ್ಮಸ್ಥಳ ಸಂಘದಿಂದ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು

| Published : Feb 09 2025, 01:15 AM IST

ಧರ್ಮಸ್ಥಳ ಸಂಘದಿಂದ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು
Share this Article
  • FB
  • TW
  • Linkdin
  • Email

ಸಾರಾಂಶ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡುತ್ತಾ ಬರಲಾಗುತ್ತಿದೆ ಎಂದು ಯೋಜನೆಯ ಚನ್ನರಾಯಪಟ್ಟಣ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು. ಎಂ ಶಿವರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರವಣಬೆಳಗೊಳ ಯೋಜನಾ ಕಚೇರಿ ವತಿಯಿಂದ ದೇವಾಲಯ ಸಮಿತಿ ಸದಸ್ಯರಿಗೆ 1 ಲಕ್ಷದ ಅನುದಾನದ ಡಿಡಿ ವಿತರಿಸಿ ಮಾತನಾಡಿದರು. ಕೌಶಲ್ಯಾಭಿವೃದ್ಧಿ ಹೈನುಗಾರಿಕೆ ವ್ಯಾಪಾರ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ತೊಡಗಿಕೊಳ್ಳುವಂತೆ ಮಾಡುವುದೇ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಕನ್ನಡಪ್ರಭ ವಾರ್ತೆ ನುಗ್ಗೇಹಳ್ಳಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಮಾಜಮುಖಿ ಕೆಲಸಗಳಿಗೆ ಹೆಚ್ಚಿನ ಒತ್ತು ನೀಡುತ್ತಾ ಬರಲಾಗುತ್ತಿದೆ ಎಂದು ಯೋಜನೆಯ ಚನ್ನರಾಯಪಟ್ಟಣ ಜಿಲ್ಲಾ ನಿರ್ದೇಶಕ ಕೇಶವ ದೇವಾಂಗ ತಿಳಿಸಿದರು.

ಹೋಬಳಿಯ ಎಂ ಶಿವರ ಗ್ರಾಮದ ಪುರಾಣ ಪ್ರಸಿದ್ಧ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರವಣಬೆಳಗೊಳ ಯೋಜನಾ ಕಚೇರಿ ವತಿಯಿಂದ ದೇವಾಲಯ ಸಮಿತಿ ಸದಸ್ಯರಿಗೆ 1 ಲಕ್ಷದ ಅನುದಾನದ ಡಿಡಿ ವಿತರಿಸಿ ಮಾತನಾಡಿದರು.

ಮಹಿಳೆಯರ ಆರ್ಥಿಕ ಸ್ವಾವಲಂಬನೆಗಾಗಿ ಸ್ವಸಹಾಯ ಸಂಘಗಳ ಮೂಲಕ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವುದರ ಜೊತೆಗೆ ಕೌಶಲ್ಯಾಭಿವೃದ್ಧಿ ಹೈನುಗಾರಿಕೆ ವ್ಯಾಪಾರ ಹೀಗೆ ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರು ತೊಡಗಿಕೊಳ್ಳುವಂತೆ ಮಾಡುವುದೇ ಯೋಜನೆಯ ಮುಖ್ಯ ಉದ್ದೇಶವಾಗಿದೆ ಎಂದರು.

ಗ್ರಾಮದ ಶ್ರೀ ಕಲ್ಲೇಶ್ವರ ಸ್ವಾಮಿ ದೇವಾಲಯ ಜೀರ್ಣೋದ್ಧಾರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸುಮಾರು 1 ಲಕ್ಷ ಹಣವನ್ನು ವೀರೇಂದ್ರ ಹೆಗಡೆಯವರು ಪ್ರಸಾದ ರೂಪದಲ್ಲಿ ನೀಡಿದ್ದಾರೆ. ಮುಂಬರುವ ದಿನಗಳಲ್ಲಿ ದೇವಾಲಯದ ಅಭಿವೃದ್ಧಿಗೆ ಹಣ ಹೆಚ್ಚಿನ ಪ್ರಮಾಣದಲ್ಲಿ ಬರಲಿದೆ. ಶಿಕ್ಷಣ ಕ್ಷೇತ್ರಕ್ಕೆ ಯೋಜನೆಯ ವತಿಯಿಂದ ಹೆಚ್ಚಿನ ಸಹಕಾರ ನೀಡುತ್ತಾ ಬರಲಾಗುತ್ತದೆ. ಸರ್ಕಾರಿ ಶಾಲೆಗಳ ಉಳಿವಿಗೆ ಅತಿಥಿ ಶಿಕ್ಷಕರ ನೇಮಕ ಇದರ ಜೊತೆಗೆ ಶೌಚಾಲಯ, ಆಟದ ಮೈದಾನ, ಕಾಂಪೌಂಡ್ ನಿರ್ಮಾಣ, ಬೆಂಚ್, ಡೆಸ್ಕ್ ಸೇರಿದಂತೆ ವಿವಿಧ ಪರಿಕರಗಳನ್ನು ಶಾಲೆಗಳಿಗೆ ನೀಡಲಾಗುತ್ತಿದೆ. ಡೇರಿ ಹಾಗೂ ಅಂಗನವಾಡಿ ಕಟ್ಟಡಗಳ ನಿರ್ಮಾಣಕ್ಕೂ ಅನುದಾನ ನೀಡಲಾಗುತ್ತಿದೆ ಎಂದರು. ಯೋಜನೆಯ ಶ್ರವಣಬೆಳಗೊಳ ಯೋಜನಾಧಿಕಾರಿ ಸದಾಶಿವ ಕುಲಾಲ್ ಮಾತನಾಡಿದರು.

ಈ ಸಂದರ್ಭದಲ್ಲಿ ದೇವಾಲಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಶಿವರಾಜ್, ಗೌರವಾಧ್ಯಕ್ಷ ಸಿದ್ದೇಗೌಡ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಶಂಭುಲಿಂಗೇಗೌಡ, ಕಾರ್ಯದರ್ಶಿ ಗಿರೀಶ್, ಉಪಾಧ್ಯಕ್ಷ ರವಿ, ಖಜಾಂಚಿಗಳಾದ ಮೋಹನ್ ಕುಮಾರ್, ಸ್ವಾಮಿ, ಗುಡಿ ಗೌಡ್ರು, ಚೆಲುವೇಗೌಡ, ನಾಗರಾಜ್, ಸಮಿತಿ ಸದಸ್ಯರಾದ ಕುಮಾರ್, ರವಿ, ಬಸವರಾಜ್, ರಾಜೇಗೌಡ, ಯೋಗೀಶ್, ಅರ್ಚಕ ಸಿದ್ದಲಿಂಗಪ್ಪ, ಎಂ ಶಿವರ ಒಕ್ಕೂಟದ ಅಧ್ಯಕ್ಷೆ ಪಾರ್ವತಮ್ಮ, ತಾಲೂಕು ಕೃಷಿ ಮೇಲ್ವಿಚಾರಕ ಟಿ ಎಂ ಮಾದೇವ ಪ್ರಸಾದ್, ಬಾಗೂರು ವಲಯ ಮೇಲ್ವಿಚಾರಕಿ ವೀಣಾ, ಸೇವಾ ಪ್ರತಿನಿಧಿ ನಂಜುಂಡಿ, ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.