ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಶಾಸಕ ಆನಂದ

| Published : Oct 07 2025, 01:02 AM IST

ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕು: ಶಾಸಕ ಆನಂದ
Share this Article
  • FB
  • TW
  • Linkdin
  • Email

ಸಾರಾಂಶ

ಕಡೂರು, ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಪ್ರತಿಭಾವಂತ ಮಕ್ಕಳು ಸಮಾಜದ ಉನ್ನತಿಗೆ ಕೊಡುಗೆ ನೀಡಬೇಕು ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.

ತಾಲೂಕು ಕನಕ ನೌಕರರ ಸಂಘದಿಂದ ತಾಲೂಕಿನ ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ

ಕನ್ನಡಪ್ರಭ ವಾರ್ತೆ, ಕಡೂರು

ಸ್ಪರ್ಧಾತ್ಮಕ ಜಗತ್ತಿನಲ್ಲಿ ಶಿಕ್ಷಣಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಮೂಲಕ ಪ್ರತಿಭಾವಂತ ಮಕ್ಕಳು ಸಮಾಜದ ಉನ್ನತಿಗೆ ಕೊಡುಗೆ ನೀಡಬೇಕು ಎಂದು ಶಾಸಕ ಕೆ.ಎಸ್. ಆನಂದ್ ಹೇಳಿದರು.ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ತಾಲೂಕು ಕನಕ ನೌಕರರ ಸಂಘದಿಂದ ತಾಲೂಕಿನ ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳಿಗೆ ಪುರಸ್ಕಾರ ಹಾಗೂ ಕುರುಬ ಸಮಾಜದ ವಿವಿಧ ಕ್ಷೇತ್ರದ ಸಾಧಕರಿಗೆ ಏರ್ಪಡಿಸಿದ್ದ ಗೌರವ ಸಮರ್ಪಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಈ ಹಿಂದೆ ಶಿಕ್ಷಣ ಪಡೆಯಲು ಸಾಕಷ್ಟು ಅಡೆತಡೆಗಳು ಎದುರಾಗಿದ್ದವು‌. ಇಂದು ಪರಿಸ್ಥಿತಿ ಸಾಕಷ್ಟು ಬದಲಾವಣೆಯಾಗಿವೆ. ಹಲವು ಒತ್ತಡಗಳ ನಡುವೆಯೂ ಪೋಷಕರು ತಮ್ಮ ಮಕ್ಕಳ ಉಜ್ವಲ ಭವಿಷಲ್ಕ್ಕೆ ಉತ್ತಮ ಶಿಕ್ಷಣ ಕೊಡಿಸಲು ಮುಂದಾಗಿರುವುದು ಹೆಮ್ಮೆಯ ಸಂಗತಿ. ಶಿಕ್ಷಣದಿಂದ ಸಮಾಜ ಬದಲಾವಣೆ ಸಾಧ್ಯವಾಗಲಿದೆ ಎಂದರು.ಹಿಂದುಳಿದ ವರ್ಗಗಳಿಗೆ ಸೇರುವ ಕುರುಬ ಸಮುದಾಯದ ಸರ್ವಾಂಗೀಣ ಅಭಿವೃದ್ಧಿಗೆ ದಿ. ದೇವರಾಜು ಅರಸು ಅವರ ಕೊಡುಗೆ ಅಪಾರ. ಹಿಂದುಳಿದ ವರ್ಗಗಳ ಮೀಸಲಾತಿಯಲ್ಲಿ ಹಾವನೂರು ಆಯೋಗದ ವರದಿಯ ಅನುಷ್ಠಾನದಿಂದ ನಿಗಧಿ ಪಡಿಸಿದ ಶೇ.15 ರಷ್ಟು ಮೀಸಲಾತಿಯಲ್ಲಿ ಕಳೆದ 35 ವರ್ಷಗಳಿಂದ ಸಮಾಜದಲ್ಲಿ ಮಹತ್ತರ ಬೆಳವಣಿಗೆಗೆ ಸಾಕ್ಷಿಯಾಯಿತು. ಮೀಸಲಾತಿ ಕೊಡುಗೆ ಪರಿಣಾಮ ಸಮಾಜದಲ್ಲಿ ಅನೇಕರು ನೌಕರರ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಲು ಸಾಧ್ಯವಾಗಿದೆ ಎಂದರು.ಪುರಸಭೆ ಅಧ್ಯಕ್ಷ ಭಂಡಾರಿ ಶ್ರೀನಿವಾಸ್ ಮಾತನಾಡಿ, ಸಮಾಜದಲ್ಲಿ ಹೆಚ್ಚು ಶಿಕ್ಷಣಕ್ಕೆ ಒತ್ತು ನೀಡುವ ಗುರುಗಳು, ಪೋಷಕರು ವಿದ್ಯಾರ್ಥಿಗಳನ್ನು ಗುರಿ ಮುಟ್ಟಿಸಬೇಕಿದೆ. ಸಮಾಜದಲ್ಲಿ ಉತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ, ಸಾಧಕರಿಗೆ ಗೌರವ ಸಲ್ಲಿಸ ಬೇಕಿದೆ‌. ಜಯಂತಿ ಕಾರ್ಯಕ್ರಮಗಳಿಗೆ ಹಣದ ದುಂದು ವೆಚ್ಚ ಮಾಡದೆ ಇಂತಹ ಪ್ರತಿಭಾ ಪುರಸ್ಕಾರಗಳಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದಾಗ ಇತರೆ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡಿದಂತಾಗಲಿದೆ‌. ಕೂಲಿ ಕಾರ್ಮಿಕರು ಸಹ ತಮ್ಮ ಮಕ್ಕಳಿಗೆ ವಿದ್ಯಾಭ್ಯಾಸ ಕೊಡಿಸಲು ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಕುರುಬ ಸಮಾಜದ 6 ಜನ ವಿದ್ಯಾರ್ಥಿಗಳು ಯುಪಿಎಸ್ಸಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ತೇರ್ಗಡೆಹೊಂದಿರುವುದು ಹೆಮ್ಮೆಯ ಸಂಗತಿ. ಇಂತಹ ಕಾರ್ಯಕ್ರಮ ನೌಕರರ ಸಂಘದಿಂದ ಪ್ರತಿವರ್ಷ ನಡೆಯಬೇಕಿದೆ ಎಂದು ಹೇಳಿದರು.

ಚಿಕ್ಕಬಳ್ಳಾಪುರ ಜಿಲ್ಲೆಯ ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಮಾತನಾಡಿ, ಪ್ರತಿಭೆ ಎಂಬುದು ಸಾಧಕನ ಸ್ವತ್ತಾಗಲಿದೆ. ವ್ಯಾಸಂಗದ ಬದುಕಿನಲ್ಲಿ ಪರಿಶ್ರಮ ಎಂಬುದು ಮುಖ್ಯವಾಗಲಿದೆ. ಸೋಲು ಗೆಲುವನ್ನು ಸಮನಾಗಿ ಸ್ವೀಕರಿಸಿದಾಗ ಪರಿಪೂರ್ಣ ವ್ಯಕ್ತಿಯಾಗಿ ರೂಪುಗೊಳ್ಳಲು ಸಾಧ್ಯ. ಪುರಸ್ಕಾರಕ್ಕೆ ಒಳಗಾಗಲು ಹೆಚ್ಚಿನ ಕನಸು ಕಾಣಬೇಕು. ಸಮಾಜದ ಪೋಷಕರು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದರು.

ಸರಕಾರಿ ನೌಕರರ ಸಂಘದ ರಾಜ್ಯ ಉಪಾಧ್ಯಕ್ಷ ಎಚ್.ಸಿ‌. ಲೋಕೇಶ್ ಮಾತನಾಡಿ, ಶೋಷಿತ ವರ್ಗಗಳಲ್ಲಿ ಸಾಧನೆ ಮಾಡು ವುದು ಕಷ್ಟಕರ ಕೆಲಸ. ಜ್ಞಾನ ಸಂಪಾದನೆಗೆ ಹೆಚ್ಚು ಒತ್ತುಕೊಡಬೇಕು. ಅಂಬೇಡ್ಕರ್ ಪ್ರತಿಯೊಬ್ಬರಿಗೆ ಪ್ರೇರಣೆಯಾಗಿದ್ದಾರೆ. ಹಿಂದುಳಿದ ವರ್ಗಗಳಲ್ಲಿ ಮಹತ್ವಾಕಾಂಕ್ಷೆ ಕಡಿಮೆಯಾಗಿದೆ. ಕೈಗಾರಿಕಾ ವಲಯಗಳಲ್ಲಿ ಸಾಧನೆ ಶೂನ್ಯ. ಶಿಕ್ಷಣದಲ್ಲಿ ಸಾಧನೆ ಮಾಡಲು ವಿದ್ಯಾರ್ಥಿಗಳು ಪ್ರತಿದಿನ 6 ಗಂಟೆ ವಿದ್ಯಾಭ್ಯಾಸಕ್ಕೆ ಮೀಸಲಿಡಬೇಕು ಎಂದು ಹೇಳಿದರು.ಕನಕ ನೌಕರರ ಸಂಘದ ಅಧ್ಯಕ್ಷ ಎಚ್.ಕೆ.ತಿಪ್ಪೇಶ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಕುರುಬ ಸಮಾಜದ ತಾಲೂಕು ಅಧ್ಯಕ್ಷ ಭೋಗಪ್ಪ, ಜಿಪಂ ಮಾಜಿ ಸದಸ್ಯರಾದ ಶರತ್ ಕೃಷ್ಣಮೂರ್ತಿ, ವನಮಾಲ ದೇವರಾಜ್, ಪುರಸಭಾ ಸದಸ್ಯ ತೋಟದ ಮನೆ ಮೋಹನ್ ಕುಮಾರ್, ಬಿಇಒ ತಿಮ್ಮಯ್ಯ, ಎಸ್.ಎಸ್. ದೇವರಾಜ್, ಕನಕ ನೌಕರರ ಸಂಘದ ಪ್ರಧಾನ ಕಾರ್ಯದರ್ಶಿ ಬಸವರಾಜ್, ಕೆಂಪಸಿದ್ದಯ್ಯ, ವೈ.ಬಿ.‌ಹನುಮಂತಪ್ಪ, ಕೆ.ಆರ್. ಸುರೇಶ್, ರಾಜು ಒಡೆಯರ್, ಕೆ.ಎಚ್. ಶಂಕರ್, ಹರೀಶ್, ಬಸಪ್ಪ ಸೇರಿದಂತೆ ನೌಕರರ ಸಂಘದ ಪದಾಧಿಕಾರಿಗಳು ಇದ್ದರು. 6 ಕೆಸಿಕೆಎಂ 2ಕಡೂರು ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕನಕ ನೌಕರರ ಸಂಘದಿಂದ ನಡೆದ ಸಮಾರಂಭದಲ್ಲಿ ಕುರುಬ ಸಮಾಜದ ಪ್ರತಿಭಾನ್ವಿತ ಮಕ್ಕಳನ್ನು ಪುರಸ್ಕಾರಿಸಲಾಯಿತು. ಶಾಸಕ ಕೆ.ಎಸ್. ಆನಂದ್, ಭಂಡಾರಿ ಶ್ರೀನಿವಾಸ್, ಪಿ.ಎನ್. ರವೀಂದ್ರ, ಲೋಕೇಶ್, ಎಚ್.ಕೆ.ತಿಪ್ಪೇಶ್, ಮೋಹನ್ ಕುಮಾರ್, ಶರತ್ ಕೃಷ್ಣಮೂರ್ತಿ ಇದ್ದರು.