ಕಳೆದ 2025ನೇ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಗೆ ಘೋಷಣೆ ಮಾಡಲಾಗಿದ್ದ ಈಜುಕೊಳ ಹಳ್ಳ ಹಿಡಿದಿದ್ದು, ಸ್ವಯಂ ಚಾಲಿತ ಪರೀಕ್ಷಾ ಪಥಕ್ಕೆ ದಾರಿಯೇ ಕಾಣದಾಗಿದೆ.
ದೇವರಾಜು ಕಪ್ಪಸೋಗೆಕನ್ನಡಪ್ರಭ ವಾರ್ತೆ ಚಾಮರಾಜನಗರಕಳೆದ 2025ನೇ ಸಾಲಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ್ದ ಬಜೆಟ್‌ನಲ್ಲಿ ಚಾಮರಾಜನಗರ ಜಿಲ್ಲೆಗೆ ಘೋಷಣೆ ಮಾಡಲಾಗಿದ್ದ ಈಜುಕೊಳ ಹಳ್ಳ ಹಿಡಿದಿದ್ದು, ಸ್ವಯಂ ಚಾಲಿತ ಪರೀಕ್ಷಾ ಪಥಕ್ಕೆ ದಾರಿಯೇ ಕಾಣದಾಗಿದೆ.
ಚಾಮರಾಜನಗರದಲ್ಲಿ ಒಲಿಂಪಿಕ್ಸ್ ಮಾದರಿಯ (50 ಮೀಟರ್) ಈಜುಕೊಳವನ್ನು ₹2 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುವುದು. ಇದರಿಂದ ಜಿಲ್ಲೆಯ ಈಜುಪಟುಗಳಿಗೆ ಅನುಕೂಲ ಆಗಲಿದೆ ಎಂಬ ನಿರೀಕ್ಷೆ ಮಾಡಲಾಗಿತ್ತು. ಆದರೆ, ಈಜುಕೊಳಕ್ಕೆ ಇದುವರಗೆ ನಿರ್ದಿಷ್ಟ ಜಾಗವನ್ನೇ ಗುರುತಿಸುವ ಕೆಲಸವಾಗಿಲ್ಲ. ಕ್ರೀಡಾಪಟುಗಳು ಈಜುಕೊಳಕ್ಕಾಗಿ ಒತ್ತಾಯ ಮಾಡುತ್ತಲೇ ಬಂದಿದ್ದಾರೆ. ಜನಪ್ರತಿನಿಧಿಗಳು ಮತ್ತು ಅಧಿಕಾರಿ ವರ್ಗ ಮಾತ್ರ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗದ ಹಿನ್ನೆಲೆ ಈಜುಕೊಳ ನಿರ್ಮಾಣ ಕಾರ್ಯ ಹಳ್ಳ ಹಿಡಿದಿದೆ.ಪರೀಕ್ಷಾ ಪಥ ಕನಸು ಮಾತ್ರ:
2025-26ನೇ ಸಾಲಿನಲ್ಲಿ ಚಾಮರಾಜನಗರದಲ್ಲಿ ಆರ್‌ಟಿಓ (ಪ್ರಾದೇಶಿಕ ಸಾರಿಗೆ ಕಚೇರಿ)ಯಲ್ಲಿ ಮಾನವ ಹಸ್ತಕ್ಷೇಪವಿಲ್ಲದೆ, ಸೇವೇಕದಕಗಳ ಮೂಲತ ವಾಹನ ಚಾಲನೆ ಪರವಾನಗಿ ನೀಡಲು ₹20 ಕೋಟಿ ವೆಚ್ಚದಲ್ಲಿ ಸ್ವಯಂಚಾಲಿತ ಪರೀಕ್ಷಾ ಪಥಗಳನ್ನು ನಿರ್ಮಿಸಲಾಗುವುದು ಎಂದು ಘೋಷಿಸಲಾಗಿತ್ತು. ಆದರೆ ಇದುವರಗೆ ಸ್ವಯಂ ಚಾಲಿತ ಪರೀಕ್ಷಾ ಪಥ ನಿರ್ಮಾಣ ಕಾರ್ಯ ಆರಂಭವಾಗಿಲ್ಲ.ಬುಡಕಟ್ಟು ವಸತಿ ಶಾಲೆಗಳನ್ನು 12ನೇ ತರಗತಿಯವರೆಗೆ ಮೇಲ್ದರ್ಜೆಗೇರಿಸಲಾಗುವುದು ಎಂದು ಕಳೆದ ಬಜೆಟ್‌ನಲ್ಲಿ ಘೋಷಿಸಲಾಗಿತ್ತು. ಇದರ ಪೈಕಿ ಹನೂರು ತಾಲೂಕಿನ ನಕ್ಕುಂದಿ ವಸತಿ ಶಾಲೆಯನ್ನು ಗುರುತಿಸಲಾಗಿಸಲಾಗಿದ್ದು, ಇದು ಪ್ರಾರಂಭವಾಗಬೇಕಾದರೆ ಇನ್ನೂ ನಾಲ್ಕೈದು ವರ್ಷಗಳಾದ್ರು ಬೇಕಾಗಿದೆ.
ಪರಿಶಿಷ್ಟ ಜಾತಿ ಹಾಗೂ ಪಂಗಡ ಹಾಗೂ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿ ಜಿಲ್ಲೆಗೆ ಒಂದರಂತೆ ವಸತಿ ಶಾಲೆಗಳನ್ನು ಪಿಯು ಕಾಲೇಜಾಗಿ ಉನ್ನತೀಕರಿಸಲಾಗುವುದು ಎಂದು ಘೋಷಿಸಲಾಗಿತ್ತು, ಈ ಪೈಕಿ ಕೊಳ್ಳೇಗಾಲ ತಾಲೂಕಿನ ತಿಮ್ಮರಾಜಿಪುರ ಮತ್ತು ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಮೇಲ್ದರ್ಜೆಗೆರಿಸಲಾಗಿದೆ.ಆರೋಗ್ಯ ಕೇಂದ್ರ ಮೇಲ್ದರ್ಜೆಗೆ:ಹೊಸದಾಗಿ ಘೋಷಣೆಯಾಗಿರುವ ಹನೂರು ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲಾಗುವುದು ಎಂದು ಪ್ರಕಟಿಸಲಾಗಿತ್ತು. ಈ ನಿಟ್ಟಿನಲ್ಲಿ ಜಾಗ ಗುರುತಿಲಾಗಿದ್ದು, ಶಾಸಕ ಎಂ.ಆರ್. ಮಂಜುನಾಥ್ ಅವರು ಇತ್ತೀಚಿಗೆ ಗುದ್ದಲಿ ಪೂಜೆ ಮಾಡಿದ್ದಾರೆ.
ಅಭಿವೃದ್ಧಿ ಕಾಣದ ರಸ್ತೆಗಳು:‘ಕೆ–ಶಿಪ್–4’ ಯೋಜನೆಯಡಿ ಜಿಲ್ಲೆಯ ಹನೂರು - ರಾಮಪುರ - ಪಾಲಾರ್ -70 ಕಿ.ಮೀ. ಹಾಗೂ ಹುಲ್ಲಹಳ್ಳಿ-ತಗಡೂರು-ಸಂತೇಮರಹಳ್ಳಿ 55 ಕಿ.ಮೀ. ರಸ್ತೆಯನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಘೋಷಣೆ ಮಾಡಲಾಗಿದ್ದರೂ ರಸ್ತೆಗಳು ಮಾತ್ರ ಅಭಿವೃದ್ದಿ ಕಂಡಿಲ್ಲ. ಹೊಸ ತಾಲೂಕು ಹನೂರು ಪಟ್ಟಣದಲ್ಲಿ ‘ತಾಲೂಕು ಪ್ರಜಾಸೌಧ’ ನಿರ್ಮಿಸಲಾಗುವುದು ಎಂದು ಘೋಷಿಸಲಾಗಿತ್ತು. ಪ್ರಜಾಸೌಧಕ್ಕಾಗಿ ಜಾಗ ಗುರುತಿಸಲಾಗಿದೆ. ಆದರೆ, ಇದುವರಗೆ ಶಂಕುಸ್ಧಾಪನೆಯಾಗಿಲ್ಲ.---4ಸಿಎಚ್ಎನ್11ಹನೂರು ತಾಲ್ಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಸಮುದಾಯ ಆರೋಗ್ಯ ಕೇಂದ್ರವನ್ನಾಗಿ ಮೇಲ್ದರ್ಜೆಗೇರಿಸಲು ಗುರುತಿಸಿ ಶಂಕುಸ್ಧಾಪನೆ ಮಾಡಲಾಗಿರುವ ಸ್ಧಳದಲ್ಲಿ ಶಾಸಕ ಎಂ.ಆರ್. ಮಂಜುನಾಥ್ ಮತ್ತು ಅಧಿಕಾರಿವರ್ಗದವರು.
===ಕುಡಿಯುವ ನೀರು ಕೃಷಿ ಪ್ರವಾಸೋದ್ಯಮಕ್ಕೆ ಬೇಕಿದೆ ಆದ್ಯತೆಕನ್ನಡಪ್ರಭ ವಾರ್ತೆ ಚಾಮರಾಜನಗರಕೃಷಿಯೊಂದಿಗೆ ಪರಿಸರ ಮತ್ತು ಧಾರ್ಮಿಕ ಪ್ರವಾಸೋದ್ಯಮವನ್ನು ಬಹುವಾಗಿ ನೆಚ್ಚಿಕೊಂಡಿರುವ ಚಾಮರಾಜನಗರ ಜಿಲ್ಲೆಯ ಜನರ ಚಿತ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾ.6ರಂದು ಮಂಡಿಸಲಿರುವ ರಾಜ್ಯ ಬಜೆಟ್ ಮೇಲೆ ನೆಟ್ಟಿದೆ. ಚಾಮರಾಜನಗರ ಜಿಲ್ಲೆಯಲ್ಲಿ ನಗರ, ಪಟ್ಟಣ, ಗ್ರಾಮಾಂತರ ಭಾಗಗಳಲ್ಲಿ ಇಂದಿಗೂ ಸಮರ್ಪಕವಾಗಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲ. ಜಿಲ್ಲಾ ಕೇಂದ್ರದಲ್ಲೇ ಹದಿನೈದು ದಿನಕ್ಕೊಮ್ಮೆ ನೀರು ಪೂರೈಕೆಯಾಗುತ್ತಿದೆ.
ಇನ್ನೂ ಜಿಲ್ಲಾ ಕೇಂದ್ರ ಸೇರಿದಂತೆ ತಾಲೂಕು ಕೇಂದ್ರಗಳಲ್ಲಿ ಒಳ ಚರಂಡಿ ಹದಗೆಟ್ಟಿದೆ. ಉತ್ತಮ ವ್ಯವಸ್ಥೆ ಇಲ್ಲದ ಪರಿಣಾಮ ಶಿಕ್ಷಣ ಇಲ್ಲದ ಪರಿಣಾಮ ಹಾಗೂ ಗುಣಮಟ್ಟದ ವೈದ್ಯಕೀಯ ಚಿಕಿತ್ಸೆ ಪಡೆಯಲು ನೆರೆಯ ಜಿಲ್ಲೆಗಳ ಮೇಲಿನ ಅವಲಂಬನೆ ತಪ್ಪಿಲ್ಲ. ಆರ್ಥಿಕ ಹಾಗೂ ಸಾಮಾಜಿಕವಾಗಿ ಹಿಂದುಳಿದಿರುವ ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳು ತೆವಳುತ್ತಾ ಸಾಗುತ್ತಿವೆ. ನೆಲದ ಮೂಲನಿವಾಸಿಗಳಾದ ಬುಡಕಟ್ಟು ಸಮುದಾಯಗಳ ದಶಕಗಳ ಬೇಡಿಕೆಗಳು ಈಡೇರಿಲ್ಲ. ಈ ನಿಟ್ಟಿನಲ್ಲಿ ಹಿಂದಿನ ವರ್ಷಗಳಂತೆ ನಿರೀಕ್ಷೆಗಳು ಮುಂದುವರಿದಿವೆ.ಕುಡಿಯವ ನೀರಿಗೆ ಹೆಚ್ಚಿನ ಆದ್ಯತೆ ಬೇಕು:ಜಿಲ್ಲಾ ಕೇಂದ್ರ ಚಾಮರಾಜನಗರಕ್ಕೆ ತಿ.ನರಸೀಪುರದಿಂದ ಕಾವೇರಿ ನೀರು ಪೂರೈಸಲಾಗುತ್ತಿದ್ದರೂ ಸಮರ್ಪಕವಾಗಿ ನೀರು ಸಿಗುತ್ತಿಲ್ಲ. ಕನಿಷ್ಠ 10-15 ದಿನಗಳಿಗೊಮ್ಮೆ ನೀರು ಬರುತ್ತಿದ್ದು, ನಾಗರಿಕರು ಸಂಕಷ್ಟ ಅನುಭವಿಸುತ್ತಿದ್ದಾರೆ. ಪಟ್ಟಣಕ್ಕೆ 2ನೇ ಹಂತದ ಕಾವೇರಿ ಕುಡಿಯುವ ನೀರು ಪೂರೈಸುವ ಮಾಲಂಗಿಯಿಂದ ನಗರಕ್ಕೆ ನೀರು ಸರಬರಾಜು ಮಾಡುವ ₹279 ಕೋಟಿ ವೆಚ್ಚದ ಯೋಜನೆ ಶೀಘ್ರ ಅನುಷ್ಠಾನಗೊಳ್ಳಬೇಕು. ಜಿಲ್ಲಾದ್ಯಂತ ಅಂತರ್ಜಲ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಹೆಚ್ಚಿನ ಆದ್ಯತೆ ನೀಡಬೇಕಿದ್ದು, ಅದರಲ್ಲೂ ಹನೂರು ತಾಲೂಕಿಗೆ ವಿಶೇಷ ಆದ್ಯತೆ ನೀಡಬೇಕಿದೆ.ಕೃಷಿ ಪ್ರವಾಸೋದ್ಯಮ ಜಾರಿಯಾಗಲಿ:ಜಿಲ್ಲೆಯಲ್ಲಿ ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳು, ಹುಲಿ ಸಂರಕ್ಷಿತ ಪ್ರದೇಶಗಳು, ವನ್ಯಜೀವಿ ಧಾಮಗಳು ಹಾಗೂ ಪ್ರವಾಸಿ ತಾಣಗಳಿದ್ದ, ಕಾಡಿನೊಳಗೆ ಪ್ರವಾಸಿಗರ ಹಸ್ತಕ್ಷೇಪ ಜಾಸ್ತಿಯಾಗಿರುವುರಿಂದ ಪ್ರಾಣಿಗಳು ನಾಡಿಗೆ ಬರುವುದು ಹೆಚ್ಚಾಗಿದ್ದು, ಇದನ್ನು ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಕಾಡಿನೊಳಗಿನ ಪ್ರವಾಸೋದ್ಯಮಕ್ಕೆ ಕಡಿವಾಣ ಹಾಕುವ ಮೂಲಕ ಕೃಷಿ ಪ್ರವಾಸೋದ್ಯಮಕ್ಕೆ ವಿಶೇಷ ಪ್ಯಾಕೇಜ್ ಅನ್ನು ನೀಡಬೇಕಿದೆ.ಜಿಲ್ಲೆಯಲ್ಲಿ ಪ್ರವಾಸೋದ್ಯಮ ಕ್ಷೇತ್ರ ನಿರೀಕ್ಷಿತ ಪ್ರಗತಿಯಾಗಿಲ್ಲ. ಪ್ರವಾಸಿತಾಣಗಳಿಗೆ ಸಮರ್ಪಕ ಸಾರಿಗೆ ಸಂಪರ್ಕ, ಕುಡಿಯುವ ನೀರು, ಶೌಚಾಲಯ, ವಾಸ್ತವ್ಯ ಹಾಗೂ ಆತಿಥ್ಯಕ್ಕೆ ವಸತಿಗೃಹ ಹಾಗೂ ಹೋಟೆಲ್‌ಗಳ ಅಲಭ್ಯತೆಯಿಂದ ಪ್ರವಾಸಿಗರನ್ನು ಸೆಳೆಯಲು ವಿಫಲವಾಗಿದ್ದು. ಈ ನಿಟ್ಟಿನಲ್ಲಿ ಪ್ರವಾಸೋದ್ಯಮಕ್ಕೆ ಒತ್ತು ನೀಡಬೇಕಿದೆ.
ಕ್ರೀಡಾಂಗಣಗಳ ಅಭಿವೃದ್ಧಿಯಾಗಬೇಕು:ಚಾಮರಾಜನಗರದ ಜಿಲ್ಲಾ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ವಿಶೇಷ ಅನುದಾನ ನೀಡುವ ಜೊತೆಗೆ ತಾಲೂಕು ಮಟ್ಟದ ಕ್ರೀಡಾಂಗಣಗಳ ಅಭಿವೃದ್ಧಿ ಹನೂರು ಮತ್ತು ಯಳಂದೂರು ತಾಲೂಕಿನಲ್ಲಿ ಕ್ರಿಡಾಂಗಣ ನಿರ್ಮಾಣಕ್ಕಾಗಿ ಸ್ಧಳ ನೀಡಬೇಕಿದೆ.
ಕೈಗಾರಿಕೆ ಸಿಗಬೇಕಿದೆ ಆದ್ಯತೆ:ಚಾಮರಾಜನಗರ ಜಿಲ್ಲೆಯಲ್ಲಿ ಕೈಗಾರಿಕೆಗೆ ಹೆಚ್ಚಿನ ಒತ್ತು ನೀಡದ ಪರಿಣಾಮ ಉದೋಗಕ್ಕಾಗಿ ನೆರೆ ಜಿಲ್ಲೆಗೆ ಜನರು ವಲಸೆ ಹೋಗುತ್ತಿದ್ದು, ಇದನ್ನು ತಪ್ಪಿಸುವ ಸಲುವಾಗಿ ಚಾಮರಾಜನಗರ ಕೈಗಾರಿಕಾ ಪ್ರದೇಶದಲ್ಲಿ ಹೆಚ್ಚಿನ ಕೈಗಾರಿಕೆ ಸ್ಧಾಪನೆ ನಿಟ್ಟಿನಲ್ಲಿ ವಿಶೇಷ ಪ್ಯಾಕೇಜ್ ನೀಡುವ ಮೂಲಕ ತಾಲೂಕು ಕೇಂದ್ರಗಳಿಗೂ ಕೈಗಾರಿಕೆ ವಿಸ್ತರಣೆ ಮಾಡಲು ಮುಂದಾಗಬೇಕಿದೆ.
ಹೊಸ ತಾಲೂಕಿಗೆ ಹೆಚ್ಚಿನ ಕಾಳಜಿ ಬೇಕು:ತಾಲ್ಲೂಕು ಘೋಷಣೆಯಾಗಿ 8 ವರ್ಷ ಕಳೆದರೂ ಇದುವರೆಗೂ ಪೂರ್ಣ ಪ್ರಮಾಣದ ಸರ್ಕಾರಿ ಕಚೇರಿಗಳು ಕಾರ್ಯ ನಿರ್ವಹಿಸುತ್ತಿಲ್ಲ. ಹಾಲಿ ಇರುವ ಸರ್ಕಾರಿ ಕಚೇರಿಗಳು ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿವೆ. ಅರಣ್ಯದಂಚಿನ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯಗಳಿಲ್ಲದ ಪರಿಣಾಮ ಸ್ಥಳಾಂತರಕ್ಕೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕಿದೆ.
ಡಿಸಿಸಿ ಬ್ಯಾಂಕ್, ಅಂಚೆ ಕಚೇರಿ ಬೇಕು:ಚಾಮರಾಜನಗರ ಜಿಲ್ಲಾ ಕೇಂದ್ರವಾಗಿ 28 ವರ್ಷ ಕಳೆಯುತ್ತಾ ಬಂದಿದ್ದರೂ ಇದುವರಗೆ ಜಿಲ್ಲಾ ಸಹಕಾರ ಬ್ಯಾಂಕ್ ಸ್ಧಾಪನೆಯಾಗಿಲ್ಲ. ಜಿಲ್ಲಾ ಮಟ್ಟದ ಅಂಚೆ ಕಚೇರಿಯೂ ಸ್ಧಾಪನೆಯಾಗಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರದ ಅಭಿವೃದ್ಧಿ ನಿಟ್ಟಿನಲ್ಲಿ ಡಿಸಿಸಿ ಬ್ಯಾಂಕ್, ಜಿಲ್ಲಾ ಮಟ್ಟದ ಅಂಚೆ ಕಚೇರಿ ತೆರೆಯಬೇಕಿದೆ.ಜಿಲ್ಲೆಯಲ್ಲಿ ಐದು ತಾಲ್ಲೂಕುಗಳಿದ್ದು, ಕೊಳ್ಳೇಗಾಲ ಉಪ ವಿಭಾಗ ಮಾತ್ರ ಒಂದೇ ಅಸ್ತಿತ್ವದಲ್ಲಿರುವುದರಿಂದ ಚಾಮರಾಜನಗರ, ಗುಂಡ್ಲುಪೇಟೆ ತಾಲೂಕಿನವರು ಸರ್ಕಾರದ ಕೆಲಸ ಕಾರ್ಯಗಳಿಗೆ ಕೊಳ್ಳೇಗಾಲ ಉಪ ವಿಭಾಗ ಕಚೇರಿಗೆ ಅಲೆಯಬೇಕಾಗಿದೆ. ಜಿಲ್ಲಾ ಕೇಂದ್ರ ಚಾಮರಾಜನಗರ ಒಳಗೊಂಡ ಉಪವಿಭಾಗ ರಚನೆ ಮಾಡಿದರೆ ಹೆಚ್ಚು ಅನುಕೂಲವಾಗಲಿದೆ ಎಂಬ ಬೇಡಿಕೆ ಇದೆ.